ಹಾಸನ: ಹಾಸನ ಜಿಲ್ಲೆಯಲ್ಲಿ ಕೈಗಾರಿಕೆಗಳನ್ನು ಸ್ಥಾಪಿಸಲು ಯುವ ಜನತೆಗೆ ಭೂಮಿ ಲಭ್ಯವಿಲ್ಲದ ಕಾರಣ ವಿಶೇಷ ಆರ್ಥಿಕ ವಲಯದಲ್ಲಿರುವ ಭೂಮಿಯನ್ನು ಡಿ-ನೋಟಿಫೈ ಮಾಡು ವುದು ಅತ್ಯಾವಶ್ಯಕವಾಗಿರುವುದರಿಂದ ವಿಶೇಷ ಜವಳಿ ಆರ್ಥಿಕ ವಲಯದಲ್ಲಿ ಉಳಿದಿರುವ 40 ಎಕರೆ ಭೂಮಿ ಹಾಗೂ ವಿಶೇಷ ಔಷಧಿ ಆರ್ಥಿಕ ವಲಯದಲ್ಲಿ ಖಾಲಿ ಇರುವ 35 ಎಕರೆ ಭೂಮಿಗೂ ಡಿನೋಟಿಫಿಕೇಷನ್ ಮಾಡುವ ಸಂಬಂಧ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಕೆಐಎ ಡಿಬಿ ಅಭಿವೃದ್ಧಿ ಅಧಿಕಾರಿಗಳಿಗೆ ಜಿಲ್ಲಾ ಧಿಕಾರಿ ರೋಹಿಣಿ ಸಿಂಧೂರಿ ಸೂಚಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣ ದಲ್ಲಿಂದು ನಡೆದ ಜಿಲ್ಲಾ ಮಟ್ಟದ ಉನ್ನತಾ ಧಿಕಾರದ ಏಕ ಗವಾಕ್ಷಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕೈಗಾರಿಕಾ ಪ್ರದೇಶದಲ್ಲಿ ರಸ್ತೆಗಳ ದುರಸ್ಥಿ ಹಾಗೂ ಹಾಳಾಗಿರುವ ಬೀದಿ ದೀಪದ ವ್ಯವಸ್ಥೆಗೆ ಕ್ರಮವಹಿಸುವಂತೆ ಕೆಐಎಡಿಬಿ ಅಭಿವೃದ್ಧಿ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಸೂಚಿಸಿದರು.
ಹಾಸನ ನಗರದ ಸಾರ್ವಜನಿಕರಿಗೆ ಕುಡಿ ಯುವ ನೀರು ಸರಬರಾಜು ಮಾಡುವ ಸಂಬಂಧ ಮಂಡಳಿಯ ನೀರು ಸರಬ ರಾಜು ವ್ಯವಸ್ಥೆಯಿಂದ ಪಡೆಯುತ್ತಿರುವ ನೀರಿಗೆ 6 ಲಕ್ಷ ರೂ.ಗಳ ಶುಲ್ಕವನ್ನು ನಗರ ಸಭೆಯಿಂದ ಪಾವತಿಸುವಂತೆ ಸೂಚಿಸಿದರು.
ಪ್ರಧಾನಮಂತ್ರಿ ಹಾಗೂ ಮುಖ್ಯಮಂತ್ರಿ ಗಳ ಉದ್ಯೋಗ ಸೃಜನ ಯೋಜನೆಯಡಿ ಆಯ್ಕೆಯಾಗಿರುವ ಫಲಾನುಭವಿಗಳಿಗೆ ಉದ್ಯಮ ಪ್ರಾರಂಭಿಸಲು ಬ್ಯಾಂಕ್‍ಗಳು ಸಾಲ ಮಂಜೂರು ಮಾಡಲು ಕ್ರಮ ವಹಿಸುವಂತೆ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರಿಗೆ ಸೂಚಿಸಿದರು.
ಕೈಗಾರಿಕಾ ಕೇಂದ್ರ ವಲಯದಲ್ಲಿ ಉದ್ಯಮ ಪ್ರಾರಂಭಿಸಲು ಅನುಮತಿ ನೀಡುವ ಸಂದರ್ಭದಲ್ಲಿ ನಿಗದಿತ ಸಮಯಕ್ಕೆ ಉದ್ಯಮ ಪ್ರಾರಂಭಿಸಲು ಉದ್ಯಮದಾರರಿಗೆ ಸೂಚನೆ ನೀಡುವಂತೆ ಜಂಟಿ ನಿರ್ದೇಶಕರಿಗೆ ಜಿಲ್ಲಾ ಧಿಕಾರಿ ರೋಹಿಣಿ ಸಿಂಧೂರಿ ತಿಳಿಸಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಪುಟ್ಟಸ್ವಾಮಿ, ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ವಿ.ಎಸ್.ಹೆಗ್ಗಡೆ, ಕೆಐಎಡಿಬಿ ಅಭಿವೃದ್ಧಿ ಅಧಿ ಕಾರಿ ಕುಮಾರ್ ಕೆ, ನಗರಸಭೆ ಆಯುಕ್ತ ಬಿ.ಎ.ಪರಮೇಶ್ ಹಾಗೂ ಇನ್ನಿತರರಿದ್ದರು.