ಕೂಡಿಗೆ: ಸ್ಮಶಾನ ಜಾಗಕ್ಕೆ ಒತ್ತಾಯಿಸಿ ಶವಯಾತ್ರೆ

ಕುಶಾಲನಗರ: ಕುಶಾಲನಗರ ಹೋಬಳಿಯ ಕೂಡಿಗೆ ಗ್ರಾಮ ಪಂಚಾ ಯಿತಿ ವ್ಯಾಪ್ತಿಯಲ್ಲಿ ಸಾರ್ವಜನಿಕ ಸ್ಮಶಾನಕ್ಕೆ ಸೂಕ್ತ ಜಾಗ ಕಲ್ಪಿಸಬೇಕು ಎಂದು ಒತ್ತಾಯಿಸಿ ಪಂಚಾಯಿತಿ ಕಚೇರಿ ಮುಂದೆ ಶವಯಾತ್ರೆ ನಡೆಸುವ ಮೂಲಕ ವಿನೂತನ ರೀತಿಯಲ್ಲಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.

ಹಳೆ ಕೂಡಿಗೆಯ ನಿವಾಸಿ ತಿಮ್ಮಪ್ಪ (60) ಎಂಬುವರು ಭಾನುವಾರ ನಿಧನರಾದರು. ಅಂತ್ಯಕ್ರಿಯೆ ನೆರವೇರಿಸಲು ಸೂಕ್ತ ಸ್ಥಳ ಇಲ್ಲದೆ ತೊಂದರೆ ಉಂಟಾಯಿತು. ಕಳೆದ ಅನೇಕ ವರ್ಷಗಳಿಂದಲೂ ಸ್ಮಶಾನಕ್ಕೆ ಜಾಗ ಒದಗಿಸಬೇಕು ಎಂದು ಗ್ರಾಮ ಪಂಚಾ ಯಿತಿಗೆ ಮನವಿ ಸಲ್ಲಿಸಿದರೂ ಇದುವ ರೆಗೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದರು. ಶವ ಸಂಸ್ಕಾರಕ್ಕೆ ಜಾಗದ ಕೊರತೆ ಉಂಟಾದ ಹಿನ್ನೆಲೆಯಲ್ಲಿ ಪಂಚಾ ಯಿತಿ ಮುಂದೆ ಶವಯಾತ್ರೆ ನಡೆಸುವ ಮೂಲಕ ಜಿಲ್ಲಾಡಳಿತ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ತಾಲ್ಲೂಕು ತಹಸೀಲ್ದಾರ್ ಮಹೇಶ್ ಸ್ಥಳಕ್ಕೆ ಆಗಮಿಸಿ ಸ್ಮಶಾನಕ್ಕೆ ಜಾಗ ನೀಡುವವರೆಗೂ ಶವ ಸಂಸ್ಕಾರ ಮಾಡುವುದಿಲ್ಲ ಎಂದು ಗ್ರಾಮ ಪಂಚಾಯತಿ ಉಪಾಧ್ಯಕ್ಷ ಗಿರೀಶ್ ಕುಮಾರ್ ಹೇಳಿದರು.

ಪರಿಸ್ಥಿತಿಯ ಮಾಹಿತಿ ಅರಿತ ತಹಶೀ ಲ್ದಾರ್ ಗ್ರಾಮಲೆಕ್ಕಾಧಿಕಾರಿ ಸಚಿನ್ ಅವರನ್ನು ಸ್ಥಳಕ್ಕೆ ಕಳುಹಿಸಿ ಮುಂದಿನ ದಿನಗಳಲ್ಲಿ ಸಮಸ್ಯೆ ಬಗೆಹರಿಸಲಾಗುವುದು ಎಂದು ಭರವಸೆ ನೀಡಿದ ಮೇರೆಗೆ ಗ್ರಾಮಸ್ಥರು ಪ್ರತಿಭಟನೆ ಹಿಂಪಡೆದು ಹಾರಂಗಿ ಹೊಳೆಯ ದಂಡೆಯಲ್ಲಿ ಶವ ಸಂಸ್ಕಾರ ನಡೆಸಿದರು. ಈ ಸಂದರ್ಭ ಮಾತನಾಡಿದ ಪಂಚಾಯಿತಿ ಉಪಾಧ್ಯಕ್ಷ ಗಿರೀಶ್, ಕೂಡಿಗೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಸಾರ್ವಜನಿಕ ಸ್ಮಶಾನಕ್ಕೆ ಜಾಗ ಕಲ್ಪಿಸಬೇಕು ಎಂದು ಕಳೆದ ಹಲವು ವರ್ಷಗಳಿಂದಲೂ ಕಂದಾಯ ಇಲಾಖೆಗೆ ಬೇಡಿಕೆ ಸಲ್ಲಿಸಿದ್ದರೂ ಕೂಡ ಇದುವರೆಗೆ ಯಾವುದೇ ಪ್ರಯೋಜನವಾಗಿಲ್ಲ. ಆದ್ದ ರಿಂದ ಅನಿವಾರ್ಯವಾಗಿ ಪ್ರತಿಭಟಿಸಬೇಕಾ ಯಿತು. ಈಗಲಾದರೂ ಅಧಿಕಾರಿಗಳು ಜಾಗವನ್ನು ಗುರುತಿಸಿಕೊಡಲು ಮುಂದಾ ಗಬೇಕು. ಇಲ್ಲದಿದ್ದಲ್ಲಿ ಉಗ್ರ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದರು.