ಮೈಸೂರು: ಕೋಮು ಶಕ್ತಿಗಳನ್ನು ಅಧಿಕಾರದಿಂದ ದೂರವಿಡಲು ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿಗಳನ್ನು ಬೆಂಬಲಿಸಲು ಕರ್ನಾ ಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಹಾಗೂ ಅಹಿಂದ ಸಂಘಟನೆಗಳ ಒಕ್ಕೂಟ ಮುಂದಾಗಿದ್ದು, ಮೈಸೂರು-ಕೊಡಗು ಕ್ಷೇತ್ರದಲ್ಲಿ ಕಾಂಗ್ರೆಸ್‍ನಿಂದ ಹಿಂದುಳಿದ ವರ್ಗಗಳ ಸಮರ್ಥ ಅಭ್ಯರ್ಥಿಗೆ ಟಿಕೆಟ್ ನೀಡಲು ಜೆಡಿಎಸ್ ಸಹಕಾರ ನೀಡಬೇಕು ಎಂದು ವೇದಿಕೆ ರಾಜ್ಯಾಧ್ಯಕ್ಷ ಕೆ.ಎಸ್.ಶಿವರಾಮು ಒತ್ತಾಯಿಸಿದರು.
ಮೈಸೂರಿನ ಮಯೂರ ಹೊಯ್ಸಳ ಹೋಟೆಲ್‍ನಲ್ಲಿ ಶನಿವಾರ ಪತ್ರಿಕಾಗೋಷ್ಠಿ ಯಲ್ಲಿ ಮಾತನಾಡಿದ ಅವರು, ಚುನಾವಣೆ ಹಿನ್ನೆಲೆಯಲ್ಲಿ ಜೆಡಿಎಸ್-ಕಾಂಗ್ರೆಸ್ ಪಕ್ಷಗಳ ