ಅರ್ಥಪೂರ್ಣ ರಾಜ್ಯೋತ್ಸವ ಆಚರಣೆಗೆ ನಿರ್ಧಾರ
ಚಾಮರಾಜನಗರ

ಅರ್ಥಪೂರ್ಣ ರಾಜ್ಯೋತ್ಸವ ಆಚರಣೆಗೆ ನಿರ್ಧಾರ

October 31, 2018

ಚಾಮರಾಜನಗರ: ಜಿಲ್ಲಾಡಳಿ ತದ ವತಿಯಿಂದ ಎಲ್ಲರ ಸಹಕಾರದೊಂ ದಿಗೆ ನ.1ರಂದು ಚಾ.ನಗರದಲ್ಲಿ ಕನ್ನಡ ರಾಜೋತ್ಸವವನ್ನು ಅದ್ಧೂರಿಯಾಗಿ ಆಚರಿಸಲು ತೀರ್ಮಾನಿಸಲಾಯಿತು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕನ್ನಡ ರಾಜೋತ್ಸವ ಆಚರಣೆ ಸಂಬಂಧ ಜಿಲ್ಲಾಧಿಕಾರಿ ಬಿ.ಬಿ.ಕಾವೇರಿ ಅಧ್ಯಕ್ಷತೆ ಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲು ನಿರ್ಧಾರ ಕೈಗÉೂಳ್ಳಲಾಯಿತು.
ಸಭೆ ಆರಂಭದಲ್ಲೇ ಮಾತನಾಡಿದ ಕನ್ನಡಪರ ಹಾಗೂ ವಿವಿಧ ಸಂಘಟನೆಗಳ ಮುಖಂಡರು, ರಾಜ್ಯೋತ್ಸವ ಕಾರ್ಯ ಕ್ರಮ ಯಾವುದೇ ಗೊಂದಲವಿಲ್ಲದೆ ನಡೆ ಯಬೇಕು. ಸರ್ಕಾರಿ ಶಾಲಾ ಮಕ್ಕಳಿಗೆ ಸಾಂಸ್ಕøತಿಕ ಕಾರ್ಯಕ್ರಮದಲ್ಲಿ ಆದ್ಯತೆ ನೀಡಬೇಕು. ನವೆಂಬರ್ ತಿಂಗಳಿನಲ್ಲಿ ಸಂಪೂ ರ್ಣವಾಗಿ ಕನ್ನಡ ಚಲನಚಿತ್ರಗಳನ್ನು ಮಾತ್ರ ಚಿತ್ರಮಂದಿರಗಳಲ್ಲಿ ಪ್ರದರ್ಶಿಸ ಬೇಕು. ಕನ್ನಡ ಅನುಷ್ಠಾನವು ಪೂರ್ಣ ಪ್ರಮಾಣದಲ್ಲಿ ನಡೆಯಬೇಕು ಎಂಬ ಸಲಹೆ ನೀಡಿದರು.

ಕನ್ನಡ ಕುರಿತ ವಿಚಾರ ಸಂಕಿರಣವನ್ನು ನವೆಂಬರ್ ತಿಂಗಳಿನಲ್ಲಿ ಆಯೋಜಿಸಿ ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸ ಬೇಕು. ಎಲ್ಲ ಶಾಲೆಗಳು, ಬ್ಯಾಂಕುಗಳು, ಕಚೇರಿಯಲ್ಲಿ ಕಡ್ಡಾಯವಾಗಿ ಕನ್ನಡ ರಾಜ್ಯೋತ್ಸವ ಆಚರಣೆಯಾಗಬೇಕು ಎಂಬುದೂ ಸೇರಿದಂತೆ ವಿವಿಧ ಸಲಹೆ ಗಳನ್ನು ಮುಖಂಡರು ನೀಡಿದರು.

