ಖಾಸಗಿ ಆಸ್ಪತ್ರೆಯಲ್ಲಿ ರೋಗಿ ಸಾವು: ಸಂಬಂಧಿಕರ ಪ್ರತಿಭಟನೆ ಆಸ್ಪತ್ರೆ ಮುಖ್ಯಸ್ಥರಿಂದ ಪರಿಹಾರ, ಬಗೆಹರಿದ ಸಮಸ್ಯೆ
ಕೊಡಗು

ಖಾಸಗಿ ಆಸ್ಪತ್ರೆಯಲ್ಲಿ ರೋಗಿ ಸಾವು: ಸಂಬಂಧಿಕರ ಪ್ರತಿಭಟನೆ ಆಸ್ಪತ್ರೆ ಮುಖ್ಯಸ್ಥರಿಂದ ಪರಿಹಾರ, ಬಗೆಹರಿದ ಸಮಸ್ಯೆ

March 19, 2019

ಕುಶಾಲನಗರ: ಸ್ಥಳೀಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಆಗಮಿಸಿದ ರೋಗಿಯೊಬ್ಬರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತನ ಸಂಬಂಧಿಕರು ರಸ್ತೆ ತಡೆ ಮಾಡಿ ಪ್ರತಿಭಟನೆ ನಡೆಸಿದ ಘಟನೆ ಸೋಮವಾರ ಬೆಳಗ್ಗೆ ನಡೆದಿದೆ.

ಪಿರಿಯಾಪಟ್ಟಣ ತಾಲೂಕಿನ ದೊಡ್ಡ ಹೊನ್ನೂರು ಗ್ರಾಮದ ಪದ್ಮನಾಭ (52) ಮೃತ ವ್ಯಕ್ತಿ. ಆರೋಗ್ಯದಲ್ಲಿ ವ್ಯತ್ಯಯ ಉಂಟಾದ ಹಿನ್ನಲೆಯಲ್ಲಿ ಪದ್ಮನಾಭ ಅವರನ್ನು ಸೋಮವಾರ ಬೆಳಗ್ಗೆ ಇಲ್ಲಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ನೀಡಿದ ವೈದ್ಯರು ಚೇತರಿಸಿ ಕೊಳ್ಳುವ ಭರವಸೆ ನೀಡಿದ್ದರು. ಆದರೆ ಏಕಾಏಕಿ ರೋಗಿಯನ್ನು ಮೈಸೂರಿಗೆ ರವಾನಿಸ ಬೇಕಿದೆ ಎಂದು ಆಂಬ್ಯುಲೆನ್ಸ್ ನಲ್ಲಿ ಕರೆ ದೊಯ್ಯುವ ವೇಳೆಗೆ ಪದ್ಮನಾಭ ಮೃತ ಪಟ್ಟಿದ್ದಾರೆ. ಚಿಕಿತ್ಸೆ ವೇಳೆಯಲ್ಲೇ ರೋಗಿ ಮೃತಪಟ್ಟಿದ್ದರೂ ವೈದ್ಯರು ವಿಚಾರವನ್ನು ಮರೆಮಾಚಿ ಮೈಸೂರಿಗೆ ಸಾಗಿಸುವ ನಾಟಕವಾಡಿದ್ದಾರೆ ಎಂದು ಆರೋಪಿಸಿ ಮೃತನ ಸಂಬಂಧಿಕರು ಆಸ್ಪತ್ರೆಗೆ ಮುತ್ತಿಗೆ ಹಾಕಿ ಕೆಲಕಾಲ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದರು.

ಸ್ಥಳಕ್ಕೆ ಆಸ್ಪತ್ರೆಯ ಮುಖ್ಯಸ್ಥರು ಆಗಮಿಸಿ ಮೃತನ ಕುಟುಂಬಕ್ಕೆ ಪರಿಹಾರ ಒದಗಿಸ ಬೇಕೆಂದು ಪಟ್ಟು ಹಿಡಿದರು. ಪರಿಸ್ಥಿತಿ ವಿಕೋಪಕ್ಕೆ ತಿರುಗುತ್ತಿರುವುದನ್ನು ಮನಗಂಡ ಆಸ್ಪತ್ರೆ ಮುಖ್ಯಸ್ಥರು ಮೃತರ ಕುಟುಂಬಕ್ಕೆ ರೂ.50 ಸಾವಿರ ಪರಿಹಾರ ನೀಡಿದರು. ನಂತರ ಸಂಬಂಧಿಕರು ಪ್ರತಿಭಟನೆಯನ್ನು ಕೈಬಿಟ್ಟು ಮೃತದೇಹ ವನ್ನು ಸ್ವಗ್ರಾಮಕ್ಕೆ ತೆಗೆದುಕೊಂಡು ಹೋದರು.

ಈ ಸಂದರ್ಭ ಸ್ಥಳಕ್ಕೆ ಆಗಮಿಸಿದ ಪೆÇಲೀಸ್ ವೃತ್ತ ನಿರೀಕ್ಷಕ ದಿನೇಶ್ ಕುಮಾರ್ ಮತ್ತು ಸಿಬ್ಬಂದಿಗಳು ಪರಿಸ್ಥಿತಿ ತಿಳಿಗೊಳಿಸಿದರು.

Translate »