ಮೈಸೂರು: ಭಾರತ ಚುನಾವಣಾ ಆಯೋಗವು ಮತದಾನ ದಿನ ವಾದ ಮೇ 12ರ ಸರ್ಕಾರಿ ಹಾಗೂ ಶಾಲಾ ಕಛೇರಿಗಳು, ಅನು ದಾನಿತ ವಿದ್ಯಾಸಂಸ್ಥೆಗಳೂ ಸೇರಿದಂತೆ ಎಲ್ಲಾ ಶೈಕ್ಷಣ ಕ ಸಂಸ್ಥೆಗಳು ರಾಜ್ಯ ಮತ್ತು ಕೇಂದ್ರ ಸರ್ಕಾರದ ಕಛೇರಿಗಳು, ರಾಷ್ಟ್ರೀಕೃತ ಹಾಗೂ ಇತರ ಬ್ಯಾಂಕುಗಳು, ಸರ್ಕಾರಿ ಕಾರ್ಖಾನೆಗಳು, ಕೇಂದ್ರ ಸರ್ಕಾರದ ಕಾರ್ಖಾನೆ ಗಳು, ಉಳಿದ ಕೈಗಾರಿಕಾ ಸಂಸ್ಥೆಗಳು ಹಾಗೂ ಸಹಕಾರಿ ರಂಗದ ಸಂಘ ಸಂಸ್ಥೆಗಳು ವೇತನ ಸಹಿತ ರಜೆ ಯನ್ನು ಘೋಷಿಸುವಂತೆ ಸಂಬಂಧಪಟ್ಟ ಇಲಾಖಾ ಮುಖ್ಯಸ್ಥರು/ಸಕ್ಷಮ ಪ್ರಾಧಿಕಾರಿ ಗಳಿಗೆ ಸೂಚಿಸಿ ಆದೇಶ ಹೊರಡಿಸು ವಂತೆ ಸರ್ಕಾರದ ಪ್ರಧಾನ ಕಾರ್ಯ ದರ್ಶಿಗಳು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ, ಬೆಂಗಳೂರು ಅವರಿಗೆ ಸಹಾಯಕ ಮುಖ್ಯ ಚುನಾವ ಣಾಧಿಕಾರಿಗಳು ಸಲಹೆ ನೀಡಿದ್ದಾರೆ.