ಚುನಾವಣಾ ಆಯೋಗದ ನಿರ್ದೇಶನ  ಕಟ್ಟುನಿಟ್ಟಾಗಿ ಪಾಲಿಸಲು ಡಿಸಿ ಸೂಚನೆ
ಕೊಡಗು

ಚುನಾವಣಾ ಆಯೋಗದ ನಿರ್ದೇಶನ ಕಟ್ಟುನಿಟ್ಟಾಗಿ ಪಾಲಿಸಲು ಡಿಸಿ ಸೂಚನೆ

March 29, 2019

ಮಡಿಕೇರಿ: ಲೋಕಸಭಾ ಸಾರ್ವತ್ರಿಕ ಚುನಾವಣೆಯ ಮತದಾನವು ಏಪ್ರಿಲ್ 18 ರಂದು ನಡೆಯಲಿದ್ದು, ಜಿಲ್ಲೆಯ 543 ಮತಗಟ್ಟೆಗಳಿಗೆ ನಿಯೋಜಿಸಿರುವ ವಿವಿಧ ಹಂತದ ಅಧಿಕಾರಿಗಳು ಚುನಾ ವಣಾ ಆಯೋಗದ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಸೂಚಿಸಿದ್ದಾರೆ.

ಲೋಕಸಭಾ ಚುನಾವಣೆ ಹಿನ್ನೆಲೆ ಪಿಆರ್‍ಒ, ಎಪಿಆರ್‍ಒ, 2ನೇ, 3ನೇ ಮತ್ತು 4ನೇ ಮತಗಟ್ಟೆ ಅಧಿಕಾರಿಗಳಿಗೆ ನಗರದ ಸಂತ ಜೋಸೆಫರ ಶಾಲೆ ಹಾಗೂ ವಿರಾಜಪೇ ಟೆಯ ಸಂತ ಅನ್ನಮ್ಮ ಶಾಲೆಯಲ್ಲಿ ಗುರು ವಾರ ಏರ್ಪಡಿಸಿದ್ದ ತರಬೇತಿ ಕಾರ್ಯಕ್ರಮ ದಲ್ಲಿ ಅವರು ಮಾತನಾಡಿದರು.

ಚುನಾವಣೆಯಲ್ಲಿ ಮತಗಟ್ಟೆ ಅಧಿಕಾರಿ ಗಳ ಜವಾಬ್ದಾರಿ ಮಹತ್ತರವಾಗಿದ್ದು, ಮಸ್ಟ ರಿಂಗ್ ದಿನ ಮತ್ತು ಮತಗಟ್ಟೆಗಳಲ್ಲಿ ನಿರ್ವ ಹಿಸಬೇಕಾದ ಕರ್ತವ್ಯ ಮತ್ತು ಡಿಮ ಸ್ಟರಿಂಗ್ ಸಂದರ್ಭದಲ್ಲಿ ಅನುಸರಿಸ ಬೇಕಾದ ಕಾರ್ಯಗಳ ಬಗ್ಗೆ ಜಿಲ್ಲಾಧಿಕಾರಿ ಮಾಹಿತಿ ನೀಡಿದರು.

ವಿದ್ಯುನ್ಮಾನ ಮತಯಂತ್ರಗಳು, ಅಣುಕು ಮತದಾನ, ಅಂಚೆ ಮತಪತ್ರ, ಮಸ್ಟರಿಂಗ್ ಮತ್ತು ಡಿಮಸ್ಟರಿಂಗ್ ಮತ್ತಿತರ ಬಗ್ಗೆ ಹೆಚ್ಚಿನ ನಿಗಾವಹಿಸಬೇಕಿದೆ. ಆ ನಿಟ್ಟಿನಲ್ಲಿ ಎಚ್ಚರಿ ಕೆಯಿಂದ ಕಾರ್ಯ ನಿರ್ವಹಿಸುವಂತೆ ಅನೀಸ್ ಕಣ್ಮಣಿ ಜಾಯ್ ನಿರ್ದೇಶನ ನೀಡಿದರು.

