ಎಸ್‍ಎಸ್‍ಎಲ್‍ಸಿ ಪರೀಕ್ಷೆ ವ್ಯವಸ್ಥಿತವಾಗಿ ನಡೆಸುವಂತೆ ಡಿಸಿ ಸೂಚನೆ
ಕೊಡಗು

ಎಸ್‍ಎಸ್‍ಎಲ್‍ಸಿ ಪರೀಕ್ಷೆ ವ್ಯವಸ್ಥಿತವಾಗಿ ನಡೆಸುವಂತೆ ಡಿಸಿ ಸೂಚನೆ

July 13, 2021

ಮಡಿಕೇರಿ, ಜು.12- ಇದೇ ಜುಲೈ 19 ಮತ್ತು 22 ರಂದು ನಡೆಯುವ ಎಸ್‍ಎಸ್ ಎಲ್‍ಸಿ ಪರೀಕ್ಷೆಯನ್ನು ವ್ಯವಸ್ಥಿತವಾಗಿ ನಡೆಸಲು ಅಗತ್ಯ ಕ್ರಮ ವಹಿಸುವಂತೆ ಸಂಬಂಧ ಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಸೂಚಿಸಿದರು.

ತಮ್ಮ ಕಚೇರಿ ಸಭಾಂಗಣದಲ್ಲಿ ಇಂದು ಎಸ್‍ಎಸ್‍ಎಲ್‍ಸಿ ಪರೀಕ್ಷಾ ಸಿದ್ಧತೆ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದು ಮಾತ ನಾಡಿದ ಅವರು, ಎಸ್‍ಎಸ್‍ಎಲ್‍ಸಿ ಪರೀಕ್ಷೆಗೆ ಸಂಬಂಧಿಸಿದಂತೆ ಯಾವುದೇ ರೀತಿಯ ಗೊಂದಲಕ್ಕೆ ಅವಕಾಶವಿಲ್ಲದೆ ವ್ಯವಸ್ಥಿತ ವಾಗಿ ಪರೀಕ್ಷೆ ನಡೆಸಬೇಕು ಎಂದರು.
ಪರೀಕ್ಷಾ ದಿನದಂದು ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರ ಪ್ರವೇಶಿಸುವಾಗ ಥರ್ಮಲ್ ಸ್ಕ್ಯಾನರ್, ಪಲ್ಸ್ ಆಕ್ಸಿಮೀಟರ್ ಮೂಲಕ ಪರೀಕ್ಷೆ ಮಾಡುವುದು, ಸ್ಯಾನಿಟೈಸರ್, ಮಾಸ್ಕ್ ಬಳಕೆ ಬಗ್ಗೆ ನಿಗಾ ವಹಿಸುವಂತೆ ಹಾಗೂ ಕೋವಿಡ್ ನಿಯಮ ಚಾಚೂತಪ್ಪದೆ ಪಾಲಿಸು ವಂತೆ ತಿಳಿಸಿದರಲ್ಲದೆ, ಈಗಾಗಲೇ ಹೋಂ ಕ್ವಾರಂಟೈನ್‍ನಲ್ಲಿರುವ ವಿದ್ಯಾರ್ಥಿಗಳ ಮಾಹಿತಿ ಒದಗಿಸಲು ಸೂಚಿಸಿದರು.

ಪ್ರತೀ ತಾಲೂಕಿಗೆ ಆಂಬುಲೆನ್ಸ್ ಹಾಗೂ ವೈದ್ಯಕೀಯ ತಂಡ ನೇಮಿಸುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ ಜಿಲ್ಲಾಧಿ ಕಾರಿ, ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷಾ ಪೂರ್ವ ಹಾಗೂ ನಂತರ ಸ್ಯಾನಿಟೈ ಸಿಂಗ್‍ಗೆ ಸ್ಥಳೀಯ ಸಂಸ್ಥೆಗಳು ಅಗತ್ಯ ಕ್ರಮ ವಹಿಸಬೇಕು. ಸಾರ್ವಜನಿಕ ಶಿಕ್ಷಣ ಇಲಾಖೆ ಹೊರಡಿಸಿರುವ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ತಿಳಿಸಿದರು.

ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಶ್ರೀಧರನ್ ಮಾಹಿತಿ ನೀಡಿ, ಜಿಲ್ಲೆಯಲ್ಲಿ 6,906 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಇವರಲ್ಲಿ 3,462 ಬಾಲ ಕರು ಹಾಗೂ 3,384 ಬಾಲಕಿಯರಿದ್ದಾರೆ. ಮಡಿಕೇರಿ ತಾಲೂಕಿನಲ್ಲಿ 2041, ಸೋಮ ವಾರಪೇಟೆ -2,703 ಹಾಗೂ ವಿರಾಜ ಪೇಟೆ ತಾಲೂಕಿನಲ್ಲಿ 2,162 ವಿದ್ಯಾರ್ಥಿ ಗಳು ಪರೀಕ್ಷೆ ಬರೆಯಲಿದ್ದಾರೆ ಎಂದರು.

ಜಿಲ್ಲೆಯಲ್ಲಿ 41 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದ್ದು, ಮಡಿಕೇರಿಯಲ್ಲಿ 13, ಸೋಮವಾರಪೇಟೆ ತಾಲೂಕಿನಲ್ಲಿ 17 ಹಾಗೂ ವಿರಾಜಪೇಟೆ ತಾಲೂಕಿನಲ್ಲಿ 11 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ. 1 ಕೊಠಡಿಯಲ್ಲಿ 12 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಪರೀಕ್ಷಾ ಕೇಂದ್ರ ಗಳಿಗೆ 1,352 ಮಂದಿ ಸಿಬ್ಬಂದಿ ನಿಯೋ ಜಿಸಲಾಗಿದೆ. ಇವರು ಪ್ರಥಮ ಹಂತದ ಲಸಿಕೆ ಪಡೆದಿದ್ದಾರೆ ಎಂದು ವಿವರಿಸಿದರು.
ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್‍ನಿಂದ ಮಾಸ್ಕ್ ವಿತರಿಸಲಾಗುತ್ತದೆ. ಹಾಗೆಯೇ ಜು.15 ಮತ್ತು 17 ರಂದು ಎಸ್‍ಎಸ್‍ಎಲ್‍ಸಿ ಪರೀಕ್ಷಾ ಪೂರ್ವದ ಅಣುಕು ಪರೀಕ್ಷೆ ವ್ಯವಸ್ಥೆ ಬಗ್ಗೆ ಮಾಹಿತಿ ನೀಡಲಾಗುತ್ತದೆ. ವಿದ್ಯಾರ್ಥಿ ಗಳು ಪರೀಕ್ಷೆಗೆ ಸಂಬಂಧಿಸಿದಂತೆ ಯಾವುದೇ ಸಂಶಯವಿದ್ದಲ್ಲಿ ಪರಿಹರಿಸಿ ಕೊಳ್ಳಬಹುದು ಎಂದರು.

ಹೆಚ್ಚುವರಿ ಜಿಲ್ಲಾಧಿಕಾರಿ ರಾಜು ಮೊಗ ವೀರ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಕೆ. ಮೋಹನ್ ಮಾತನಾಡಿದರು. ಸ್ಕೌಟ್ಸ್ ಮತ್ತು ಗೈಡ್ಸ್‍ನ ಜಿಮ್ಮಿ ಸೀಕ್ಕ್ವೇರ ಅವರು ಸ್ಕೌಟ್ಸ್ ಮತ್ತು ಗೈಡ್ಸ್‍ನಿಂದ ನೀಡಿರುವ 7 ಸಾವಿರ ಮಾಸ್ಕ್ ಅನ್ನು ಜಿಲ್ಲಾಧಿಕಾರಿ ಮೂಲಕ ಕ್ಷೇತ್ರ ಶಿಕ್ಷಣಾಧಿಕಾರಿಗೆ ಹಸ್ತಾಂತರಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾ ಮಿಶ್ರಾ, ಜಿಪಂ ಉಪ ಕಾರ್ಯದರ್ಶಿ ಲಕ್ಷ್ಮಿ, ಜಿಲ್ಲಾ ಪರೀಕ್ಷಾ ನೋಡಲ್ ಅಧಿಕಾರಿ ಕೆ.ಕಾಂತರಾಜು, ಕ್ಷೇತ್ರ ಶಿಕ್ಷಣಾಧಿಕಾರಿ ಯಾದ ಶ್ರಿಶೈಲ ಬೀಳಗಿ, ಹೆಚ್.ಕೆ.ಪಾಂಡು, ಗುರುರಾಜ್, ಪರೀಕ್ಷಾ ಕೇಂದ್ರಗಳ ಮೇಲ್ವಿಚಾರ ಕರು, ಮುಖ್ಯೋಪಾಧ್ಯಾಯರು ಇತರರಿದ್ದರು.

Translate »