ಸಿದ್ದಗಂಗಾ ಶ್ರೀಗಳ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದವನ ವಿರುದ್ಧ ಕ್ರಮಕ್ಕೆ ಆಗ್ರಹ

ಸೋಮವಾರಪೇಟೆ: ಡಾ. ಶ್ರೀ ಶಿವಕುಮಾರ ಸ್ವಾಮೀಜಿ ಅವರ ಬಗ್ಗೆ ಫೇಸ್‍ಬುಕ್‍ನಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿರುವ ಮನೀಶ್ ಮಣಿಕಂಠನ ವಿರುದ್ಧ ಕ್ರಮಕೈಗೊಳ್ಳದಿದ್ದಲ್ಲಿ, ಜಿಲ್ಲಾದ್ಯಂತ ಹೋರಾಟ ಹಮ್ಮಿಕೊಳ್ಳುವುದಾಗಿ ಅಖಿಲ ಭಾರತ ವೀರ ಶೈವ ಮಹಾಸಭಾದ ಜಿಲ್ಲಾ ಪ್ರಧಾನ ಕಾರ್ಯ ದರ್ಶಿ ಜಿ.ಎಂ.ಕಾಂತರಾಜು ಎಚ್ಚರಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಶತಾಯುಷಿ ಶ್ರೀ ಶಿವಕುಮಾರ ಸ್ವಾಮೀಜಿಯವರ ಆರೋಗ್ಯ ಹಾಗೂ ಚಿಕಿ ತ್ಸೆಯ ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಕಿರುವ ಕುರಿತು ಈಗಾಗಲೇ ಹಲವು ಪೊಲೀಸ್ ಠಾಣೆಗಳಲ್ಲಿ ದೂರು ನೀಡಿದ್ದು, ಮುಂದಿನ 10 ದಿನಗಳ ಒಳಗೆ ಕ್ರಮ ಕೈಗೊಳ್ಳದಿದ್ದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳ ಲಾಗುವದು ಎಂದರು.

ಸಮಾಜದ ಬಡ ಬಗ್ಗರ ಬಗ್ಗೆ ಕರುಣೆ ಹೊಂದಿ, ಹಲವಷ್ಟು ವಿದ್ಯಾಸಂಸ್ಥೆಗಳನ್ನು ಸ್ಥಾಪಿಸುವ ಮೂಲಕ ಎಲ್ಲಾ ಧರ್ಮಗಳ ವಿದ್ಯಾರ್ಥಿಗಳಿಗೂ ಅನ್ನ, ಅಕ್ಷರ ದಾಸೋಹ ನೀಡುತ್ತಾ ಬಂದಿರುವ ಶ್ರೀಗಳ ವಿರುದ್ಧ, ಕೆಎಸ್ ಆರ್‍ಟಿಸಿ ಚಾಲಕನಾಗಿರುವ ವ್ಯಕ್ತಿಯೋರ್ವ ಫೇಸ್‍ಬುಕ್‍ನಲ್ಲಿ ನಿಂದನಾತ್ಮಕ ಬರಹ ಪ್ರಕ ಟಿಸಿರುವದು ಶ್ರೀಗಳ ಅಸಂಖ್ಯಾತ ಭಕ್ತರಿಗೆ ನೋವು ತರಿಸಿದೆ ಎಂದು ತಿಳಿಸಿದರು.

ಗೋಷ್ಠಿಯಲ್ಲಿ ಕಿರಿಕೊಡ್ಲಿ ಮಠಾಧೀಶ ರಾದ ಸದಾಶಿವ ಸ್ವಾಮೀಜಿ, ಪ್ರಮುಖರು ಗಳಾದ ಬಸವರಾಜು, ಎಸ್. ಮಹೇಶ್, ಶಿವಣ್ಣ ಇದ್ದರು.
ಜಿಲ್ಲಾಧಿಕಾರಿಗೆ ದೂರು: ಪ್ರಕರಣದ ಬಗ್ಗೆ ಸೂಕ್ತ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾ ವೀರಶೈವ ಸಮಾಜದ ವತಿಯಿಂದ ಜಿಲ್ಲಾ ಧಿಕಾರಿ ಶ್ರೀವಿದ್ಯಾರವರಿಗೆ ದೂರು ಸಲ್ಲಿಸಲಾಯಿತು ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಹಿತಿ ಮತ್ತು ತಂತ್ರಜ್ಞಾನದ ಕಾನೂನಿನಡಿಯಲ್ಲಿ ಕ್ರಮ ತೆಗೆದುಕೊಳ್ಳಲು ಅವಕಾಶವಿದ್ದು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಗಮನಕ್ಕೆ ತರುವದಾಗಿ ಜಿಲ್ಲಾಧಿಕಾರಿ ತಿಳಿಸಿದರು.