ಮತಗಟ್ಟೆ ಅಧಿಕಾರಿಗಳು ಮತಗಟ್ಟೆ ಕೇಂದ್ರದ ಸಂಪೂರ್ಣ ಜವಾಬ್ದಾರಿ ನೋಡಿ ಕೊಳ್ಳಬೇಕಿದೆ, ಎಲ್ಲಾ ಹಂತದ ಮತಗಟ್ಟೆ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯ ನಿರ್ವಹಿಸಬೇಕು. ಮತದಾರರು ಚುನಾ ವಣಾ ಆಯೋಗ ನೀಡಿರುವ ಮತದಾರರ ಭಾವಚಿತ್ರದ ಗುರುತಿನ ಚೀಟಿ ಅಥವಾ ಚುನಾವಣಾ ಆಯೋಗದ ನಿರ್ದೇಶನ ದಂತೆ ಮತದಾನ ಮಾಡುವುದಕ್ಕೆ ಅವಕಾಶ ನೀಡಬೇಕಿದೆ ಎಂದು ಅವರು ತಿಳಿಸಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಪಿ.ಶಿವರಾಜು ಮಾತನಾಡಿ, ಮಸ್ಟರಿಂಗ್ ದಿನದಂದು ಮತ ಗಟ್ಟೆಯ ಎಲ್ಲಾ ಸಿಬ್ಬಂದಿಗಳು ಕಡ್ಡಾಯ ವಾಗಿ ನಿಗದಿತ ಸಮಯಕ್ಕೆ ಹಾಜರಾಗ ಬೇಕು. ತಮ್ಮ ತಮ್ಮ ಮತಗಟ್ಟೆಗೆ ಸಂಬಂ ಧಿಸಿದ ಸಿಬ್ಬಂದಿಗಳನ್ನು ಸೇರಿಸಿಕೊಂಡು ಪರಸ್ಪರ ಪರಿಚಯ ಮಾಡಿಕೊಳ್ಳಬೇಕು, ಹಾಜರಾತಿ ಪುಸ್ತಕದಲ್ಲಿ ಕಡ್ಡಾಯವಾಗಿ ಸಹಿ ಮಾಡುವುದು. ಯಾವುದೇ ಮತಗಟ್ಟೆ ಅಧಿಕಾರಿ ಇತರೆ ಸಿಬ್ಬಂದಿ ಗೈರು ಆದಲ್ಲಿ ಸಹಾಯಕ ಚುನಾವಣಾಧಿಕಾರಿ ಹಾಗೂ ತಹಶೀಲ್ದಾರರಿಗೆ ತಿಳಿಸುವುದು. ರಜೆ ಹೋದಲ್ಲಿ ಬದಲಿ ವ್ಯವಸ್ಥೆ ಮಾಡಿ ಕೊಳ್ಳುವುದು ಮಸ್ಟರಿಂಗ್ ಪಟ್ಟಿಯಿಂದ ದೃಢಪಡಿಸಿಕೊಳ್ಳಬೇಕು ಎಂದರು.

ಉಪ ವಿಭಾಗಾಧಿಕಾರಿ ಹಾಗೂ ಮಡಿ ಕೇರಿ ವಿಧಾನಸಭಾ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ ಟಿ.ಜವರೇಗೌಡ ಮಾತ ನಾಡಿ, ಮತಗಟ್ಟೆ ಅಧಿಕಾರಿಗಳು ಶಾಂತಿ ಮತ್ತು ನಿಷ್ಪಕ್ಷಪಾತವಾಗಿ ಚುನಾವಣಾ ಕರ್ತವ್ಯ ನಿರ್ವಹಿಸಬೇಕು. ಚುನಾವಣಾ ಅಧಿಕಾರಿಯಿಂದ ಮತದಾನಕ್ಕೆ ಸಂಬಂಧಿ ಸಿದ ಎಲ್ಲಾ ಸಾಮಾಗ್ರಿಗಳನ್ನು ಪಡೆದು ಚುನಾವಣೆ ಕರ್ತವ್ಯ ನಿರ್ವಹಿಸಬೇಕು.

