ಸತೀಶ್ ಜಾರಕಿಹೊಳಿಗೆ ಸಚಿವ ಸ್ಥಾನಕ್ಕೆ ಆಗ್ರಹಿಸಿ ಪ್ರತಿಭಟನೆ
ಮೈಸೂರು

ಸತೀಶ್ ಜಾರಕಿಹೊಳಿಗೆ ಸಚಿವ ಸ್ಥಾನಕ್ಕೆ ಆಗ್ರಹಿಸಿ ಪ್ರತಿಭಟನೆ

June 9, 2018

ಮೈಸೂರು:  ಕಾಂಗ್ರೆಸ್ ಶಾಸಕ, ಮಾಜಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಸಚಿವ ಸ್ಥಾನ ನೀಡುವಂತೆ ಒತ್ತಾಯಿಸಿ ಮಾನವ ಬಂಧುತ್ವ ವೇದಿಕೆ ಮತ್ತು ದಲಿತ ಸಂಘಟನೆಗಳ ಒಕ್ಕೂಟದ ವತಿಯಿಂದ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.

ಮೈಸೂರಿನ ಪುರಭವನದ ನೂತನ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಬಳಿ ಜಮಾಯಿಸಿದ ಪ್ರತಿಭಟನಾಕಾರರು, ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದಲ್ಲಿ ಸತೀಶ್ ಜಾರಕಿಹೊಳಿ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಆಗ್ರಹಿಸಿದರು.

ಸತೀಶ್ ಜಾರಕಿಹೊಳಿ ಅವರ ಭಾವಚಿತ್ರವಿರುವ ಪೋಸ್ಟರ್‍ಗಳನ್ನು ಹಿಡಿದು ಹಾಗೂ ಕೈಗಳಿಗೆ ಕಪ್ಪುಪಟ್ಟಿ ಧರಿಸಿ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು, ಕೂಡಲೇ ಸತೀಶ್ ಜಾರಕಿಹೊಳಿ ಅವರಿಗೆ ಸಚಿವ ಸ್ಥಾನ ನೀಡಲು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.

ಸತೀಶ್ ಜಾರಕಿಹೊಳಿ ಅಭಿಮಾನಿಗಳ ಸಂಘದ ಅಧ್ಯಕ್ಷ ರವಿಕುಮಾರ್, ಮುಖಂಡ ದ್ಯಾವಪ್ಪನಾಯಕ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Translate »