ಉದ್ಯಮ ಸಂಸ್ಥೆಗಳ ಪಟ್ಟಿ ಸಿದ್ಧಪಡಿಸಲು ಡಿಸಿ ಸೂಚನೆ
ಹಾಸನ

ಉದ್ಯಮ ಸಂಸ್ಥೆಗಳ ಪಟ್ಟಿ ಸಿದ್ಧಪಡಿಸಲು ಡಿಸಿ ಸೂಚನೆ

June 24, 2019

ಹಾಸನ, ಜೂ.23- ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿರುವ ಸರ್ಕಾರಿ ಮತ್ತು ಖಾಸಗಿ ಕ್ಷೇತ್ರದ, ಸಂಘ ಟಿತ ಮತ್ತು ಅಸಂಘಟಿತ ವಲಯದ, ವಿವಿಧ ಆರ್ಥಿಕ ಚಟುವಟಿಕೆಗಳನ್ನು ಹೊಂದಿರುವ ಉದ್ಯಮಗಳ ಪಟ್ಟಿಯನ್ನು ಶೀಘ್ರ ಸಿದ್ಧಪಡಿಸುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಅಕ್ರಂ ಪಾಷ ಸೂಚಿಸಿದ್ದಾರೆ.

ಡಿಸಿ ಕಚೇರಿ ಸಭಾಂಗಣದಲ್ಲಿ ನಡೆದ 7ನೇ ಆರ್ಥಿಕ ಗಣತಿಯ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯಲ್ಲಿ ಮಾತ ನಾಡಿದ ಅವರು, ಕೇಂದ್ರ ಸರ್ಕಾರದ ಸಾಂಖ್ಯಿಕ ಮತ್ತು ಕಾರ್ಯಕ್ರಮ ಅನು ಷ್ಠಾನ ಸಚಿವಾಲಯದ ಮಾರ್ಗದರ್ಶನ ದಡಿ ಈ ಕಾರ್ಯ ಕೈಗೊಳ್ಳಬೇಕಿದೆ. ಕೃಷಿ ಮತ್ತು ತೋಟಗಾರಿಕೆ ಉತ್ಪಾದನೆ ಹೊರತು ಪಡಿಸಿ ಕೃಷಿ ಉತ್ಪನ್ನಗಳ ಸಂಸ್ಕರಣೆ, ಗಣಿ ಗಾರಿಕೆ, ಸಗಟು ಮತ್ತು ಚಿಲ್ಲರೆ ಮಾರಾಟ ಹಾಗೂ ಸೇವಾ ವಲಯ, ಕೋಳಿ, ಕುರಿ ಮತ್ತಿತರ ಜಾನುವಾರು ಸಾಕಣೆ ಸಂಸ್ಥೆಗಳ ಗಣತಿಯನ್ನು ಅತ್ಯಂತ ನಿಖರವಾಗಿ ನಡೆಸಬೇಕು ಎಂದರು.

ಈ 7ನೇ ಆರ್ಥಿಕ ಗಣತಿಯನ್ನು ಪ್ರಥಮ ಬಾರಿಗೆ ಮೊಬೈಲ್ ಆ್ಯಪ್ ಮೂಲಕ ನಿರ್ವಹಿಸಲಾಗುವುದು. ಅದ ಕ್ಕಾಗಿಯೇ ಪ್ರತ್ಯೇಕ ಆ್ಯಪ್ ರೂಪಿಸಲಾಗಿದೆ. ಜಿಲ್ಲೆಯಲ್ಲಿ ಸಮೀ ಕ್ಷೆಗೆ ಅಗತ್ಯವಾದ ಸಿಬ್ಬಂದಿಗಳನ್ನು ಸ್ಥಳೀಯವಾಗಿಯೇ ನೇಮಿಸಿಕೊಂಡು ತರಬೇತಿ ನೀಡಿ ಎಂದು ಸೂಚಿಸಿದರು.

ಜಿಪಂ ಸಿಇಒ ವಿಜಯಪ್ರಕಾಶ್ ಮಾತನಾಡಿ, ಗÀಣತಿ ಪೂರ್ವಭಾವಿ ಸಿದ್ಧತೆಗಳಿಗೆ ಅಗತ್ಯವಾದ ನಗರ/ಗ್ರಾಮಗಳ ಪಟ್ಟಿಗಳನ್ನು ಸಂಬಂಧ ಪಟ್ಟ ಇಲಾಖೆಗಳಿಂದ ಪಡೆದು ಸಂಸ್ಥೆಗೆ ಒದಗಿಸಬೇಕು. ಈ ಪ್ರದೇಶಗಳಲ್ಲಿ ವಾರ್ಡ್ ಸರಹದ್ದು ಗುರುತಿಸುವಲ್ಲಿ ಕಂದಾಯ ಇಲಾಖೆ ನೆರವು ಪಡೆಯಬೇಕು. ಜಿಲ್ಲಾ ಮಟ್ಟದ ಸಮಿತಿಯ ಅಧಿಕಾರಿಗಳು ಗ್ರಾಮ ಮಟ್ಟದ ಸಿಬ್ಬಂದಿಗೆ ಸೂಕ್ತ ನಿರ್ದೇಶನ ನೀಡಿ, ಯಾವುದೇ ಉದ್ಯಮ ಚಟುವಟಿಕೆ ಗಣತಿಯಲ್ಲಿ ಕೈಬಿಟ್ಟು ಹೋಗದಂತೆ ನಿಗಾ ಇಡಬೇಕು ಎಂದು ತಿಳಿಸಿದರು.
ಜಿಪಂ ಮುಖ್ಯ ಯೋಜನಾಧಿಕಾರಿ ಪರಪ್ಪಸ್ವಾಮಿ, ನಗರ, ಗ್ರಾಮೀಣ ಪ್ರದೇಶ ಗಳಲ್ಲಿ ಬ್ಲಾಕ್ ರಚಿಸಿಕೊಂಡರೆ ಪೂರ್ಣ ಮಾಹಿತಿ ಪಡೆದುಕೊಳ್ಳಬಹುದು ಎಂದು ಸಲಹೆ ನೀಡಿದರು.

ಎಡಿಸಿ ಎಂ.ಎಲ್.ವೈಶಾಲಿ, ಜಿಲ್ಲಾ ಸಾಂಖ್ಯಿಕ ಅಧಿಕಾರಿ ಗಂಗಪ್ಪ, ವಿವಿಧ ಇಲಾಖೆ ಅಧಿಕಾರಿಗಳು ಸಭೆಯಲ್ಲಿದ್ದರು.

ನಿರ್ಲಕ್ಷ್ಯ ತೋರಿದರೆ ನಿರ್ದಾಕ್ಷಿಣ್ಯ ಕ್ರಮ: ಅಂಬುಲೆನ್ಸ್ ಸಿಬ್ಬಂದಿಗೆ ಡಿಸಿ ಎಚ್ಚರಿಕೆ
ಹಾಸನ: ಜಿಲ್ಲೆಯಲ್ಲಿ (108) ಆಂಬುಲೆನ್ಸ್ ಸಿಬ್ಬಂದಿ ನಿರ್ಲಕ್ಷ್ಯದಿಂದಾಗಿ ಅನೇಕ ಜೀವಹಾನಿ ಹಾಗೂ ಗಂಭೀರ ಸ್ವರೂಪದ ಸಮಸ್ಯೆಗಳು ಎದುರಾಗುತ್ತಿವೆ. ಇದೇ ಪರಿಸ್ಥಿತಿ ಮುಂದುವರೆದರೆ ಆಂಬುಲೆನ್ಸ್ ಸಿಬ್ಬಂದಿ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಅಕ್ರಂ ಪಾಷಾ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದ್ದಾರೆ.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇತ್ತೀಚೆಗೆ ನಡೆದ ಶಿಶು ಮತ್ತು ತಾಯಂದಿರ ಮರಣ ಕುರಿತು ಜಿಲ್ಲಾ ಮಟ್ಟದ ಅಧಿಕಾರಿಗಳ ಸಮನ್ವಯ ಸಮಿತಿ ಸಭೆಯಲ್ಲಿ ನವ ಜಾತ ಶಿಶು ಮತ್ತು ಗರ್ಭಿಣಿ/ಬಾಣಂತಿಯರ ಸಾವಿನ ಅಂಕಿ ಅಂಶಗಳನ್ನು ಗಮನಿಸಿದ ಅವರು ಕಳವಳ ವ್ಯಕ್ತಪಡಿಸಿದರು. ಬಹುತೇಕ ಪ್ರಕರಣಗಳಲ್ಲಿನ ಸಾವಿಗೆ ಆಂಬುಲೆನ್ಸ್ ತಡವಾಗಿ ತಲುಪಿದ್ದು ಕೂಡ ಒಂದು ಪ್ರಮುಖ ಕಾರಣ ಎನಿಸಿದೆ. ಮುಂದಿನ ದಿನಗಳಲ್ಲಿ ಇಂಥ ಲೋಪ ಕಂಡುಬಂದರೆ ಆಂಬುಲೆನ್ಸ್ ಸಿಬ್ಬಂದಿ ಹಾಗೂ ವ್ಯವಸ್ಥೆಯ ನಿರ್ವಾಹಕರನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.

ಆಂಬುಲೆನ್ಸ್‍ಗಳು ರೋಗಿಗಳನ್ನು ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಬೇಕು. ಖಾಸಗಿ ಆಸ್ಪತ್ರೆಗಳಿಗೆ ನೇರವಾಗಿ ಕರೆದೊಯ್ಯುವಂತಿಲ್ಲ. ಜೀವ, ಸಮಯದ ಪ್ರಾಮುಖ್ಯತೆ ಅರಿತು ಕೆಲಸ ಮಾಡಬೇಕು. ಆರೋಗ್ಯ ಇಲಾಖೆಯಿಂದ ಆಂಬುಲೆನ್ಸ್ ಚಾಲಕರಿಗೆ ಈ ಬಗ್ಗೆ ತರಬೇತಿ ಕಾರ್ಯಗಾರ ನಡೆಸಬೇಕು ಎಂದರು.

ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ಸತೀಶ್, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಕೃಷ್ಣಮೂರ್ತಿ, ಆರ್‍ಸಿಹೆಚ್ ಡಾ.ಜನಾರ್ದನ್, ಡಾ.ನಾಗೇಶ್ ಆರಾಧ್ಯ, ಡಾ.ರಾಜಗೋಪಾಲ್ ಹಾಗೂ ತಾಲೂಕು ವೈದ್ಯಾಧಿಕಾರಿಗಳು ಸಭೆಯಲ್ಲಿದ್ದರು.

Translate »