ಕೆರೆಯಲ್ಲಿ ಮುಳುಗಿ ವ್ಯಕ್ತಿ ಸಾವು
ಹಾಸನ

ಕೆರೆಯಲ್ಲಿ ಮುಳುಗಿ ವ್ಯಕ್ತಿ ಸಾವು

June 16, 2018

ಬೇಲೂರು: ಬಾಗಿನ ಅರ್ಪಿಸಲು ಹೋಗಿ ಕೆರೆಯಲ್ಲಿ ಮುಳುಗಿ ವ್ಯಕ್ತಿಯೋರ್ವ ಮೃತಪಟ್ಟಿರುವ ಘಟನೆ ತಾಲೂಕಿನ ಬಿಕ್ಕೋಡು ಹೋಬಳಿ ಮದಘಟ್ಟ ಗ್ರಾಮದಲ್ಲಿ ನಡೆದಿದೆ.

ರಂಗಶೆಟ್ಟಿ(46) ಮೃತರು. ಗ್ರಾಮದ ದೊಡ್ಡಕೆರೆ ಭರ್ತಿಯಾದ ಹಿನ್ನೆಲೆಯಲ್ಲಿ ಬಾಗಿನ ಅರ್ಪಿಸಲು ಹೋಗಿದ್ದ ರಂಗಶೆಟ್ಟಿ ನೀರುಪಾಲಾಗಿದ್ದಾರೆ. ನೀರಿನ ಸೆಳೆತಕ್ಕೆ ಸಿಲುಕಿ ಮೇಲೆ ಬರಲಾಗದೆ ಮುಳುಗಿ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಸಿಪಿಐ ಯೋಗೇಶ್ ಆಗಮಿಸಿ ಪರಿಶೀಲಿಸಿದರು. ಅಗ್ನಿಶಾಮಕ ಸಿಬ್ಬಂದಿ ಮೃತ ದೇಹಕ್ಕಾಗಿ ಶೋಧ ಕಾರ್ಯಾದಲ್ಲಿ ತೊಡಗಿದ್ದಾರೆ. ಅರೇಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Translate »