ಪ್ರತೀ ಗ್ರಾ.ಪಂ.ಗಳಲ್ಲಿ ಕೋವಿಡ್-19 ಕೇರ್ ಸೆಂಟರ್ ತೆರೆಯಲು ನಿರ್ಧಾರ
ಕೊಡಗು

ಪ್ರತೀ ಗ್ರಾ.ಪಂ.ಗಳಲ್ಲಿ ಕೋವಿಡ್-19 ಕೇರ್ ಸೆಂಟರ್ ತೆರೆಯಲು ನಿರ್ಧಾರ

March 24, 2020

ಮಡಿಕೇರಿ,ಮಾ.23-ಪ್ರತೀ ಗ್ರಾಮ ಪಂಚಾಯಿತಿಗಳಲ್ಲಿ ಕೋವಿಡ್-19 ಕೇರ್ ಸೆಂಟರ್‍ನ್ನು ತೆರೆಯಲು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರ ಅಧ್ಯಕ್ಷತೆಯಲ್ಲಿ ಸೋಮವಾರ ನಡೆದ ಅಧಿಕಾರಿಗಳ ಸಭೆಯಲ್ಲಿ ತೀರ್ಮಾನಿಸಲಾಯಿತು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂ ಗಣದಲ್ಲಿ ಕೊರೊನಾ ವೈರಸ್ ಮುಂದಿನ ಹಂತದಲ್ಲಿ ಅನುಸರಿಸಬೇಕಾದ ಕ್ರಮಗಳ ಬಗ್ಗೆ ನಡೆದ ಅಧಿಕಾರಿಗಳ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಯಿತು.

ಪ್ರತೀ ಹೋಬಳಿ ಕೇಂದ್ರಕ್ಕೆ ನೋಡಲ್ ಅಧಿಕಾರಿಗಳನ್ನು ನಿಯೋಜಿಸಲಾಗಿದ್ದು, ನೋಡಲ್ ಅಧಿಕಾರಿಗಳು ತಮ್ಮ ಹಂತದಲ್ಲಿ ಕೊರೊನಾ ವೈರಸ್ ನಿಯಂತ್ರಣ ಸಂಬಂಧ ಅಗತ್ಯ ಕ್ರಮಕೈಗೊಳ್ಳುವಂತೆ ಡಿಸಿ ಸೂಚಿಸಿದರು.

ಮನೆ ಬಾಗಿಲಿಗೆ ಎರಡು ತಿಂಗಳ ಪಡಿ ತರ ಬರಲಿದ್ದು, ಬಯೋಮೆಟ್ರಿಕ್ ಇರುವು ದಿಲ್ಲ ಎಂದು ಅವರು ಹೇಳಿದರು. ಯಾವುದೇ ಕಾರಣಕ್ಕೂ ಗೊಂದಲಕ್ಕೆ ಒಳಗಾಗದೆ ಜನರು ಗುಂಪು ಸೇರಬಾರದು ಎಂದು ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು.

ತರಕಾರಿ, ದಿನಸಿ ಪದಾರ್ಥಗಳ ಅಂಗಡಿಗಳಿಗೆ ಯಾವುದೇ ರೀತಿಯ ತೊಂದರೆಯಿಲ್ಲ. ಉಳಿದಂತೆ ಸರ್ಕಾರದ ನಿರ್ದೇಶನದಂತೆ ಲಾಕ್‍ಡೌನ್ ಮಾಡ ಬೇಕು. ಯಾವುದೇ ಕಾರಣಕ್ಕೂ ಇದರಲ್ಲಿ ವಿನಾಯಿತಿ ಇಲ್ಲ ಎಂದು ಜಿಲ್ಲಾಧಿಕಾರಿ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದರು.

ಕೇರಳ ರಾಜ್ಯಕ್ಕೆ ಕೊಡಗು ಜಿಲ್ಲೆಯ ಮೂಲಕ ವಾಹನಗಳು ಹೋಗಲು ಬಿಡು ವುದಿಲ್ಲ ಎಂದು ಜಿಲ್ಲಾಧಿಕಾರಿ ತಿಳಿಸಿದರು. ಮನೆ ಸಂಪರ್ಕ ತಡೆಯಲ್ಲಿ 248 ಮಂದಿ ಇದ್ದು, ಇವರು ಎಲ್ಲಿಯೂ ತಿರುಗಾಡದಂತೆ ಕ್ರಮ ವಹಿಸಬೇಕು ಎಂದು ಅವರು ಸೂಚಿಸಿದರು.

