ವಿದ್ಯುತ್ ಸ್ಪರ್ಶಿಸಿ ರೈತ ಸಾವು
ಹಾಸನ

ವಿದ್ಯುತ್ ಸ್ಪರ್ಶಿಸಿ ರೈತ ಸಾವು

May 30, 2018

ಅರಸೀಕೆರೆ: ವಿದ್ಯುತ್ ಸ್ಪರ್ಶಿಸಿ ವ್ಯಕ್ತಿ ಸಾವಿಗೀಡಾದ ಘಟನೆ ತಾಲೂಕಿನ ನಾಗವೇದಿ ಗ್ರಾಮದಲ್ಲಿ ನಡೆದಿದೆ. ಅರುಣ್ ಕುಮಾರ್ (45) ಮೃತ ರೈತ. ಜಮೀನಿಗೆ ಅಳವಡಿಸಿದ್ದ ತಂತಿ ಬೇಲಿಗೆ ವಿದ್ಯುತ್ ಪ್ರವಹಿಸಿ ಆಕಸ್ಮಿಕವಾಗಿ ಅರುಣ್‍ಗೆ ವಿದ್ಯುತ್ ಸ್ಪರ್ಶವಾಗಿದ್ದು, ಸ್ಥಳದಲ್ಲೇ ಅಸುನೀಗಿದ್ದಾರೆ. ಘಟನೆಯಿಂದ ಕುಟುಂಬ ಸದಸ್ಯರ ಆಕ್ರಂದನ ಮುಗಿಲು ಮುಟ್ಟಿದೆ. ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Translate »