ಹಾಸನದಲ್ಲಿ ಚಲಿಸುತ್ತಿದ್ದ ರೈಲಿನಿಂದ ಬಿದ್ದು ವೃದ್ಧ ಸಾವು
ಹಾಸನ

ಹಾಸನದಲ್ಲಿ ಚಲಿಸುತ್ತಿದ್ದ ರೈಲಿನಿಂದ ಬಿದ್ದು ವೃದ್ಧ ಸಾವು

September 8, 2018

ಹಾಸನ: ಮೈಸೂರಿನಿಂದ ಹಾಸನಕ್ಕೆ ಬರುತ್ತಿದ್ದ ರೈಲಿನಿಂದ ಬಿದ್ದು ವ್ಯಕ್ತಿಯೋರ್ವ ಸಾವನ್ನಪ್ಪಿರುವ ಘಟನೆ ನಗರ ಹೊರವಲಯದಲ್ಲಿ ನಡೆದಿದೆ. ಸುಮಾರು 62 ವರ್ಷದ ವಯೋವೃದ್ಧ ಸಾವನ್ನಪ್ಪಿದ್ದು, ಮೃತರ ಚಹರೆ ತಿಳಿದು ಬಂದಿಲ್ಲ. ಹಾಸನ ರೈಲ್ವೆ ನಿಲ್ದಾಣದಲ್ಲಿ ಇಳಿಯಬೇಕಿದ್ದ ವೃದ್ಧ ಬಾಗಿಲಿನ ಬಳಿ ಬಂದು ನಿಂತಿದ್ದ ಎನ್ನಲಾಗಿದ್ದು, ಭೂವನಹಳ್ಳಿ ಬ್ರಿಡ್ಜ್ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ. ರೈಲ್ವೆ ಪೆÇಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲಿಸಿದರಲ್ಲದೆ, ನಗರದ ಜಿಲ್ಲಾಸ್ಪತ್ರೆ ಶವಾಗಾರಕ್ಕೆ ಮೃತದೇಹ ರವಾನಿಸಿದ್ದಾರೆ. ಈ ಸಂಬಂಧ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Translate »