ಚಾಮರಾಜನಗರ ಜಿಲ್ಲಾಸ್ಪತ್ರೆ ಆಕ್ಸಿಜನ್ ಇಲ್ಲದೇ 24 ಮಂದಿಯ ಸಾವಿನ ದುರಂತÀ  ನ್ಯಾಯಾಂಗ ತನಿಖೆ
News

ಚಾಮರಾಜನಗರ ಜಿಲ್ಲಾಸ್ಪತ್ರೆ ಆಕ್ಸಿಜನ್ ಇಲ್ಲದೇ 24 ಮಂದಿಯ ಸಾವಿನ ದುರಂತÀ ನ್ಯಾಯಾಂಗ ತನಿಖೆ

May 6, 2021

ಬೆಂಗಳೂರು,ಮೇ5(ಕೆಎಂಶಿ)- ಚಾಮ ರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆ ಯಿಂದ ರೋಗಿಗಳು ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ತನಿಖೆ ನಡೆಸಲು ಹೈಕೋರ್ಟ್‍ನ ನಿವೃತ್ತ ನ್ಯಾಯಮೂರ್ತಿ ಬಿ.ಎ.ಪಾಟೀಲ್ ನೇತೃತ್ವದಲ್ಲಿ ಏಕ ಸದಸ್ಯ ಸಮಿತಿ ರಚಿಸಿ, ಸರ್ಕಾರ ಆದೇಶ ಹೊರಡಿಸಿದೆ.
ಆದರೆ ಸರ್ಕಾರದ ಈ ನಡವಳಿಕೆ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿರುವ ನ್ಯಾಯಾಲಯ, ನ್ಯಾಯಾಂಗ ತನಿಖೆಗೆ ವಹಿಸಬೇಕು ಎಂಬ ತೀರ್ಮಾನ ಕೈಗೊಳ್ಳಲಾಗಿತ್ತು. ನ್ಯಾಯ ಮೂರ್ತಿ ನೇಮಕಾತಿಯು ನಮ್ಮಿಂದಲೇ ಆಗುತ್ತಿತ್ತು. ಆದರೆ, ಸರ್ಕಾರದ ಈ ನೇಮಕಾತಿಗೆ ಅಸಮಾಧಾನವಿದೆ ಎಂದು ಹೈಕೋರ್ಟ್ ಪೀಠ ಹೇಳಿದೆ.

ಸರ್ಕಾರ ನೇಮಕ ಮಾಡಿರುವ ನ್ಯಾಯ ಮೂರ್ತಿಗಳ ಬಗ್ಗೆ ನಮ್ಮ ಆಕ್ಷೇಪವಿಲ್ಲ. ಸರ್ಕಾರದ ನಡವಳಿಕೆ ಬಗ್ಗೆ ನಮಗೆ ಅಸಮಾ ಧಾನವಿದೆ ಎಂದು ತಿಳಿಸಿದೆ. ಬೇಸಿಗೆ ರಜೆ ಸಂದರ್ಭದಲ್ಲಿ ಆಹಾರ ಭದ್ರತೆ, ರೋಗಿಗಳಿಗೆ ಹಾಸಿಗೆ ಒದಗಿಸುವುದು, ಸಮರ್ಪಕವಾಗಿ ಔಷಧಿ ಹಾಗೂ ಆಕ್ಸಿ ಜನ್ ಒದಗಿಸುವ ಸಂಬಂಧ ಸಾರ್ವ ಜನಿಕ ಅರ್ಜಿಗಳನ್ನು ಸ್ವಯಂಪ್ರೇರಿತವಾಗಿ ವಿಶೇಷ ವಿಚಾರಣೆ ಕೈಗೆತ್ತಿಕೊಂಡ ಮುಖ್ಯ ನ್ಯಾಯಮೂರ್ತಿ ಅಭಯ ಶ್ರೀನಿವಾಸ್ ಓಕಾ ಹಾಗೂ ನ್ಯಾಯಮೂರ್ತಿ ಅರವಿಂದ್ ಕುಮಾರ್ ಅವರನ್ನೊಳಗೊಂಡ ವಿಭಾಗೀಯ ಪೀಠ, ಚಾಮರಾಜನಗರ ಘಟನೆ ಬಗ್ಗೆ ನಿನ್ನೆ ನ್ಯಾಯಾಂಗ ತನಿಖೆಗೆ ಸೂಚಿಸಿ ಪ್ರಕರಣವನ್ನು ಇಂದಿಗೆ (ಬುಧವಾರ) ಮುಂದೂಡಿತ್ತು. ನ್ಯಾಯಮೂರ್ತಿಗಳ ನೇಮಕಾತಿಗೆ ಸಂಬಂಧಿಸಿದಂತೆ ಪೀಠ ಇಂದು ತನ್ನ ನಿರ್ಧಾರ ಕೈಗೊಳ್ಳುವುದಿತ್ತು.

