ಹಾವು ಕಚ್ಚಿ ರೈತ ಸಾವು
ಮಂಡ್ಯ

ಹಾವು ಕಚ್ಚಿ ರೈತ ಸಾವು

April 27, 2020

ಕೆ.ಆರ್.ಪೇಟೆ, ಏ.26- ಜಮೀನಲ್ಲಿ ಹಾವು ಕಚ್ಚಿ ರೈತ ನೋರ್ವ ಸಾವನ್ನ ಪ್ಪಿರುವ ಘಟನೆ ತಾಲೂಕಿನ ಕಾಡು ಮೆಣಸ ಗ್ರಾಮದಲ್ಲಿ ಭಾನುವಾರ ಮಧ್ಯಾಹ್ನ ಸಂಭವಿಸಿದೆ. ಕಾಡು ಮೆಣಸ ಗ್ರಾಮದ ನಿವಾಸಿ ದೊಡ್ಡೇಗೌಡ ಉರುಫ್ ಮೊಗಣ್ಣಗೌಡ (79) ಸಾವನ್ನ ಪ್ಪಿದ ರೈತ. ಈತ ತಮ್ಮ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಾಗ ಹಾವು ಕಡಿದಿದೆ. ಪರಿಣಾಮ ತೀವ್ರ ಅಸ್ವಸ್ಥಗೊಂಡ ಅವರಿಗೆ ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥ ಮಿಕ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿಗೆ ಕರೆದೊಯ್ಯುವ ವೇಳೆ ಮಾರ್ಗ ಮಧ್ಯೆದಲ್ಲಿ ಸಾವನ್ನಪ್ಪಿದ್ದಾರೆ ಎಂದು ಮೃತ ರೈತ ದೊಡ್ಡೇಗೌಡರ ಪುತ್ರ ನವೀನ್‍ಕುಮಾರ್ ತಿಳಿಸಿದ್ದಾರೆ. ಈ ಸಂಬಂಧ ಕಿಕ್ಕೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Translate »