ರಾಜ್ಯಕ್ಕೆ ಸೂಕ್ತ ಆಮ್ಲಜನಕ ಪೂರೈಕೆಗೆ ಆಗ್ರಹಿಸಿ  ಪ್ರಧಾನಿಗೆ ತುರ್ತು ಪತ್ರ ಬರೆದ ಎಚ್‍ಡಿಕೆ
News

ರಾಜ್ಯಕ್ಕೆ ಸೂಕ್ತ ಆಮ್ಲಜನಕ ಪೂರೈಕೆಗೆ ಆಗ್ರಹಿಸಿ ಪ್ರಧಾನಿಗೆ ತುರ್ತು ಪತ್ರ ಬರೆದ ಎಚ್‍ಡಿಕೆ

May 5, 2021

ಬೆಂಗಳೂರು,ಮೇ4-ಕೊರೊನಾ ಸಂಕಷ್ಟ ಕಾಲದಲ್ಲಿ ಕರ್ನಾಟಕ ರಾಜ್ಯವೂ ಸೇರಿದಂತೆ ಇಡೀ ದೇಶದಲ್ಲಿ ಆಮ್ಲಜನಕದ ಕೊರತೆ ಎದುರಾಗಿದ್ದು, ಈ ನಿಟ್ಟಿನಲ್ಲಿ ಕರ್ನಾಟಕಕ್ಕೆ ಸೂಕ್ತ ಪ್ರಮಾಣ ದಲ್ಲಿ ಆಮ್ಲಜನಕ ಪೂರೈಕೆ ಮಾಡುವಂತೆ ಆಗ್ರಹಿಸಿ ಮಾಜಿ ಸಿಎಂ ಎಚ್‍ಡಿ ಕುಮಾರಸ್ವಾಮಿ ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.

ರಾಜ್ಯದ ಆಕ್ಸಿಜನ್ ಕೊರತೆಯನ್ನು ನೀಗಿಸು ವಂತೆ ಒತ್ತಾಯಿಸಿ ಪ್ರಧಾನಿ ಮೋದಿ ಅವರಿಗೆ ಸುದೀರ್ಘ ಪತ್ರ ಬರೆದಿರುವ ಮಾಜಿ ಸಿಎಂ ಎಚ್‍ಡಿಕೆ, ಆದಷ್ಟು ಬೇಗ ರಾಜ್ಯದ ಆಕ್ಸಿಜನ್ ಸಮಸ್ಯೆ ಯನ್ನು ನೀಗಿಸಬೇಕೆಂದು ಮನವಿ ಮಾಡಿದ್ದಾರೆ.

ತಮ್ಮ ಪತ್ರದಲ್ಲಿ ಚಾಮರಾಜನಗರದಲ್ಲಿ ನಡೆದ ದುರಂತವನ್ನು ಉಲ್ಲೇಖಿಸಿರುವ ಎಚ್‍ಡಿಕೆ, ರಾಜ್ಯದ ಇತರ ಭಾಗಗಳಲ್ಲೂ ಆಕ್ಸಿಜನ್ ಕೊರತೆ ಸಮಸ್ಯೆ ಎದುರಾಗಿದೆ ಎಂದು ಮನ ವರಿಕೆ ಮಾಡಿಕೊಟ್ಟಿದ್ದಾರೆ. ಮುಖ್ಯಮಂತ್ರಿ ಯಡಿಯೂ ರಪ್ಪ ತುರ್ತು ಸಭೆ ನಡೆಸಿ ಆಕ್ಸಿ ಜನ್ ಪೂರೈಕೆಗಾಗಿ ಕೇಂದ್ರದ ಮೇಲೆ ಒತ್ತಡ ಹೇರುವುದಾಗಿ ತಿಳಿಸಿದ್ದಾರೆ. ಅಲ್ಲದೇ ರಾಜ್ಯದಲ್ಲಿ ಉತ್ಪಾದನೆ ಯಾಗುವ ಆಮ್ಲಜನಕವನ್ನು ರಾಜ್ಯದಲ್ಲಿ ಮಾತ್ರ ಬಳಕೆ ಮಾಡಿಕೊಳ್ಳಲು ಕೇಂದ್ರದ ಅನುಮತಿ ಪಡೆಯಲಾಗುವುದು ಎಂದು ತಿಳಿಸಿದ್ದಾರೆ. ಈ ನಿಟ್ಟಿನಲ್ಲಿ ಕೇಂದ್ರ ಗಮನಹರಿಸುವುದು ಒಳಿತು ಎಂದು ಎಚ್‍ಡಿಕೆ ಸಲಹೆ ನೀಡಿದ್ದಾರೆ. ರಾಜ್ಯ ದಲ್ಲಿ ಉತ್ಪಾದನೆಯಾಗುವ ಆಮ್ಲಜನಕ ರಾಜ್ಯ ದಲ್ಲೇ ಬಳಕೆಯಾದರೆ ಕೊರತೆ ಎದುರಾಗದು ಎಂಬ ರಾಜ್ಯ ಸರ್ಕಾರದ ಅಭಿಪ್ರಾಯಕ್ಕೆ ಯಾವುದೇ ಆಧಾರ ಇಲ್ಲ. ಈ ಕುರಿತು ಒಂದು ನಿರ್ಧಾರಿತ ಅಭಿಪ್ರಾಯಕ್ಕೆ ಬರಲು ಸೂಕ್ತ ಅಂಕಿ ಅಂಶವಿಲ್ಲ ವಾದ್ದರಿಂದ, ರಾಜ್ಯಕ್ಕೆ ಸೂಕ್ತ ಪ್ರಮಾಣದಲ್ಲಿ ಆಮ್ಲ ಜನಕ ಪೂರೈಸಬೇಕೆಂಬುದು ನನ್ನ ಬೇಡಿಕೆಯಾಗಿದೆ ಎಂದು ಕುಮಾರಸ್ವಾಮಿ ಪತ್ರದಲ್ಲಿ ಉಲ್ಲೇಖಿಸಿ ದ್ದಾರೆ. ರಾಜ್ಯಕ್ಕೆ ಸೂಕ್ತ ಪ್ರಮಾಣದಲ್ಲಿ ಆಮ್ಲಜನಕ ಪೂರೈಸಿ ಸಂಕಷ್ಟದಲ್ಲಿರುವ ಜನರ ನೆರವಿಗೆ ಧಾವಿಸ ಬೇಕೆಂದು, ಪ್ರಧಾನಿ ಮೋದಿ ಅವರಿಗೆ ಬರೆದ ಪತ್ರದಲ್ಲಿ ಎಚ್‍ಡಿಕೆ ಆಗ್ರಹಿಸಿದ್ದಾರೆ. ಒಟ್ಟಿನಲ್ಲಿ ರಾಜ್ಯದಲ್ಲಿ ಆಮ್ಲಜನಕದ ಕೊರತೆ ಎದುರಾಗದಂತೆ ನೋಡಿಕೊಳ್ಳುವುದಾಗಿ ಸಿಎಂ ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರ ಭರವಸೆ ನೀಡಿರುವ ಬೆನ್ನಲ್ಲೇ, ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದು ಸೂಕ್ತ ಪ್ರಮಾಣದ ಆಮ್ಲಜನಕ ಪೂರೈಸುವಂತೆ ಎಚ್‍ಡಿಕೆ ಆಗ್ರಹಿಸಿರುವುದು ಗಮನ ಸೆಳೆದಿದೆ.

Translate »