ಮೈಸೂರಲ್ಲಿ ಕೊರೊನಾ ಮುಕ್ತ ವೃದ್ಧ ಹೃದಯಾಘಾತದಿಂದ ಸಾವು
ಮೈಸೂರು

ಮೈಸೂರಲ್ಲಿ ಕೊರೊನಾ ಮುಕ್ತ ವೃದ್ಧ ಹೃದಯಾಘಾತದಿಂದ ಸಾವು

May 15, 2020

ಮೈಸೂರು, ಮೇ 14(ಎಸ್‍ಬಿಡಿ)- ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದ ಮೈಸೂರಿನ ವೃದ್ಧರೊಬ್ಬರು ಹೃದಯಾಘಾತದಿಂದ ಗುರುವಾರ ಮೃತಪಟ್ಟಿದ್ದಾರೆ.

ಮೈಸೂರಿನ ನಜರ್‍ಬಾದ್‍ನ 72 ವರ್ಷದ(ಪಿ-273) ವೃದ್ಧ, ಕೊರೊನಾ ಸೋಂಕು ಮುಕ್ತರಾಗಿದ್ದರಾದರೂ ವಯೋಸಹಜ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದರು. ಗುರುವಾರ ರಾತ್ರಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್, ಪಿ-273 ವ್ಯಕ್ತಿಯು ಗುಣಮುಖರಾಗಿ ಕೋವಿಡ್ ಆಸ್ಪತ್ರೆಯಿಂದ ಬಿಡುಗಡೆಯಾದ ಬಳಿಕವೂ 4 ಬಾರಿ ಕೋವಿಡ್ ಪರೀಕ್ಷೆ ನಡೆಸಿದ್ದು, ನೆಗೆಟಿವ್ ವರದಿ ಬಂದಿದೆ. ಹಾಗಾಗಿ ಇವರು ಕೊರೊನಾದಿಂದ ಮೃತಪಟ್ಟಿಲ್ಲ. ಈ ಬಗ್ಗೆ ಆತಂಕಪಡುವ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಸೋಂಕು ಮುಕ್ತರಾಗಿ 17 ದಿನ: ಅನಾರೋಗ್ಯದಿಂದ ಖಾಸಗಿ ಆಸ್ಪತ್ರೆಗೆ ಹೋಗಿದ್ದ ಈ ವ್ಯಕ್ತಿಯಲ್ಲಿ ಕೊರೊನಾ ಗುಣಲಕ್ಷಣಗಳು ಕಾಣಿಸಿಕೊಂಡ ಕಾರಣಅವರನ್ನು ಕ್ವಾರಂಟೈನ್ ಮಾಡಿ, ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿತ್ತು. ಇವರಲ್ಲಿ ಕೊರೊನಾ ಸೋಂಕು ಇರುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟ ಹಿನ್ನೆಲೆಯಲ್ಲಿ ಇವರನ್ನು `ಪಿ-273’ SಂಖI(Seveಡಿe ಂಛಿuಣe ಖesಠಿiಡಿಚಿಣoಡಿಥಿ Iಟಟಟಿess) ರೋಗಿ ಎಂದು ಪರಿಗಣಿಸಿ, ಚಿಕಿತ್ಸೆ ನೀಡಲಾಗಿತ್ತು. ಏ.14ರಂದು ಅತ್ಯಂತ ಗಂಭೀರ ಪರಿಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಇವರನ್ನು ವೆಂಟಿಲೇಷನ್‍ನಲ್ಲಿ ಇರಿಸದೆ `ಕ್ರಿಟಿಕಲ್ ಕೇರ್ ಯೂನಿಟ್’ ತಜ್ಞರ ಸಲಹೆ ಮೇರೆಗೆ ಕೋವಿಡ್ ಆಸ್ಪತ್ರೆಯ ವೈದ್ಯರು ಹೈಫ್ಲೋ ಆಕ್ಸಿಜನ್ ಥೆರಪಿ ಚಿಕಿತ್ಸೆ ನೀಡಿದ್ದರು. ಈ ವಿಶೇಷ, ಪರಿಣಾಮಕಾರಿ ಚಿಕಿತ್ಸೆಯಿಂದಾಗಿ ಕೇವಲ 14 ದಿನಗಳಲ್ಲೇ ಸಂಪೂರ್ಣ ಗುಣಮುಖವಾಗಿದ್ದರಿಂದ ಏ.28ರಂದು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿತ್ತು. ನಂತರವೂ ಅವರನ್ನು ಹೋಂ ಕ್ವಾರಂಟೈನ್‍ನಲ್ಲಿಟ್ಟು ತೀವ್ರ ನಿಗಾ ವಹಿಸಲಾಗಿತ್ತು. ಆಸ್ಪತ್ರೆಯಿಂದ ಬಿಡುಗಡೆಯಾದ ನಂತರವೂ 4 ಬಾರಿ ಕೋವಿಡ್ ಪರೀಕ್ಷೆಗೆ ಒಳಪಡಿಸಿದ್ದು, ಎಲ್ಲಾ ಪರೀಕ್ಷೆಯಲ್ಲೂ ನೆಗೆಟಿವ್ ವರದಿ ದಾಖಲಾಗಿದೆ. ಅಲ್ಲದೆ 2 ದಿನಗಳಿಗೊಮ್ಮೆ ಸಾಮಾನ್ಯ ಆರೋಗ್ಯ ತಪಾಸಣೆಯನ್ನೂ ನಡೆಸಲಾಗುತ್ತಿತ್ತು ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ವೆಂಕಟೇಶ್ ತಿಳಿಸಿದ್ದಾರೆ. ಸೋಂಕು ಮುಕ್ತರಾಗಿದ್ದ ಪಿ-273 ವ್ಯಕ್ತಿಗೆ ಲೋ ಬಿಪಿ, ಉಸಿರಾಟದ ತೊಂದರೆಯಂತಹ ವಯೋಸಹಜ ಅನಾರೋಗ್ಯ ಸಮಸ್ಯೆಗಳಿದ್ದವು. ಹಲವು ಪರೀಕ್ಷೆಗಳಲ್ಲೂ ಕೋವಿಡ್ ನೆಗೆಟಿವ್ ವರದಿ ಬಂದಿದ್ದರ ಹಿನ್ನೆಲೆಯಲ್ಲಿ ಅವರನ್ನು ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಿಕೊಂಡು ಚಿಕಿತ್ಸೆ ನೀಡಲಾಗು ತ್ತಿತ್ತು. ಆದರೆ ಗುರುವಾರ ರಾತ್ರಿ ಅವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

Translate »