ಮರದಿಂದ ಬಿದ್ದು ಸಾವು
ಕೊಡಗು

ಮರದಿಂದ ಬಿದ್ದು ಸಾವು

April 21, 2020

ಸೋಮವಾರಪೇಟೆ, ಏ.20- ಸಮೀಪದ ಬಿಳಿಗೇರಿ ಗ್ರಾಮದಲ್ಲಿ ಮರ ಕಪಾತು ಮಾಡುತ್ತಿದ್ದ ಸಂದರ್ಭ ವ್ಯಕ್ತಿಯೋರ್ವರು ಆಕಸ್ಮಿಕವಾಗಿ ಕೆಳಬಿದ್ದು ಸಾವನ್ನಪ್ಪಿರುವ ಘಟನೆ ಇಂದು ಬೆಳಿಗ್ಗೆ ನಡೆದಿದೆ. ಕುಂಬೂರು ಗ್ರಾಮದ ಕೆ.ವಿ. ಜತ್ತಪ್ಪ(64) ಸಾವನ್ನಪ್ಪಿದವರು. ಇಂದು ಬೆಳಿಗ್ಗೆ 10 ಗಂಟೆ ಸುಮಾರಿಗೆ ಬಿಳಿಗೇರಿ ಗ್ರಾಮದ ಆಲ್ಫೋನ್ಸ್ ಸಿಕ್ವೇರಾ ಎಂಬುವರಿಗೆ ಸೇರಿದ ತೋಟದಲ್ಲಿ ಮರಕಪಾತು ಮಾಡುತ್ತಿದ್ದ ಸಂದರ್ಭ ದುರ್ಘಟನೆ ಸಂಭವಿಸಿದೆ. ಮೃತರು ಪತ್ನಿ ಸೇರಿದಂತೆ ಮೂವರು ಪುತ್ರರನ್ನು ಅಗಲಿದ್ದು, ಸೋಮವಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Translate »