ಮುಡಾದಿಂದ ನಾಗರಿಕ ಸೌಕರ್ಯ ನಿವೇಶನಗಳ 30 ವರ್ಷಗಳ ಅವಧಿಯ ಗುತ್ತಿಗೆಗೆ ನಿರ್ಧಾರ
ಮೈಸೂರು

ಮುಡಾದಿಂದ ನಾಗರಿಕ ಸೌಕರ್ಯ ನಿವೇಶನಗಳ 30 ವರ್ಷಗಳ ಅವಧಿಯ ಗುತ್ತಿಗೆಗೆ ನಿರ್ಧಾರ

December 16, 2020

ಮೈಸೂರು, ಡಿ.15(ಆರ್‍ಕೆಬಿ)- ಕರ್ನಾಟಕ ನಗರಾಭಿವೃದ್ಧಿ ಪ್ರಾಧಿಕಾರಗಳ (ನಾಗರಿಕ ಸೌಲಭ್ಯಗಳನ್ನು ಒಳಗೊಂಡ ನಿವೇಶನಗಳ ಹಂಚಿಕೆ) 1991ರ ನಿಯಮ 3(1)ರನ್ವಯ ನಾಗರಿಕ ಸೌಕರ್ಯ ನಿವೇಶನಗಳನ್ನು ಆದ್ಯತೆ ಮೇರೆಗೆ ಹಾಗೂ ನಿಯಮ 8(4)ರನ್ವಯ ಶೇ.50ರಷ್ಟು ರಿಯಾಯಿತಿ ದರದಲ್ಲಿ ಕೇಂದ್ರ ಅಥವಾ ರಾಜ್ಯ ಸರ್ಕಾರಗಳ ಇಲಾಖೆಗಳು ಮತ್ತು ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಸ್ಥಾಪಿಸಲ್ಪಟ್ಟ ನಿಗಮ ಅಥವಾ ಯಾವುದೇ ಸಂಸ್ಥೆಗಳಿಗೆ ನಿಯಮ 10(1)ರನ್ವಯ 30 ವರ್ಷಗಳ ಅವಧಿಗೆ ಗುತ್ತಿಗೆ ಆಧಾರದ ಮೇಲೆ ಮಂಜೂರು ಮಾಡಲು ಅವಕಾಶವಿದೆ ಎಂದು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಡಾ.ಡಿ.ಬಿ.ನಟೇಶ್ ತಿಳಿಸಿದ್ದಾರೆ.

ಮುಡಾ ವತಿಯಿಂದ 262 ನಾಗರಿಕ ಸೌಕರ್ಯ ನಿವೇಶನಗಳನ್ನು ಹಂಚಿಕೆ ಮಾಡುವ ಸಂಬಂಧ ಪ್ರಕಟಣೆ ಹೊರಡಿಸಲು ನಿರ್ಧರಿಸಲಾಗಿದೆ. ಮೈಸೂರು ಜಿಲ್ಲೆ ಮತ್ತು ನಗರ ವ್ಯಾಪ್ತಿಯಲ್ಲಿರುವ ಎಲ್ಲಾ ಸರ್ಕಾರಿ ಇಲಾಖೆಗಳು, ಸಮಾಜ ಕಲ್ಯಾಣ ಇಲಾಖೆ ಮತ್ತು ಹಿಂದುಳಿದ ವರ್ಗಗಳ ಇಲಾಖೆ ವಿದ್ಯಾರ್ಥಿನಿಲಯಗಳಿಗೆ ನಾಗರಿಕ ಸೌಕರ್ಯ ನಿವೇಶನ ಅಗತ್ಯವಿದ್ದಲ್ಲಿ 2020ರ ಡಿ.31ರೊಳಗೆ ಲಿಖಿತವಾಗಿ ಕೋರಿಕೆ ಸಲ್ಲಿಸುವಂತೆ ತಿಳಿಸಿದ್ದಾರೆ.

Translate »