ಮಸ್ಟರಿಂಗ್ ಮತ್ತು ಡಿಮಸ್ಟರಿಂಗ್ ದಿನ ಚುನಾವಣೆಗೆ ಸಂಬಂಧಿಸಿದ ಅಧಿಕಾರಿಗ ಳೊಂದಿಗೆ ಸಮಾಲೋಚನೆ ನಡೆಸಬೇಕು ಎಂದರು. ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ ಶ್ರೀನಿವಾಸ್ ಅವರು ರ್ಯಾಂಡಮೈಸ್ ತಂಡಕ್ಕೆ ಹಂಚಿಕೆ ಮಾಡಿರುವಂತೆ ಮತಗಟ್ಟೆ ಸಂಖ್ಯೆ ಗುರುತಿಸಿಕೊಳ್ಳುವುದು, ತಮ್ಮ ಕಾರ್ಯ ತಂಡ ಸದಸ್ಯರ ಒಗ್ಗೂಡಿಸುವುದು, ಸಾಮಾಗ್ರಿ ವಿತರಿಸುವ ಮಸ್ಟರಿಂಗ್ ಕೌಂಟ ರ್‍ಗೆ ತೆರಳುವುದು ತಂಡದ ಸದಸ್ಯ ರೊಂದಿಗೆ ಮಸ್ಟರಿಂಗ್ ವಿಭಾಗದಿಂದ ವಿವಿಧ ಸಾಮಾಗ್ರಿ ಪಡೆಯುವುದು. ಸಾಮಾಗ್ರಿ ಪಡೆದ ನಂತರ ಮತ್ತೊಮ್ಮೆ ಸಾಮಾಗ್ರಿ ಪರಿಶೀಲಿಸಿಕೊಳ್ಳುವುದು. ಮತಗಟ್ಟೆಗೆ ತಲುಪುವ ವಾಹನ ಗುರುತಿಸಿ ಸ್ಥಳ ಕಾಯ್ದಿರಿಸಿಕೊಳ್ಳುವಂತೆ ಹೇಳಿದರು. ಮಾಸ್ಟರ್ ತರಬೇತಿದಾರರಾದ ವಾಲ್ಟರ್ ಡಿಮೆಲ್ಲೊ ಮತ್ತು ಷಂಶುದ್ದಿನ್ ಅವರು ವಿದ್ಯುನ್ಮಾನ ಮತಯಂತ್ರ, ಅಣಕು ಮತ ದಾನ, ಕಂಟ್ರೋಲ್ ಹಾಗೂ ಬ್ಯಾಲೆಟ್ ಯೂನಿಟ್, ವಿವಿಪ್ಯಾಟ್ ಅಳವಡಿಸು ವುದು. ಮತಗಟ್ಟೆ ಕೇಂದ್ರದಲ್ಲಿ ಮತ ದಾನದಂದು ಪೂರ್ವ ಸಿದ್ಧತೆ ಮಾಡಿ ಕೊಳ್ಳುವ ಬಗ್ಗೆ ಮಾಹಿತಿ ನೀಡಿದರು. ತಹಶೀಲ್ದಾರಾದ ನಟೇಶ್, ಗೋವಿಂದ ರಾಜು ಇತರರು ಇದ್ದರು.

ವಿ.ಪೇಟೆಯಲ್ಲೂ ಅಧಿಕಾರಿಗಳಿಗೆ ತರಬೇತಿ:
ವಿರಾಜಪೇಟೆ: ಲೋಕಸಭಾ ಚುನಾವಣೆಯ ಹಿನ್ನಲೆ ವಿರಾಜಪೇಟೆ ತಾಲೂಕಿನ ಮತಗಟ್ಟೆಗಳ 1,800 ಅಧಿಕಾರಿಗಳಿಗೆ ಪಟ್ಟಣದಲ್ಲಿರುವ ಸಂತ ಅನ್ನಮ್ಮ ವಿದ್ಯಾಸಂಸ್ಥೆಯ ಸಭಾಂಗಣದಲ್ಲಿ ಜಿಲ್ಲಾ ಸಹಾಯಕ ಚುನಾವಣಾಧಿಕಾರಿ ಶ್ರೀನಿವಾಸ್, ಚುನಾವಣಾ ಜಿಲ್ಲಾ ನೋಡಲ್ ಅಧಿಕಾರಿ ಸಂಶುದ್ಧಿನ್ ಹಾಗೂ ಇತರ ಅಧಿಕಾರಿಗಳು ಮೊದಲನೆ ಹಂತದ ತರಬೇತಿ ಕಾರ್ಯಾಗಾರ ನಡೆಸಿದರು.

ಈ ಸಂದರ್ಭ ವಿರಾಜಪೇಟೆ ತಹಶಿಲ್ದಾರ್ ಗೋವಿಂದರಾಜು ಮಾತನಾಡಿ, ತಾಲೂಕಿನ ಮತಗಟ್ಟೆ ಅಧಿಕಾರಿಗಳಿಗೆ ಚುನಾವಣೆ ಸಂಬಂಧ ಮೊದಲನೆಯ ಹಂತದ ತರಬೇತಿಗಾಗಿ ಇಲ್ಲಿನ ಸಭಾಂಗಣ ಸೇರಿ 5 ಕೊಠಡಿಗಳಲ್ಲಿ ತರಬೇತಿ ನೀಡಲಾಗುತ್ತಿದ್ದು, ನಂತರ ಮುಂದಿನ ಏಪ್ರಿಲ್ ತಿಂಗಳ ಮೊದಲ ವಾರದಲ್ಲಿ ಮತಗಟ್ಟೆ ಅಧಿಕಾರಿಗಳಿಗೆ ಎರಡನೆ ಹಂತದ ತರಬೇತಿ ಕಾರ್ಯ ನಡೆಯಲಿದೆ ಎಂದರು. ತರಬೇತಿ ಕಾರ್ಯಾಗಾರದಲ್ಲಿ ಚುನಾವಣಾ ಅಧಿಕಾರಿಗಳು, ಸಿಬ್ಬಂದಿಗಳು ಮುಂತಾದವರು ಭಾಗವಹಿಸಿದ್ದರು.

Translate »