ಮಾದರಿ ನೀತಿ ಸಂಹಿತೆ ಪಾಲಿಸಲು ಡಿಸಿ ಸೂಚನೆ

ಮಡಿಕೇರಿ: ಲೋಕಸಭೆ ಚುನಾ ವಣೆ ಹಿನ್ನೆಲೆ ಚುನಾವಣಾ ಆಯೋಗದ ನಿರ್ದೇಶನದಂತೆ ಮಾದರಿ ನೀತಿ ಸಂಹಿತೆ ಯನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಜಿಲ್ಲಾ ಧಿಕಾರಿ ಅನೀಸ್ ಕಣ್ಮಣಿ ಜಾಯ್ ತಿಳಿಸಿದ್ದಾರೆ.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂ ಗಣದಲ್ಲಿ ರಾಜಕೀಯ ಪಕ್ಷಗಳ ಮುಖಂಡ ರೊಂದಿಗೆ ಮಂಗಳವಾರ ನಡೆದ ಸಭೆ ಯಲ್ಲಿ ಅವರು ಮಾತನಾಡಿದರು. ಚುನಾ ವಣಾ ಆಯೋಗವು ಮಾದರಿ ನೀತಿ ಸಂಹಿತೆ ಪಾಲಿಸುವ ಸಂಬಂಧ ಹಲವು ನಿರ್ದೇ ಶನಗಳನ್ನು ನೀಡಿದೆ. ಅದನ್ನು ಚಾಚು ತಪ್ಪದೇ ಪಾಲಿಸಬೇಕು ಎಂದರು. ಸಾರ್ವಜನಿಕ ಸ್ಥಳಗಳಲ್ಲಿ ಪೋಸ್ಟರ್ಸ್ ಮತ್ತು ಬ್ಯಾನರ್ಸ್ ಅಳವಡಿಸಬಾರದು. ಅಳವಡಿಸಬೇಕಿದ್ದಲ್ಲಿ ಅನುಮತಿ ಪಡೆಯಬೇಕು. ಚುನಾವಣೆಗೆ ಸಂಬಂಧಿಸಿದಂತೆ ಯಾವುದೇ ಕರಪತ್ರ, ಪೋಸ್ಟರ್ಸ್, ಜಾಹೀರಾತು ಮತ್ತಿತರ ಮುದ್ರಣ ಮಾಡುವ ಮೊದಲು ಅನುಮತಿ ಪಡೆಯ ಬೇಕು. ಎಷ್ಟು ಪ್ರತಿ ಮುದ್ರಣ ಮಾಡಲಾ ಗುತ್ತಿದೆ ಮತ್ತು ವೆಚ್ಚದ ಬಗ್ಗೆ ವಿವರ ಸಲ್ಲಿಸ ಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಡಿ.ಪೆನ್ನೇಕರ್ ಚುನಾವಣೆಗೆ ಸಂಬಂಧಿಸಿ ದಂತೆ ಬ್ಯಾನರ್ಸ್, ಪೋಸ್ಟರ್‍ಗಳನ್ನು ಎಲ್ಲೆಂ ದರಲ್ಲಿ ಅಳವಡಿಸುವಂತಿಲ್ಲ ಎಂದು ತಿಳಿಸಿ ದರು. ಹೆಚ್ಚುವರಿ ಜಿಲ್ಲಾಧಿಕಾರಿ ಟಿ.ಯೋಗೇಶ್, ರಾಜಕೀಯ ಪಕ್ಷಗಳ ಪ್ರಮುಖರಾದ ಸಜಿಲ್ ಕೃಷ್ಣ(ಬಿಜೆಪಿ), ತೆನ್ನಿರಾ ಮೈನಾ (ಕಾಂಗ್ರೇಸ್) ಇತರರು ಇದ್ದರು.

ಮಾಹಿತಿ ನೀಡಲು ಕೋರಿಕೆ: ಲೋಕ ಸಭಾ ಸಾರ್ವತ್ರಿಕ ಚುನಾವಣೆ-2019ರ ಹಿನ್ನೆಲೆಯಲ್ಲಿ ಸಾರ್ವಜನಿಕರಿಂದ ಸ್ವೀಕೃತ ವಾಗುವ ದೂರು ಅರ್ಜಿಗಳ ತ್ವರಿತ ಕ್ರಮ ಕ್ಕಾಗಿ ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ಅಕ್ರಮ ಮದ್ಯ ತಯಾರಿಕೆ, ದಾಸ್ತಾನು, ಮಾರಾಟ ಮತ್ತು ಸಾಗಾಣಿಕೆ ಮತ್ತಿತರ ಅಬಕಾರಿ ಅಕ್ರಮಗಳ ಸಂಬಂಧ ಸಾರ್ವಜನಿಕರು ಅಬಕಾರಿ ಇಲಾಖೆಗೆ ದೂರು ನೀಡಲು ಅಬಕಾರಿ ಆಯುಕ್ತರು, ಕರ್ನಾಟಕ ರಾಜ್ಯ, ಬೆಂಗಳೂರು ರವರ ಕಚೇರಿ ಟೋಲ್ ಫ್ರೀ ಸಂಖ್ಯೆ: 1-800-425-2550ಗೆ ಕರೆ ಮಾಡಲು ಹಾಗೂ ಅಬಕಾರಿ ಉಪ ಆಯುಕ್ತರು, ಕೊಡಗು ಜಿಲ್ಲೆ, ಮಡಿಕೇರಿ ಅವರ ಕಂಟ್ರೋಲ್ ರೂಂ ದೂ.ಸಂ :08272-229295 ಗೆ ದೂರು ಸಲ್ಲಿಸ ಬಹುದಾಗಿದೆ ಎಂದು ಡೆಪ್ಯೂಟಿ ಕಮೀಷನರ್ ಆಫ್ ಎಕ್ಸೈಸ್ ತಿಳಿಸಿದ್ದಾರೆ.