ಗ್ರಾಮೀಣ ಭಾಗÀಗಳಲ್ಲಿ ಕೋವಿಡ್ ಜಾಗೃತಿಗೆ ಡಿಸಿ ಸೂಚನೆ
ಚಾಮರಾಜನಗರ

ಗ್ರಾಮೀಣ ಭಾಗÀಗಳಲ್ಲಿ ಕೋವಿಡ್ ಜಾಗೃತಿಗೆ ಡಿಸಿ ಸೂಚನೆ

April 26, 2021

ಚಾಮರಾಜನಗರ, ಏ.25-ಜಿಲ್ಲೆಯ ಗ್ರಾಮಾಂತರ ಪ್ರದೇಶಗಳಲ್ಲಿಯೂ ಕೋವಿಡ್ ಸೋಂಕು ವ್ಯಾಪಿಸುತ್ತಿರುವ ಹಿನ್ನೆಲೆಯಲ್ಲಿ ಗ್ರಾಮಗಳಿಗೆ ಭೇಟಿ ನೀಡಿ, ಜಾಗೃತಿ ಮೂಡಿ ಸುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಸೂಚಿಸಿದರು.

ಗುಂಡ್ಲುಪೇಟೆ ತಾಲೂಕಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿ, ಕೋವಿಡ್ ನಿರ್ವಹಣೆ ಸಂಬಂಧ ಅನುಷ್ಠಾನ ಕ್ರಮಗಳ ಪರಿಶೀಲಿ ಸಿದರಲ್ಲದೆ, ನಗರದ ಪ್ರವಾಸಿಮಂದಿರದಲ್ಲಿ ಕೋವಿಡ್ ನಿಯಂತ್ರಣ ಕುರಿತು ತಾಲೂಕು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.
ಆರಂಭದಲ್ಲಿ ಪಟ್ಟಣ ನಗರ, ಪ್ರದೇಶ ಗಳಲ್ಲಿ ಹೆಚ್ಚು ಕಾಣಿಸಿಕೊಳ್ಳುತ್ತಿದ್ದ ಕೋವಿಡ್ ಸೋಂಕು ಪ್ರಕರಣಗಳು ಇತ್ತೀಚೆಗೆ ಗ್ರಾಮೀಣ ಭಾಗದಲ್ಲಿಯೂ ವ್ಯಾಪಕವಾಗಿ ವರದಿಯಾಗುತ್ತಿವೆ. ಹೀಗಾಗಿ ಗ್ರಾಮಾಂತರ ಪ್ರದೇಶಗಳಿಗೆ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು, ತಾಲೂಕು ಆರೋಗ್ಯ ಅಧಿಕಾರಿಗಳು, ಪಂಚಾ ಯತ್ ಅಭಿವೃದ್ಧಿ ಅಧಿಕಾರಿಗಳೊಂದಿಗೆ ಭೇಟಿ ನೀಡಿ, ಸ್ಥಳೀಯ ಗ್ರಾಪಂ ಪ್ರತಿನಿಧಿ ಗಳ ಸಹಯೋಗದಲ್ಲಿ ಜನರಲ್ಲಿ ಕೋವಿಡ್ ನಿಯಂತ್ರಣ ಕುರಿತು ವಹಿಸಬೇಕಿರುವ ಮುಂಜಾಗ್ರತಾ ಕ್ರಮಗಳ ಬಗ್ಗೆ ಅರಿವು ಮೂಡಿಸಬೇಕು ಎಂದು ತಿಳಿಸಿದರು.

ಕಡ್ಡಾಯವಾಗಿ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡಿಕೊಳ್ಳುವ ಕುರಿತು ಗ್ರಾಮಾಂತರ ಭಾಗಗಳಲ್ಲಿ ಹೆಚ್ಚು ತಿಳಿವಳಿಕೆ ನೀಡಬೇಕು. ಕೋವಿಡ್ ನಿಯಮ ಉಲ್ಲಂಘಿಸುವವರ ವಿರುದ್ಧ ದಂಡ, ಕಾನೂನು ಕ್ರಮ ಜರುಗಿಬೇಕು ಎಂದು ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು.
ಸೋಂಕಿತರು ಪ್ರಾಥಮಿಕ ಸಂಪರ್ಕಿತ ರೆಂದು ಗುರುತಿಸುವವರನ್ನು ತಡ ಮಾಡದೇ ಗಂಟಲು ಮಾದರಿ ದ್ರವ ಸಂಗ್ರಹಿಸಿ ಕೋವಿಡ್ ಪರೀಕ್ಷೆಗೆ ಒಳಪಡಿಸಬೇಕು. ಗ್ರಾಮಾಂತರ ಪ್ರದೇಶಗಳಲ್ಲಿ ಸಂಪರ್ಕಿತರನ್ನು ಕರೆತರಲು ವಾಹನಗಳನ್ನು ಬಳಸಿಕೊಳ್ಳಿ. ಇದಕ್ಕಾಗಿ ಪ್ರತಿ ತಾಲೂಕಿಗೂ ಪ್ರತ್ಯೇಕ ವಾಹನಗಳನ್ನು ನಿಯೋಜಿಸಬೇಕು ಎಂದು ಸಲಹೆ ನೀಡಿದರು.

