ಬೆಂಗಳೂರು, ಫೆ. 14(ಕೆಎಂಶಿ)- ಸೈಬರ್ ಕಾನೂನಿನಲ್ಲಿ ಸಾಕಷ್ಟು ಸುಧಾರಣೆಗಳು ಮುಂದಿನ ದಿನಗಳಲ್ಲಿ ಬರಲಿವೆ ಎಂದು ಉಪಮುಖ್ಯ ಮಂತ್ರಿ ಡಾ.ಸಿ.ಎನ್.ಅಶ್ವತ್ಥ್ ನಾರಾಯಣ್ ತಿಳಿಸಿದ್ದಾರೆ. ಕರ್ನಾಟಕ ಪತ್ರಕರ್ತರ ಸಹಕಾರ ಸಂಘದ 70ನೇ ವಾರ್ಷಿಕ ಸಮಾರಂಭದಲ್ಲಿ ಮಾತನಾಡಿದ ಅವರು, ದೊಡ್ಡ ಮಟ್ಟದಲ್ಲಿ ಇರುವ ಸೈಬರ್ ಕ್ರೈಂ ನಿಯಂತ್ರಣಕ್ಕೆ ಇರುವ ಕಾನೂನುಗಳಲ್ಲಿ ಸುಧಾರಣೆಗಳನ್ನು ತರಬೇಕಿದೆ ಎಂದರು. ಮುಂದಿನ ದಿನಗಳಲ್ಲಿ ಆನ್‍ಲೈನ್ ಮಾಧ್ಯಮಕ್ಕೆ ಹೆಚ್ಚು ಆದ್ಯತೆ ದೊರೆಯಲಿದೆ. ಡಿಜಿಟಲ್ ಮಾಧ್ಯಮ ಎಲ್ಲರಿಗೂ ಮುಕ್ತವಾಗಿದೆ, ದೊಡ್ಡ ಮಟ್ಟದಲ್ಲಿ ಬೆಳೆದು ನಿಂತಿದೆ ಅಲ್ಲದೆ, ಸಮಾಜಕ್ಕೆ ಶಕ್ತಿ ತುಂಬುತ್ತಿದೆ. ಡಿಜಿಟಲ್ ಯುಗದಲ್ಲಿ ಜಗತ್ತು ವೇಗವಾಗಿ ಸಾಗುತ್ತಿದೆ, ಇದನ್ನು ಬದುಕಿನಲ್ಲಿ ಅಳವಡಿಸಿಕೊಂಡು ಎಚ್ಚರಿಕೆಯಿಂದ ನಿಭಾಯಿಸಬೇಕು ಎಂದರು.