ಮುಂದಿನ ಹಂತದಲ್ಲಿ ಸವಾಲುಗಳನ್ನು ಎದುರಿಸಲು ಇನ್ನಷ್ಟು ಮುನ್ನೆಚ್ಚರಿಕಾ ಕ್ರಮ ಗಳನ್ನು ಕೈಗೊಳ್ಳಬೇಕಿದೆ. ಆ ನಿಟ್ಟಿನಲ್ಲಿ ಅಧಿ ಕಾರಿಗಳು ಕಾರ್ಯ ಪ್ರವೃತ್ತರಾಗಬೇಕು ಎಂದು ಅನೀಸ್ ಕಣ್ಮಣಿ ಜಾಯ್ ನಿರ್ದೇಶನ ನೀಡಿದರು.

ಸರ್ಕಾರದ ನಿರ್ದೇಶನದಂತೆ ಲಾಕ್‍ಡೌನ್ ಕಾರ್ಯವನ್ನು ಕಠಿಣವಾಗಿ ನಿರ್ವಹಿಸ ಬೇಕಿದೆ. ಯಾರಿಗೂ ವಿಧೇಯತೆ ತೋರು ವುದು ಅಗತ್ಯವಿಲ್ಲ. ಲಾಕ್‍ಡೌನ್ ಸಂದರ್ಭ ದಲ್ಲಿ ಏನು ಮಾಡಬೇಕು, ಏನು ಮಾಡ ಬಾರದು ಎಂಬ ಬಗ್ಗೆ ಮಾಹಿತಿ ನೀಡ ಲಾಗಿದ್ದು, ಅದರಂತೆ ಅನುಸರಿಸಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.

ಜಿಲಾ ್ಲಮಟ್ಟದ ಅಧಿಕಾರಿಗಳು ವಾಟ್ಸಪ್ ಮುಖಾಂತರ ಮಾಹಿತಿ ನೀಡಬೇಕು. ಜಿಲ್ಲೆ ಯಲ್ಲಿ ಈಗಾಗಲೇ ಒಂದು ಕೊರೊನಾ ಸೋಂಕು ದೃಢಪಟ್ಟಿದೆ. 4 ಜನರ ವರದಿ ಗಳು ನಿರೀಕ್ಷೆಯಲ್ಲಿದೆ. ಈ ನಿಟ್ಟಿನಲ್ಲಿ ಲಾಕ್ ಡೌನ್ ಸಂಬಂಧಿಸಿದಂತೆ ಆದೇಶವನ್ನು ಪಾಲಿಸಬೇಕು ಎಂದು ಹೇಳಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಡಿ.ಪೆನ್ನೇಕರ್ ಅವರು ಜಿಲ್ಲೆ ಯಲ್ಲಿ 13 ಚೆಕ್‍ಪೋಸ್ಟ್‍ಗಳನ್ನು ಸ್ಥಾಪಿಸ ಲಾಗಿದ್ದು, ಸರ್ಕಾರದ ನಿರ್ದೇಶನದಂತೆ ಕಟ್ಟು ನಿಟ್ಟಾಗಿ ಪರಿಶೀಲನೆ ನಡೆಸಲಾಗುತ್ತಿದೆ ಎಂದರು.

ಎಡಿಸಿ ಡಾ.ಸ್ನೇಹ ಅವರು ಮುಂದಿನ ದಿನಗಳಲ್ಲಿ ಅನುಸರಿಸ ಬೇಕಾದ ಕ್ರಮಗಳ ಬಗ್ಗೆ ಹಲವು ಮಾಹಿತಿ ನೀಡಿದರು. ಉಪ ವಿಭಾಗಾಧಿಕಾರಿ ಟಿ. ಜವರೇಗೌಡ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾ ಧಿಕಾರಿ ಡಾ.ಕೆ.ಮೋಹನ್, ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕ ಕಾರ್ಯಪ್ಪ, ನಾನಾ ಇಲಾಖೆ ಅಧಿಕಾರಿಗಳು ಇದ್ದರು.

Translate »