ಸಾಲ ಬಾಧೆ: ರೈತ ಆತ್ಮಹತ್ಯೆ
ಮೈಸೂರು

ಸಾಲ ಬಾಧೆ: ರೈತ ಆತ್ಮಹತ್ಯೆ

December 2, 2018

ಮೈಸೂರು: ಸಾಲ ಬಾಧೆ ತಾಳಲಾರದೆ ಕ್ರಿಮಿನಾಶಕ ಸೇವಿಸಿ ರೈತನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೆಚ್.ಡಿ. ಕೋಟೆ ತಾಲೂಕಿನ ಶಿಂಡೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಮಹೇಶ(33) ಆತ್ಮಹತ್ಯೆ ಮಾಡಿಕೊಂಡ ವರು. ಕಳೆದ ರಾತ್ರಿ ಕ್ರಿಮಿನಾಶಕ ಸೇವಿಸಿ ಅಸ್ವಸ್ಥರಾಗಿದ್ದ ಅವರನ್ನು ಮೈಸೂರಿನ ಕೆ.ಆರ್. ಆಸ್ಪತ್ರೆಗೆ ದಾಖಲು ಮಾಡಲಾಗಿತ್ತಾದರೂ, ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಿಗ್ಗೆ ಕೊನೆಯುಸಿರೆಳೆದರು. 2 ಎಕರೆ ಜಮೀನು ಹೊಂದಿದ್ದ ಮಹೇಶ, ನಾಲ್ಕು ಲಕ್ಷ ರೂ. ಸಾಲ ಮಾಡಿಕೊಂಡಿದ್ದರು. ಪತ್ನಿ ಹಾಗೂ ಇಬ್ಬರು ಪುತ್ರಿಯರನ್ನು ಹೊಂದಿದ್ದ ಅವರು ಸಾಲಕ್ಕೆ ಹೆದರಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಪ್ರಕರಣ ದಾಖಲಿಸಿಕೊಂಡಿರುವ ಹೆಚ್.ಡಿ.ಕೋಟೆ ಠಾಣೆ ಪೊಲೀಸರು ತಿಳಿಸಿದ್ದಾರೆ.

Translate »