ತ.ನಾಡಿಗೆ ಮನ್ನಣೆ: ಮೇಕೆದಾಟು ಯೋಜನೆಗೆ ಅನುಮತಿ ವಿಳಂಬ
ಚಾಮರಾಜನಗರ

ತ.ನಾಡಿಗೆ ಮನ್ನಣೆ: ಮೇಕೆದಾಟು ಯೋಜನೆಗೆ ಅನುಮತಿ ವಿಳಂಬ

January 3, 2022

ಚಾಮರಾಜನಗರ,ಜ.2(ಎಸ್‍ಎಸ್)-ತಮಿಳುನಾಡಿನ ಮಾತಿಗೆ ಮನ್ನಣೆ ನೀಡು ತ್ತಿರುವ ಕೇಂದ್ರ ಸರ್ಕಾರ, ಮೇಕೆದಾಟು ಯೋಜನೆಗೆ ಅನುಮತಿ ನೀಡದೇ ರಾಜ ಕೀಯ ಮಾಡುತ್ತಿದೆ ಎಂದು ಆರೋಪಿಸಿದ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ, ಮೇಕೆದಾಟು ಯೋಜನೆಗಾಗಿ ಮನೆಗೊಬ್ಬ ರಂತೆ ಪಾದಯಾತ್ರೆಯಲ್ಲಿ ಭಾಗವಹಿಸಬೇ ಕೆಂದು ಮನವಿ ಮಾಡಿದರು.

ಚಾಮರಾಜನಗರದಲ್ಲಿ ಭಾನುವಾರ ಆಯೋಜಿಸಿದ್ದ ಮೇಕೆದಾಟು ಯೋಜನೆ ಕುರಿತ ಜನ ಜಾಗೃತಿ ಸಮಾವೇಶ ಹಾಗೂ ಕಾಂಗ್ರೆಸ್ ಸದಸ್ಯತ್ವ ನೋಂದಣಿ ಅಭಿಯಾನ ದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಮೇಕೆದಾಟು ಯೋಜನೆ ಜಾರಿ ಮಾಡ ಬಾರದು ಎಂದು ತಮಿಳುನಾಡು ಬಿಜೆಪಿ ಅಧ್ಯಕ್ಷೆ ಅಣ್ಣಾಮಲೈ ಅಲ್ಲಿ ಧರಣಿ ಕುಳಿತಿದ್ದಾರೆ. ತಮಿಳುನಾಡಿನ ಬಿಜೆಪಿ ಉಸ್ತುವಾರಿಯಾಗಿ ರುವ ಸಿ.ಟಿ.ರವಿ ಅವರೂ ಕೂಡ ಮೇಕೆ ದಾಟು ಯೋಜನೆಗೆ ವಿರುದ್ಧವಾಗಿದ್ದಾರೆ. ಹೀಗಾಗಿಯೇ ಯೋಜನೆ ಜಾರಿಯಾಗದೇ ಅನಗತ್ಯವಾಗಿ ವಿಳಂಬವಾಗುತ್ತಿದೆ. ಇದನ್ನು ವಿರೋಧಿಸಿ ಮೇಕೆದಾಟು ಯೋಜನೆಗೆ ಆಗ್ರ ಹಿಸಿ ಕಾಂಗ್ರೆಸ್ ಜ.9ರಿಂದ ಮೇಕೆದಾಟಿನಿಂದ ಬೆಂಗಳೂರುವರೆಗೆ ಪಾದಯಾತ್ರೆ ಹಮ್ಮಿ ಕೊಂಡಿದೆ ಎಂದರು.

1968ರಲ್ಲಿ ಅಂದಿನ ಕಾಂಗ್ರೆಸ್ ಸರ್ಕಾರ ಮೇಕೆದಾಟು ಯೋಜನೆಗೆ ಪ್ರಯತ್ನಿಸಿತ್ತು. ಆದರೆ ಆಗ ಕರ್ನಾಟಕ ಮತ್ತು ತಮಿಳುನಾಡು ನಡುವಿನ ಜಲ ವಿವಾದ ನ್ಯಾಯಾ ಲಯದಲ್ಲಿದ್ದುದರಿಂದ ಯೋಜನೆಯ ಅನುಷ್ಠಾನ ಸಾಧ್ಯವಾಗಲಿಲ್ಲ. ನಂತರ ನಾನು ಮುಖ್ಯಮಂತ್ರಿಯಾಗಿದ್ದಾಗ 2017ರಲ್ಲಿ ಈ ಯೋಜನೆಗೆ 5912 ಕೋಟಿ ರೂ. ವೆಚ್ಚದ ಡಿಪಿಆರ್ ಸಿದ್ಧಪಡಿಸಲಾಗಿತ್ತು. ನಂತರ ಸಮ್ಮಿಶ್ರ ಸರ್ಕಾರ ಬಂದ ಮೇಲೆ ಜಲ ಸಂಪನ್ಮೂಲ ಸಚಿವರಾಗಿದ್ದ ಡಿ.ಕೆ.ಶಿವಕುಮಾರ್ 9 ಸಾವಿರ ಕೋಟಿಯ ಡಿಪಿಆರ್ ಅನ್ನು ಸಿದ್ಧಪಡಿಸಿ ಕೇಂದ್ರಕ್ಕೆ ಕಳುಹಿಸಿದ್ದರು. ಆಗಲೂ ಕೂಡ ಕೇಂದ್ರ ಸರ್ಕಾರ ಯೋಜನೆಗೆ ಅನುಮತಿ ಕೊಟ್ಟಿಲ್ಲ ಎಂದು ವಿವರಿಸಿದರು. ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಯೋಜನೆ ಜಾರಿಗೆ ಪ್ರಯತ್ನಿಸದೇ ರಾಜಕೀಯ ಲಾಭಕ್ಕಾಗಿ ಪಾದಯಾತ್ರೆ ಮಾಡುತ್ತಿದ್ದಾರೆ ಎಂದು ಸಚಿವ ಗೋವಿಂದ ಕಾರಜೋಳ ಸುಳ್ಳು ಆರೋಪ ಮಾಡಿದ್ದಾರೆ. ಅವರ ಆರೋಪಕ್ಕೆ ಶಕ್ತಿ ಇದ್ದರೆ ಬಿಡುಗಡೆ ಮಾಡಲಿ ಎಂದು ಸವಾಲು ಹಾಕಿದ ಸಿದ್ದರಾಮಯ್ಯ, ಇದೊಂದು ಕುಡಿಯುವ ನೀರಿನ ಯೋಜನೆ. ಇದಕ್ಕೆ ಯಾರೂ ತಕರಾರು ಮಾಡುವಂತಿಲ್ಲ. ಕೇಂದ್ರದ ಅರಣ್ಯ ಇಲಾಖೆ ಅನುಮತಿ ಸಿಕ್ಕರೆ ಅಣೆಕಟ್ಟು ನಿರ್ಮಾಣಕ್ಕೆ ಬೇರೆ ಯಾವ ಅನು ಮತಿಯೂ ಬೇಕಾಗಿಲ್ಲ. ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಸರ್ಕಾರಗಳೇ ಇವೆ. ಆದರೂ ಯಾಕೆ ಯೋಜನೆ ಜಾರಿ ಮಾಡದೆ ಸುಮ್ಮನಿದ್ದಾರೆ ಎಂದು ಅವರು ಪ್ರಶ್ನಿಸಿದರು.

ಒಂದು ಸಾಮಾನ್ಯ ವರ್ಷದಲ್ಲಿ ಕರ್ನಾಟಕದಿಂದ ತಮಿಳುನಾಡಿಗೆ 177.25 ಟಿಎಂಸಿ ಕಾವೇರಿ ನೀರು ಹರಿಸಬೇಕು ಎಂದು ಸುಪ್ರೀಂಕೋರ್ಟ್ ಆದೇಶವಿದೆ. ಅದನ್ನು ಬಿಟ್ಟರೆ ಕಾವೇರಿ ನೀರಿನ ವಿಚಾರದಲ್ಲಿ ತಕರಾರು ಮಾಡಲು ತಮಿಳುನಾಡಿಗೆ ಬೇರೆ ಯಾವುದೇ ರೀತಿಯ ಹಕ್ಕು ಕಾನೂನಿನಲ್ಲಿ ಇಲ್ಲ. ಪ್ರತೀ ವರ್ಷ ಸುಮಾರು 200 ಟಿಎಂಸಿ ನೀರು ಸಮುದ್ರ ಪಾಲಾಗುವ ಮೂಲಕ ವ್ಯರ್ಥವಾಗುತ್ತಿದೆ. ಹೀಗೆ ವ್ಯರ್ಥವಾಗುವ ನೀರನ್ನು ಕುಡಿಯುವ ಮತ್ತು ವಿದ್ಯುತ್ ಉತ್ಪಾದನೆಗೆ ಬಳಕೆ ಮಾಡಿಕೊಳ್ಳುವ ಉದ್ದೇಶದಿಂದ ಮೇಕೆದಾಟು ಯೋಜನೆ ರೂಪಿಸಲಾಗಿದೆ. ವಿದ್ಯುತ್ ಉತ್ಪಾದನೆಯಾದ ಮೇಲೆ ಆ ನೀರೂ ಕೂಡ ತಮಿಳುನಾಡಿಗೆ ಹೋಗುತ್ತದೆ. ಅದು ಅವರಿಗೂ ಇನ್ನೊಂದು ಲಾಭದಾಯಕ ಅಂಶ ಎಂದು ಸವಿವರವಾಗಿ ವಿವರಿಸಿದ ಸಿದ್ದರಾಮಯ್ಯ, ಮೇಕೆದಾಟು ಯೋಜನೆ ಜಾರಿ ಮಾಡದಂತೆ ತಮಿಳುನಾಡು ಸರ್ಕಾರ ಸುಪ್ರೀಂಕೋರ್ಟ್ ಮೊರೆ ಹೋಗಿತ್ತು. ನ್ಯಾಯಾಲಯ ಅವರ ಮನವಿಯನ್ನು ಪುರಸ್ಕರಿಸಿಲ್ಲ. ಆದರೆ ತಮಿಳುನಾಡು ಮಾತಿಗೆ ಮನ್ನಣೆ ಕೊಟ್ಟು ಕೇಂದ್ರ ಸರ್ಕಾರ ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ಅನುಮತಿ ಕೊಡುತ್ತಿಲ್ಲ ಎಂದು ಆರೋಪಿಸಿದರು. ಹೇಮಾವತಿ, ಕಬಿನಿ, ಕೆಆರ್‍ಎಸ್‍ನಲ್ಲಿ ನೀರಿದ್ದರೆ ಮಾತ್ರ ಚಾಮರಾಜನಗರ, ಮೈಸೂರು, ತುಮಕೂರು, ಮಂಡ್ಯ ಜಿಲ್ಲೆಯ ಕೃಷಿ ಚಟುವಟಿಕೆಗೆ ನೀರು ದೊರೆಯುತ್ತದೆ. ಹೀಗಾಗಿ ಮನೆಗೊಬ್ಬರಂತೆ ಪಾದಯಾತ್ರೆಯಲ್ಲಿ ಭಾಗವಹಿಸಬೇಕು ಎಂದು ಸಿದ್ದರಾಮಯ್ಯ ಮನವಿ ಮಾಡಿದರು. ಕಾರ್ಯಕ್ರಮದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ್, ಶಾಸಕರಾದ ಸಿ.ಪುಟ್ಟರಂಗಶೆಟ್ಟಿ, ಆರ್.ನರೇಂದ್ರ, ವೀಣಾ ಅಚ್ಚಯ್ಯ, ಡಾ.ಡಿ.ತಿಮ್ಮಯ್ಯ, ಮಾಜಿ ಶಾಸಕರಾದ ಎ.ಆರ್.ಕೃಷ್ಣಮೂರ್ತಿ, ಎಸ್.ಜಯಣ್ಣ, ಎಸ್.ಬಾಲರಾಜು, ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪ ಅಮರ ನಾಥ್, ಕೆಪಿಸಿಸಿ ಯುವ ಕಾಂಗ್ರೆಸ್ ಕಾರ್ಯದರ್ಶಿ ಮಹಮ್ಮದ್ ನಳಪಾಡ್, ಬೆಂಗಳೂ ರಿನ ಮಾಜಿ ಮೇಯರ್ ರಾಮಚಂದ್ರಪ್ಪ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಮರಿಸ್ವಾಮಿ, ಮಾಜಿ ಸಂಸದರಾದ ಎ.ಸಿದ್ದರಾಜು, ಕಾಗಲವಾಡಿ ಶಿವಣ್ಣ ಇನ್ನಿತರರು ಭಾಗವಹಿಸಿದ್ದರು.

Translate »