ಆದರೆ ರಾಜ್ಯ ಸರ್ಕಾರ ಏಕಾಏಕಿ ತಡ ರಾತ್ರಿ ನ್ಯಾಯಮೂರ್ತಿ ಬಿ.ಎ.ಪಾಟೀಲ್ ಅವರನ್ನು ನೇಮಕ ಮಾಡಿ ಆದೇಶ ಹೊರ ಡಿಸಿದೆ. ಮೇ 3ರಂದು ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯಿಂದ 24 ರೋಗಿಗಳ ಸಾವಿನ ಕುರಿತಂತೆ ಸಮಿತಿ ತನಿಖೆ ಮಾಡಲಿದೆ. ಪ್ರಕರಣಕ್ಕೆ ಸಂಬಂಧ ಪಟ್ಟ ಅಧಿಕಾರಿಗಳು, ಚಾಮರಾಜನಗರ ಮತ್ತು ಮೈಸೂರು ಜಿಲ್ಲಾಧಿಕಾರಿಗಳು ಸಂಬಂ ಧಿತ ಎಲ್ಲಾ ದಾಖಲಾತಿಗಳನ್ನು ತನಿಖಾ ಸಮಿತಿಗೆ ಒಪ್ಪಿಸಲು ಆರೋಗ್ಯ ಇಲಾಖೆ ವಶಕ್ಕೆ ನೀಡಬೇಕೆಂದು

ಆದೇಶದಲ್ಲಿ ಹೇಳಲಾಗಿದೆ. ಈ ಮಧ್ಯೆ ನ್ಯಾಯಾಲಯ ಆಕ್ಸಿಜನ್‍ಗೆ ಸಂಬಂಧಿಸಿದಂತೆ ಮೈಸೂರು ಹಾಗೂ ಚಾಮರಾಜನಗರ ಜಿಲ್ಲಾಸ್ಪತ್ರೆ ಮತ್ತು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿರುವ ಕಡತಗಳನ್ನು ತಕ್ಷಣವೇ ವಶಕ್ಕೆ ತೆಗೆದುಕೊಳ್ಳುವಂತೆ ರಾಜ್ಯದ ಮುಖ್ಯ ಕಾರ್ಯದರ್ಶಿಯವರಿಗೆ ಆದೇಶಿಸಿ, ಕಡತಗಳನ್ನು ತಮ್ಮ ಬಳಿ ಇಟ್ಟುಕೊಂಡು ತನಿಖಾ ಸಮಿತಿಗೆ ನೀಡಬೇಕು ಎಂದು ಹೇಳಿದೆ. ಇದಕ್ಕೂ ಮುನ್ನ ಚಾಮರಾಜನಗರ ಪ್ರಕರಣಕ್ಕೆ ಸಂಬಂಧಿಸಿಂತೆ ರಾಜ್ಯ ಸರ್ಕಾರ ಹಿರಿಯ ಐಎಎಸ್ ಅಧಿಕಾರಿ ನೇತೃತ್ವದಲ್ಲಿ ಸಮಿತಿ ರಚಿಸಿ, ತನಿಖೆಗೆ ಆದೇಶ ಮಾಡಿತ್ತು. ಅಷ್ಟೇ ಅಲ್ಲ ವರದಿಯನ್ನು ಮೂರು ದಿನದೊಳಗಾಗಿ ನೀಡಬೇಕೆಂದು ಹೇಳಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ವಿಭಾಗೀಯ ಪೀಠ ಸ್ವಯಂ ಪ್ರೇರಿತವಾಗಿ ವಿಚಾರಣೆಯನ್ನು ಕೈಗೆತ್ತಿಕೊಂಡು ನ್ಯಾಯಾಂಗ ತನಿಖೆ ನಡೆಸಬೇಕೆಂದು ಆದೇಶ ಮಾಡಿತ್ತು. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಈ ಮಹತ್ವದ ತೀರ್ಮಾನ ಕೈಗೊಂಡಿದೆ.

Translate »