ಕೊರೊನಾ ಪರಿಣಾಮಕಾರಿ ತಡೆಗೆ ಡಿಸಿ ಸೂಚನೆ
ಚಾಮರಾಜನಗರ

ಕೊರೊನಾ ಪರಿಣಾಮಕಾರಿ ತಡೆಗೆ ಡಿಸಿ ಸೂಚನೆ

May 3, 2021

ಚಾಮರಾಜನಗರ, ಮೇ 2-ಜಿಲ್ಲೆಯಲ್ಲಿ ಕೋವಿಡ್ ಸೋಂಕು ಪ್ರಕರಣಗಳು ವ್ಯಾಪಿಸ ದಂತೆ ತಡೆಯುವ ನಿಟ್ಟಿನಲ್ಲಿ ಮುಂಜಾ ಗ್ರತಾ ಕ್ರಮಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸುವಂತೆ ಜಿಲ್ಲಾಧಿಕಾರಿ ಡಾ. ಎಂ.ಆರ್.ರವಿ ಸೂಚಿಸಿದ್ದಾರೆ.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣ ದಲ್ಲಿಂದು ಕೋವಿಡ್ ನಿಯಂತ್ರಣ ಹಾಗೂ ಕೋವಿಡ್ ಕೇರ್ ಕೇಂದ್ರಗಳ ನಿರ್ವಹಣೆ ಸಂಬಂಧ ನಡೆದ ಜಿಲ್ಲೆಯ ಹಿರಿಯ ಆರೋಗ್ಯಾಧಿಕಾರಿ-ವೈದ್ಯಾಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.

ಹೆಚ್ಚುತ್ತಿರುವ ಕೊರೊನಾ ಪ್ರಕರಣ ಗಳನ್ನು ನಿಯಂತ್ರಿಸುವ ಸಂಬಂಧ ಇನ್ನಷ್ಟು ಪರಿಣಾಮಕಾರಿ ಕ್ರಮಗಳಿಗೆ ಮುಂದಾಗ ಬೇಕು. ವೈದ್ಯರ ನಿಯೋಜನೆ, ಆರೋಗ್ಯ ಸಿಬ್ಬಂದಿ ನೇಮಕವನ್ನು ಸುವ್ಯಸ್ಥಿತವಾಗಿ ಕೈಗೊಳ್ಳಬೇಕು. ಮುನ್ನೆಚ್ಚರಿಕೆ ಕ್ರಮಗಳನ್ನು ತೀವ್ರಗೊಳಿ ಸಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಜಿಲ್ಲೆಗೆ ಪೂರೈಕೆಯಾಗುತ್ತಿರುವ ಆಮ್ಲ ಜನಕವನ್ನು ಸಮರ್ಪಕವಾಗಿ ನಿರ್ವಹಿಸ ಬೇಕು. ಸೋಂಕಿತರ ಔಷಧೋಪಚಾರದಲ್ಲಿ ದೂರುಗಳು ಬರಬಾರದು. ಕೋವಿಡ್ ಆಸ್ಪತ್ರೆಯಲ್ಲಿರುವ ಅಗತ್ಯ ವ್ಯವಸ್ಥೆ ಬಳಸಿ ಕೊಂಡು ಸೋಂಕಿತರಿಗೆ ಉತ್ತಮ ಚಿಕಿತ್ಸೆ ನೀಡಬೇಕು ಎಂದು ಸಲಹೆ ನೀಡಿದರು.
ವೈದ್ಯರು, ಆರೋಗ್ಯ ಸಿಬ್ಬಂದಿ ನಿಯೋಜನೆ ಸಂಬಂಧ ಇದೇ ವೇಳೆ ಚರ್ಚಿಸಲಾಯಿತು.

ಸಭೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಎಸ್.ಕಾತ್ಯಾಯಿನಿದೇವಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಂ.ಆರ್.ರವಿ, ವೈದ್ಯಕೀಯ ಕಾಲೇಜು ನಿರ್ದೇಶಕರು ಹಾಗೂ ಡೀನ್ ಡಾ.ಸಂಜೀವ್, ಜಿಲ್ಲಾಸ್ಪತ್ರೆ ಜಿಲ್ಲಾ ಸರ್ಜನ್ ಮುರುಗೇಶ್, ಜಿಲ್ಲಾ ಸರ್ವೇಲೆನ್ಸ್ ಅಧಿಕಾರಿ ಡಾ.ನಾಗರಾಜು, ಜಿಲ್ಲಾಸ್ಪತ್ರೆ ಸ್ಥಾನಿಕ ವೈದ್ಯಾಧಿಕಾರಿ ಡಾ.ಕೃಷ್ಣ ಪ್ರಸಾದ್, ತಜ್ಞರಾದ ಡಾ.ರಮೇಶ್, ಡಾ.ಮಹೇಶ್, ಇತರೆ ವೈದ್ಯಾಧಿಕಾರಿಗಳು ಹಾಜರಿದ್ದರು.

Translate »