ರಸ್ತೆ ಸುರಕ್ಷತೆಯ ಜಾಗೃತಿ ಮೂಡಿಸಲು ಡಿಸಿ ಸೂಚನೆ
ಕೊಡಗು

ರಸ್ತೆ ಸುರಕ್ಷತೆಯ ಜಾಗೃತಿ ಮೂಡಿಸಲು ಡಿಸಿ ಸೂಚನೆ

March 18, 2019

ಮಡಿಕೇರಿ: ಜಿಲ್ಲೆಯ ರಾಜ್ಯ ಹಾಗೂ ರಾಷ್ಟ್ರೀಯ ಹೆದ್ದಾರಿಗಳಲ್ಲಿ ರಸ್ತೆ ಸುರಕ್ಷತೆಗೆ ಹೆಚ್ಚಿನ ಗಮನ ಹರಿಸುವಂತೆ ಪ್ರಾದೇಶಿಕ ಸಾರಿಗೆ ಇಲಾಖೆ ಅಧಿಕಾರಿಗೆ ಡಿಸಿ ಅನೀಸ್ ಕಣ್ಮಣಿ ಜಾಯ್ ಸೂಚಿಸಿದ್ದಾರೆ.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂ ಗಣದಲ್ಲಿ ಕೊಡಗು ಜಿಲ್ಲೆಯ ರಸ್ತೆ ಸುರ ಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಪದೇ ಪದೇ ಸಂಭವಿಸುವ ಅಪಘಾತ ಸ್ಥಳಗಳಲ್ಲಿ ಉಬ್ಬು ನಿರ್ಮಾಣ, ಕನ್ನಡಿ ಅಳವಡಿಸು ವುದು, ಜೀಬ್ರಾ ಕ್ರಾಸ್, ಸೂಚನಾ ಫಲಕ ಅಳವಡಿಸುವುದು ಮತ್ತಿತರ ಕಾರ್ಯ ಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು.

ಜಿಲ್ಲೆಯ ಹಲವು ಕಡೆಗಳಲ್ಲಿ ಅಪಘಾತ ವಲಯಗಳನ್ನು ಗುರುತಿಸಿ ಅಪಘಾತ ತಡೆ ಯುವ ನಿಟ್ಟಿನಲ್ಲಿ ಸಂಚಾರ ನಿಯಮ ಪಾಲಿ ಸುವಂತಾಗಲು ಅಗತ್ಯ ಕ್ರಮ ಕೈಗೊಳ್ಳ ಬೇಕಿದೆ. ರಸ್ತೆ ಸುರಕ್ಷತೆ ಸಂಬಂಧಿಸಿದಂತೆ ಹೆಚ್ಚಿನ ಜಾಗೃತಿ ಮೂಡಿಸುವಂತಾಗಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು.

ರಸ್ತೆಗಳಲ್ಲಿ ಅಪಘಾತ ತಡೆಯುವುದು ಹಾಗೂ ರಸ್ತೆ ಸುರಕ್ಷತೆ ಕಾಪಾಡುವ ನಿಟ್ಟಿ ನಲ್ಲಿ ಪೊಲೀಸ್ ಇಲಾಖೆಯಿಂದ ಮಾಹಿತಿ ಪಡೆಯುವಂತೆ ಪ್ರಾದೇಶಿಕ ಸಾರಿಗೆ ಅಧಿ ಕಾರಿ ಅವರಿಗೆ ಸಲಹೆ ಮಾಡಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಡಿ.ಪೆನ್ನೇಕರ್ ಮಾತನಾಡಿ, ಜಿಲ್ಲೆಯಲ್ಲಿ ಕೆಲವು ರಸ್ತೆಗಳಲ್ಲಿ ಅಪಘಾತ ವಲಯಗಳನ್ನು ಗುರ್ತಿಸಲಾಗಿದೆ. ಅಂತಹ ಕಡೆಗಳಲ್ಲಿ ರಸ್ತೆ ಸುರಕ್ಷತೆ ಸಂಬಂಧಿಸಿದಂತೆ ಹೆಚ್ಚಿನ ಗಮನ ಹರಿಸಬೇಕಿದೆ ಎಂದು ಹೇಳಿದರು.

ಸಂಚಾರ ನಿಯಮಗಳನ್ನು ಪಾಲಿಸುವ ನಿಟ್ಟಿನಲ್ಲಿ ಹೆಚ್ಚಿನ ಜಾಗೃತಿ ಮೂಡಿಸಬೇಕು. ಈ ಸಂಬಂಧ ವಾಹನ ಸವಾರರಿಗೆ ಮಾಹಿತಿ ನೀಡಬೇಕು ಎಂದು ಸಲಹೆ ಮಾಡಿದರು.
ಪ್ರಾದೇಶಿಕ ಸಾರಿಗೆ ಅಧಿಕಾರಿ ಗಂಗಾಧರ ಅವರು ರಸ್ತೆ ಸುರಕ್ಷತೆ ಕುರಿತು ಯೋಜನೆ ರೂಪಿಸಬೇಕು. ಆ ನಿಟ್ಟಿನಲ್ಲಿ ಜಿಲ್ಲಾಡಳಿತ, ಪೊಲೀಸ್ ಇಲಾಖೆ, ಲೋಕೋಪಯೋಗಿ ಇಲಾಖೆಯ ಸಹಕಾರ ಬೇಕಿದೆ ಎಂದು ಕೋರಿದರು. ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಎಂಜಿನಿಯರ್ ಇಬ್ರಾಹಿಂ, ಅಪಘಾತ ವಲಯಗಳಲ್ಲಿ ಅಪಘಾತಗಳನ್ನು ನಿಯಂತ್ರಿಸಲು ಇಲಾಖೆಯಿಂದ ಸಾಕಷ್ಟು ಕ್ರಮ ಕೈಗೊಳ್ಳಲಾಗಿದೆ. ಆದರೂ ಅಪಘಾ ತಗಳು ಸಂಭವಿಸುತ್ತಿದೆ. ಇದನ್ನು ತಡೆಯ ಬೇಕಿದೆ ಎಂದು ಹೇಳಿದರು. ಕೆಎಸ್‍ಆರ್‍ಟಿಸಿ ಮಡಿಕೇರಿ ಘಟಕದ ವ್ಯವಸ್ಥಾಪಕರಾದ ಗೀತಾ, ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಶಿವರಾಮ್, ಸುರೇಶ್, ಶಿವಕುಮಾರ್, ಪೌರಾ ಯುಕ್ತರಾದ ರಮೇಶ್, ನಗರಸಭೆ ಸಹಾ ಯಕ ಎಂಜಿನಿಯರ್ ವನಿತಾ ಇತರರಿದ್ದರು.

Translate »