ಎಲ್ಲರ ಸಲಹೆಗಳನ್ನು ಆಲಿಸಿ ಮಾತ ನಾಡಿದ ಜಿಲ್ಲಾಧಿಕಾರಿ ಬಿ.ಬಿ.ಕಾವೇರಿ ಈ ಬಾರಿಯು ನಗರದ ಡಾ.ಬಿ.ಆರ್.ಅಂಬೇ ಡ್ಕರ್ ಕ್ರೀಡಾಂಗಣದಲ್ಲಿ ಕನ್ನಡ ರಾಜೋ ತ್ಸವ ಆಚರಣೆಗೆ ಅಗತ್ಯ ಸಿದ್ಧತೆ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಲಾ ಗುವುದು. ಸರ್ಕಾರಿ ಶಾಲಾ ಮಕ್ಕಳಿಗೆ ಹೆಚ್ಚು ಅವಕಾಶ ನೀಡಲು ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ಕೊಡಲಾಗು ತ್ತದೆ. ನವೆಂಬರ್ ತಿಂಗಳಿನಲ್ಲಿ ಜಿಲ್ಲೆಯ ಎಲ್ಲ ಚಿತ್ರಮಂದಿರಗಳಲ್ಲಿ ಕನ್ನಡ ಚಲ ನಚಿತ್ರಗಳನ್ನು ಕಡ್ಡಾಯವಾಗಿ ಪ್ರದರ್ಶಿ ಸಲು ಸೂಚನೆ ನೀಡಲಾಗುತ್ತದೆ. ಕನ್ನಡ ಅನುಷ್ಠಾನ ಸಂಬಂಧ ನವೆಂಬರ್ 2ನೇ ವಾರದಲ್ಲಿ ಪ್ರತ್ಯೇಕ ಸಭೆ ಕರೆಯಲಾಗು ವುದೆಂದು ತಿಳಿಸಿದರು.
ಕನ್ನಡ ರಾಜ್ಯೋತ್ಸವದಂದು ಶಾಲಾ ಕಾಲೇಜು ವಿದ್ಯಾರ್ಥಿಗಳಿಂದ ಪಥ ಸಂಚ ಲನ, ನಾಡು ನುಡಿ ಕುರಿತು ಕಾರ್ಯ ಕ್ರಮಗಳನ್ನು ಪ್ರಸ್ತುತ ಪಡಿಸಬೇಕು. ಸಂಜೆಯ ವೇಳೆ ಸಾಂಸ್ಕøತಿಕ ಕಾರ್ಯಕ್ರಮಗಳಲ್ಲೂ ವೈವಿಧ್ಯತೆ ಮೂಡಿ ಬರಬೇಕು. ಈ ನಿಟ್ಟಿ ನಲ್ಲಿ ಈಗಾಗಲೇ ಶಿಕ್ಷಣ ಇಲಾಖೆ ಅಧಿ ಕಾರಿಗಳಿಗೆ ಅಗತ್ಯ ತಾಲೀಮು ನಡೆಸಲು ನಿರ್ದೇಶನ ನೀಡಲಾಗಿದೆ ಎಂದು ಜಿಲ್ಲಾ ಧಿಕಾರಿ ಕಾವೇರಿ ತಿಳಿಸಿದರು.

ರಾಜ್ಯೋತ್ಸವಕ್ಕೆ ಪೂರ್ವಭಾವಿಯಾಗಿ ನಗರದ ಪ್ರಮುಖ ರಸ್ತೆ, ಕ್ರೀಡಾಂಗಣ ಸುತ್ತಮುತ್ತಲ ಪ್ರದೇಶಗಳಲ್ಲಿ ವಿಶೇಷವಾಗಿ ಸ್ವಚ್ಛತೆ ಕಾರ್ಯ ಕೈಗೊಳ್ಳಬೇಕು. ಕಾರ್ಯ ಕ್ರಮದಂದು ತಳಿರು-ತೋರಣಗಳಿಂದ ಸಿಂಗರಿಸಬೇಕು. ಪ್ರಮುಖ ಸ್ಥಳಗಳಲ್ಲಿ ದೀಪಾ ಲಂಕಾರ ವ್ಯವಸ್ಥೆ ಇರಬೇಕೆಂದು ನಗರ ಸಭೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ತಿಳಿಸಿದರು.

ಜಿಪಂ ಸಿಇಓ ಡಾ.ಕೆ.ಹರೀಶ್ ಕುಮಾರ್, ಎಎಸ್‍ಪಿ ಗೀತಾ ಪ್ರಸನ್ನ, ಕನ್ನಡ ಪರ ಸಂಘಟನೆಗಳ ಮುಖಂಡರಾದ ಶಾ. ಮುರಳಿ, ಚಾ.ರಂ. ಶ್ರೀನಿವಾಸಗೌಡ, ಚಾ.ಗು. ನಾಗರಾಜು, ಚಾ.ಹ. ಶಿವರಾಜು, ಗು. ಪುರುಷೋತ್ತಮ್, ಸಿ.ಎಂ. ಕೃಷ್ಣಮೂರ್ತಿ, ಜಿ. ಬಂಗಾರು, ಆಲೂರು ನಾಗೇಂದ್ರ, ಅಂಬರೀಷ್, ಬ್ಯಾಡಮೂಡ್ಲು ಬಸವಣ್ಣ, ಶಿವಣ್ಣ, ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಅಧ್ಯಕ್ಷ ವಿನಯ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಎಚ್.ಚನ್ನಪ್ಪ, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿ ಕಾರಿಗಳು ಸಭೆಯಲ್ಲಿ ಹಾಜರಿದ್ದರು.

Translate »