ಶ್ರೀ ಹಾಸನಾಂಬ ದರ್ಶನೋತ್ಸವ ಸಿದ್ಧತೆ ಪರಿಶೀಲಿಸಿದ ಜಿಲ್ಲಾಧಿಕಾರಿ
ಹಾಸನ

ಶ್ರೀ ಹಾಸನಾಂಬ ದರ್ಶನೋತ್ಸವ ಸಿದ್ಧತೆ ಪರಿಶೀಲಿಸಿದ ಜಿಲ್ಲಾಧಿಕಾರಿ

October 30, 2018

ಅರಸೀಕೆರೆ: ತಾಲೂಕು ಕಚೇರಿಯಲ್ಲಿ ಸಾರ್ವಜನಿಕರಿಗೆ ಶುದ್ಧ ಕುಡಿಯುವ ನಿಹಾಸನ, ಅ.29-ಪ್ರತಿ ವರ್ಷದಂತೆ ಈ ಬಾರಿಯೂ ಶ್ರೀ ಹಾಸನಾಂಬ ದರ್ಶನೋತ್ಸವವನ್ನು ಅಚ್ಚುಕಟ್ಟಾಗಿ ಹಾಗೂ ಶ್ರದ್ಧಾ ಭಕ್ತಿಯಿಂದ ನೆರವೇರಿಸಲು ಎಲ್ಲರೂ ಅಗತ್ಯ ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಸೂಚನೆ ನೀಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಹಾಸ ನಾಂಬ ಜಾತ್ರಾ ಮಹೋತ್ಸವದ ಪೂರ್ವಭಾವಿ ಸಿದ್ಧತಾ ಪರಿಶೀ ಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಭಕ್ತಾದಿ ಗಳಿಗೆ ಹೆಚ್ಚಿನ ಮೂಲಸೌಕರ್ಯ ಒದಗಿಸಲು ಆದ್ಯತೆ ನೀಡುವಂತೆ ತಿಳಿಸಿದರು.

ಭಕ್ತಾದಿಗಳಿಗೆ ಕುಡಿಯುವ ನೀರು, ಶೌಚಾಲಯ ವ್ಯವಸ್ಥೆ ಸಮ ರ್ಪಕವಾಗಿರಬೇಕು. ವಿಶೇಷ ದರ್ಶನ ಹಾಗೂ ವಿಕಲಚೇತನರು ಮತ್ತು ವಯೋವೃದ್ಧರಿಗೆ ಪ್ರತ್ಯೇಕ ಸಾಲುಗಳನ್ನು ನಿರ್ಮಾಣ ಮಾಡು ವಂತೆ ಜಿಲ್ಲಾಧಿಕಾರಿ ನಿರ್ದೇಶನ ನೀಡಿದರಲ್ಲದೆ, ಈ ಬಾರಿ ಕಡಿಮೆ ಅವಧಿಯ ಸಮಯಾವಕಾಶ ಇರುವುದರಿಂದ ಪ್ರತಿದಿನ ಹೆಚ್ಚಿನ ಸಮಯ ದರ್ಶನಕ್ಕೆ ಅವಕಾಶವಾಗುವಂತಾಗಬೇಕು. ಸ್ಕೌಟ್ಸ್ ಅಂಡ್ ಗೈಡ್ಸ್ ಹಾಗೂ ಆರೋಗ್ಯ ಇಲಾಖೆಯ ಸೇವೆಯನ್ನು ಸಮರ್ಪಕವಾಗಿ ಒಳಸಿಕೊಳುವಂತೆ ಜಿಲ್ಲಾಧಿಕಾರಿ ತಿಳಿಸಿದರು.

ಪತ್ರಿದಿನ ಸಂಜೆ ವಿವಿಧ ಕಲಾವಿದರಿಂದ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ಏರ್ಪಡಿಸಲು ಕನ್ನಡ ಮತ್ತು ಸಂಸ್ಕøತಿ ಇಲಾಖೆ ಗಮನ ಹರಿಸಬೇಕು. ಅದೇ ರೀತಿ ಪ್ರವಾಸಿಗರಿಗೆ ನಿಗದಿತ ದಿನ ದಲ್ಲಿ ಹಾಸನ ಜಿಲ್ಲಾ ದರ್ಶನಕ್ಕೆ ವಾಹನ ವ್ಯವಸ್ಥೆಗೆ ಪ್ರವಾಸೋ ದ್ಯಮ ಇಲಾಖೆ ಕ್ರಮ ಕೈಗೊಳ್ಳಬೇಕು. ಹೆಲಿ ಟೂರಿಸಂ ಕೂಡ ಈ ಬಾರಿಯ ಆಕರ್ಷಣಿಯಾಗಲಿದ್ದು, ಅದಕ್ಕಾಗಿ ಸಿದ್ಧತೆ ಮಾಡಿಕೊಳ್ಳಲಾಗಿದೆ. ಎಲ್ಲಾ ಇಲಾಖಾ ಅಧಿಕಾರಿಗಳು ಹಾಸನಾಂಬ ಜಾತ್ರಾ ಮಹೋತ್ಸವದ ಯಶಸ್ಸಿಗೆ ಶ್ರಮಿಸಬೇಕು. ನಗರಸಭೆಯೂ ಸ್ವಚ್ಛತೆಗೆ ವಿಶೇಷ ಗಮನ ಹರಿಸಬೇಕು ಎಂದು ರೋಹಿಣಿ ಸಿಂಧೂರಿ ಹೇಳಿದರು.

ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಡಾ.ಪ್ರಕಾಶ್‍ಗೌಡ ಅವರು ಭದ್ರತಾ ವ್ಯವಸ್ಥೆ ಬಗ್ಗೆ ವಿವರಿಸಿದರು. ಜಿಲ್ಲೆಯಲ್ಲಿರುವ ಪೆÇಲೀಸ್ ಅಧಿಕಾರಿ ಸಿಬ್ಬಂದಿ ಬಳಸಿಕೊಂಡು ಶಾಂತಿ ಸುವ್ಯವಸ್ಥೆಗೆ ಕ್ರಮ ಕೈಗೊಳಲಾಗುವುದು ಎಂದು ತಿಳಿಸಿದರು. ದೇವಸ್ಥಾನದ ಆಳಿತಾಧಿಕಾರಿಯಾದ ಉಪವಿಭಾಗಾಧಿಕಾರಿ ಡಾ.ಹೆಚ್.ಎಲ್. ನಾಗರಾಜ್ ಅವರು ಈ ವರೆಗಿನ ಸಿದ್ಧತೆಗಳು, ಹೊಸ ಮಾರ್ಪಾಡುಗಳ ಬಗ್ಗೆ ಜಿಲ್ಲಾಧಿಕಾರಿ ಅವರ ಗಮನಕ್ಕೆ ತಂದರು. ಸಕಲೇಶಪುರ ಉಪವಿಭಾಗಾಧಿಕಾರಿ ಲಕ್ಷ್ಮಿಕಾಂತ ರೆಡ್ಡಿ ಸೇರಿದಂತೆ ವಿವಿಧ ಇಲಾಖಾಧಿಕಾರಿಗಳು ಸಭೆಯಲ್ಲಿದ್ದರು.

Translate »