ಮೈಸೂರು ಜಿಲ್ಲಾದ್ಯಂತ ಮಾಸ್ಕ್‍ಡೇ ಆಚರಿಸಲು ಡಿಸಿ ಸೂಚನೆ
ಮೈಸೂರು

ಮೈಸೂರು ಜಿಲ್ಲಾದ್ಯಂತ ಮಾಸ್ಕ್‍ಡೇ ಆಚರಿಸಲು ಡಿಸಿ ಸೂಚನೆ

June 18, 2020

ಮೈಸೂರು, ಜೂ.17- ದೇಶವ್ಯಾಪಿ ಕೊರೊನಾ ತೀವ್ರವಾಗಿ ಹರಡುತ್ತಿರುವ ಹಿನ್ನೆಲೆ ಯಲ್ಲಿ ಸಾರ್ವಜನಿಕÀರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಸರ್ಕಾರದ ಆದೇಶದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ತಾಲೂಕು ಆಡಳಿತದ ಮುಖ್ಯಸ್ಥರು ಜೂ.18ರಂದು `ಮಾಸ್ಕ್‍ಡೇ’ ಆಚರಿಸಬೇಕೆಂದು ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ತಿಳಿಸಿದ್ದಾರೆ. ಕೊರೊನಾ ಸೋಂಕು ಹರಡುವಿಕೆ ತಡೆಗಟ್ಟಲು ಮುಖಗವಸು (ಮಾಸ್ಕ್) ಧರಿಸುವುದು, ಸೋಪಿನಿಂದ ಕೈ ತೊಳೆಯುವುದು, ಸ್ಯಾನಿಟೈಸರ್ ಬಳಕೆ ಮಾಡುವುದು ಹಾಗೂ ದೈಹಿಕ ಅಂತರ ಕಾಯ್ದು ಕೊಳ್ಳುವುದು ಕಡ್ಡಾಯವಾಗಿದೆ. ಈ ಕುರಿತು ಜನಸಮುದಾಯದಲ್ಲಿ ಹೆಚ್ಚಿನ ಜನಜಾಗೃತಿ ಮೂಡಿಸುವ ಮೂಲಕ ರಾಜ್ಯ ಸರ್ಕಾರದ ಆದೇಶವನ್ನು ಪಾಲಿಸಬೇಕಿದೆ ಎಂದು ತಿಳಿಸಿದ್ದಾರೆ. ಮೈಸೂರು ಮಹಾನಗರ ಪಾಲಿಕೆ, ಜಿಲ್ಲಾ ಪಂಚಾಯತಿ, ತಾಲೂಕು ಪಂಚಾಯತಿ, ಗ್ರಾಮ ಪಂಚಾಯತಿ, ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯತಿ ವ್ಯಾಪ್ತಿಯ ವಾರ್ಡ್ ಮತ್ತು ಗ್ರಾಮಗಳಲ್ಲಿ 50 ಜನರು ಮೀರದಂತೆ ಪಾದಯಾತ್ರೆ ಮಾಡುವ ಮೂಲಕ ಜನಸಾಮಾನ್ಯರಲ್ಲಿ ಜಾಗೃತಿ ಮೂಡಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Translate »