ಕೋವಿಡ್ ಲಕ್ಷಣ ಕಾಣಿಸಿಕೊಂಡವರನ್ನು ಕೂಡಲೇ ಸರ್ಕಾರಿ ಆಸ್ಪತ್ರೆಗಳಿಗೆ ಕಳುಹಿಸಲು ಶಿಫಾರಸ್ಸು ಮಾಡಬೇಕು. ಈ ಬಗ್ಗೆ ಖಾಸಗಿ ಕ್ಲಿನಿಕ್‍ಗಳ ವೈದ್ಯರಿಗೂ ಸೂಕ್ತ ಮಾರ್ಗ ದರ್ಶನ ನೀಡಬೇಕು. ರೋಗಲಕ್ಷಣ ಹೊಂದಿರುವವರನ್ನು ಆರಂಭದಲ್ಲಿಯೇ ಆಸ್ಪತ್ರೆಗಳಿಗೆ ಕಳುಹಿಸಿ, ತಪಾಸಣೆ ನಡೆಸುವು ದರಿಂದ ಆರೋಗ್ಯ ಪರಿಸ್ಥಿತಿ ಗಂಭೀರಗೊಂಡ ಬಳಿಕ ಎದುರಾಗುವ ಅಪಾಯ ತಪ್ಪಿಸಿ ಸೂಕ್ತ ಚಿಕಿತ್ಸೆ ನೀಡಲು ಸಾಧ್ಯ ಎಂದ ಜಿಲ್ಲಾಧಿ ಕಾರಿ, ಸೋಂಕಿತರ ಆರೈಕೆ ಬಗ್ಗೆ ನಿರ್ಲಕ್ಷ್ಯ ವಹಿಸಬಾರದು ಎಂದು ತಾಕೀತು ಮಾಡಿದರು.

ಕೋವಿಡ್ ಲಸಿಕೆಯನ್ನು ಅದಷ್ಟು ಆಯಾ ಭಾಗದಲ್ಲೇ ಜನತೆ ಪಡೆದುಕೊಳ್ಳಲು ಅನುಕೂಲ ಕಲ್ಪಿಸಬೇಕಿದೆ. ಪಟ್ಟಣ, ನಗರ ಪ್ರದೇಶಗಳಲ್ಲಿ ಈಗಾಗಲೇ ಇರುವ ಲಸಿಕಾ ಕೇಂದ್ರಗಳ ಜೊತೆಗೆ ಹೆಚ್ಚುವರಿಯಾಗಿ ಇನ್ನಷ್ಟು ಲಸಿಕಾ ಕೇಂದ್ರಗಳನ್ನು ತೆರೆಯಬೇಕು ಎಂದರು.
ಇದೇ ವೇಳೆ ಹಂಗಳದಲ್ಲಿ ಕುಡಿಯುವ ನೀರಿನ ಅಭಾವ ನೀಗಿಸಲು ತಕ್ಷಣವೇ ಕ್ರಮ ಕೈಕೊಳ್ಳಬೇಕು. ಶಾಶ್ವತ ಪರಿಹಾರಕ್ಕೆ ಕಾರ್ಯ ಪ್ರವೃತ್ತರಾಗಬೇಕು ಎಂದು ತಾಪಂ ಕಾರ್ಯ ನಿರ್ವಾಹಕ ಅಧಿಕಾರಿಗೆ ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಸೂಚಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಂ.ಆರ್.ರವಿ, ಜಿಲ್ಲಾ ಸರ್ವೇಲೆನ್ಸ್ ಅಧಿಕಾರಿ ಡಾ.ನಾಗರಾಜು, ತಹಸೀಲ್ದಾರ್ ಸಿ.ಜಿ.ರವಿಶಂಕರ್, ತಾಲೂಕು ಆರೋಗ್ಯಾಧಿಕಾರಿ ಡಾ.ಎಂ.ಎಸ್.ರವಿಕುಮಾರ್, ಪೊಲೀಸ್ ಇನ್ಸ್‍ಪೆಕ್ಟರ್ ಮಹದೇವಸ್ವಾಮಿ, ಸಬ್‍ಇನ್ಸ್‍ಪೆಕ್ಟರ್ ಜೆ.ರಾಜೇಂದ್ರ, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಶ್ರೀಕಂಠರಾಜೇ ಅರಸ್, ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಲಿಂಗರಾಜು, ಇತರೆ ಅಧಿಕಾರಿಗಳು ಸಭೆಯಲ್ಲಿದ್ದರು.

Translate »