ಸಿಟಿ ಬಸ್ಸಿನಿಂದ ಬಿದ್ದು  ಗಾಯಗೊಂಡಿದ್ದ ವ್ಯಕ್ತಿ ಸಾವು
ಮೈಸೂರು

ಸಿಟಿ ಬಸ್ಸಿನಿಂದ ಬಿದ್ದು  ಗಾಯಗೊಂಡಿದ್ದ ವ್ಯಕ್ತಿ ಸಾವು

July 29, 2018

ಮೈಸೂರು: ನಗರ ಸಾರಿಗೆ ಬಸ್ಸಿನಿಂದ ಬಿದ್ದು ಗಾಯಗೊಂಡಿದ್ದ ವ್ಯಕ್ತಿ ಶುಕ್ರವಾರ ರಾತ್ರಿ ಕೆ.ಆರ್.ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.

ಮೈಸೂರು ತಾಲೂಕು ಹೊಸಹುಂಡಿ ಗ್ರಾಮದ ನಿವಾಸಿ ತಿಮ್ಮೇಗೌಡ (48) ಸಾವನ್ನಪ್ಪಿದವರು. ಜುಲೈ 25ರಂದು ಹೊಸಹುಂಡಿ ಗ್ರಾಮದ ಬಳಿ ಬಸ್ಸಿನಿಂದ ಆಯತಪ್ಪಿ ಬಿದ್ದು ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ಜೆಎಸ್‍ಎಸ್ ಆಸ್ಪತ್ರೆಗೆ ದಾಖಲಿಸಿ ನಂತರ ಕೆ.ಆರ್. ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ತಿಮ್ಮೇಗೌಡರು ಶುಕ್ರವಾರ ರಾತ್ರಿ ಕೊನೆಯುಸಿರೆಳೆದರು ಎಂದು ಪ್ರಕರಣ ದಾಖಲಿಸಿಕೊಂಡಿರುವ ಮೈಸೂರು ದಕ್ಷಿಣ ಗ್ರಾಮಾಂತರ ಠಾಣೆ ಸಬ್‍ಇನ್ಸ್‍ಪೆಕ್ಟರ್ ಜಯಪ್ರಕಾಶ್ ತಿಳಿಸಿದ್ದಾರೆ.

Translate »