ನವದೆಹಲಿ, ಜೂ.23-12ನೇ ತರಗತಿಯ ಬಾಕಿ ಉಳಿದ ಪರೀಕ್ಷೆಗಳನ್ನು ರದ್ದುಪಡಿ ಸುವ ಕುರಿತು ಬುಧವಾರ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆ ಇದೆ ಎಂದು ಕೇಂದ್ರ ಸರ್ಕಾರ ಮತ್ತು ಕೇಂದ್ರ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ(ಸಿಬಿಎಸ್‍ಇ) ಮಂಗಳವಾರ ಸುಪ್ರೀಂಕೋರ್ಟ್‍ಗೆ ತಿಳಿಸಿವೆ. ಜುಲೈ 1ರಿಂದ 15ರ ತನಕ 12ನೇ ತರಗತಿಯ ಪರೀಕ್ಷೆ ಗಳನ್ನು ನಡೆಸಲು ಸಿಬಿಎಸ್‍ಇ ಹೊರಡಿಸಿದ್ದ ಅಧಿಸೂಚನೆಯನ್ನು ರದ್ದುಪಡಿಸುವಂತೆ ಕೋರಿ ಕೆಲ ಪೆÇೀಷಕರು ಕೋರ್ಟ್‍ಗೆ ಅರ್ಜಿ ಸಲ್ಲಿಸಿದ್ದಾರೆ. ಆಂತರಿಕ ಮೌಲ್ಯಮಾಪನ ಮತ್ತು ಪ್ರಾಯೋಗಿಕ ಪರೀಕ್ಷೆಗಳ ಆಧಾರದಲ್ಲಿ ವಿದ್ಯಾರ್ಥಿಗಳಿಗೆ ಅಂಕಗಳನ್ನು ನೀಡಬೇ ಕೆಂದೂ ಈ ಅರ್ಜಿದಾರರು ಮನವಿಯಲ್ಲಿ ಕೋರಿದ್ದಾರೆ. ಅರ್ಜಿಯ ವಿಚಾರಣೆ ನಡೆಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು, ಕೋವಿಡ್-19 ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪರೀಕ್ಷೆ ರದ್ದು ಮಾಡುವ ಕುರಿತು ಈಗಲೇ ಹೇಳುವುದು ಕಷ್ಟ. ಈ ಕುರಿತು ಸರ್ಕಾರ ಶೀಘ್ರ ನಿರ್ಧಾರ ಪ್ರಕಟಿಸಲಿದೆ ಎಂದರು. ವಿದ್ಯಾರ್ಥಿಗಳ ಆತಂಕದ ಬಗ್ಗೆ ಸರ್ಕಾರ ಮತ್ತು ಪರೀಕ್ಷಾ ಮಂಡಳಿಗೆ ತಿಳಿದಿದೆ. ವಿಚಾರಣೆಯನ್ನು ಒಂದು ದಿನದ ಮಟ್ಟಿಗೆ ಮುಂದೂಡಿ, ಈ ಸಂಬಂಧ ಸರ್ಕಾರ ತೆಗೆದುಕೊಳ್ಳುವ ನಿರ್ಧಾರ ವನ್ನು ಕೋರ್ಟ್ ಗಮನಕ್ಕೆ ತರುವುದಾಗಿ ಮೆಹ್ತಾ ಹೇಳಿದರು. ಮೆಹ್ತಾ ಅವರ ಮನವಿ ಯನ್ನು ಪರಿಗಣಿಸಿದ ಕೋರ್ಟ್, ವಿಚಾರಣೆಯನ್ನು ಜೂನ್ 25ಕ್ಕೆ ಮುಂದೂಡಿದೆ.

ಮೈಸೂರು