ಅಪಘಾತದಲ್ಲಿ ಗಾಯಗೊಂಡಿದ್ದ ಚಾಲಕ ಸಾವು
ಕೊಡಗು

ಅಪಘಾತದಲ್ಲಿ ಗಾಯಗೊಂಡಿದ್ದ ಚಾಲಕ ಸಾವು

January 21, 2019

ಗೋಣಿಕೊಪ್ಪಲು: ವಾಹನ ಅಪ ಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಚಾಲಕ ಚಿಕಿತ್ಸೆ ಫಲಿಸದೆ ಸಾವಿಗೀಡಾಗಿ ದ್ದಾರೆ. ಪೊನ್ನಂಪೇಟೆ ಕೃಷ್ಣ ಕಾಲೋನಿ ನಿವಾಸಿ ಕೊಟ್ಟಂಗಡ ಲವ (50) ಮೃತ ಚಾಲಕ. ಕಳೆದ ಶನಿವಾರ ಪೊನ್ನಂಪೇಟೆ ಯಿಂದ ತನ್ನ ಗೂಡ್ಸ್ ವಾಹನದಲ್ಲಿ ಕಾನೂರು ರಸ್ತೆಯಲ್ಲಿ ತೆರಳುತ್ತಿದ್ದಾಗ ರಸ್ತೆ ಬದಿಯ ಲ್ಲಿದ್ದ ಮರಕ್ಕೆ ಡಿಕ್ಕಿಯಾಗಿತ್ತು. ಇದರಿಂದ ಹೊಟ್ಟೆ ಭಾಗಕ್ಕೆ ಗಂಭೀರ ಪೆಟ್ಟಾಗಿತ್ತು. ಮೈಸೂರು ಖಾಸಗಿ ಆಸ್ಪತ್ರೆಯಲ್ಲಿ ದಾಖ ಲಿಸಲಾಗಿತ್ತಾದರೂ ಚಿಕಿತ್ಸೆಗೆ ಸ್ಪಂದಿಸದೆ ಸಾವಿಗೀಡಾಗಿದ್ದಾರೆ. ಈ ಬಗ್ಗೆ ಶ್ರೀಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖ ಲಾಗಿದೆ. ಮೃತರು ಪತ್ನಿ ಹಾಗೂ ಇಬ್ಬರೂ ಮಕ್ಕಳನ್ನು ಅಗಲಿದ್ದಾರೆ.

ಅಂತ್ಯಕ್ರಿಯೆ : ಮೃತ ಚಾಲಕ ಲವ ಅವರ ಅಂತ್ಯಕ್ರಿಯೆ ಸೋಮವಾರ ಬೆಳಗ್ಗೆ 10.30ಕ್ಕೆ ಪೊನ್ನಂಪೇಟೆ ಕಿರುಗೂರು ರಸ್ತೆಯಲ್ಲಿರುವ ಪೊನ್ನಂಪೇಟೆ ಕೊಡವ ಸಮಾಜ ರುದ್ರ ಭೂಮಿಯಲ್ಲಿ ನಡೆಯಲಿದೆ.

Translate »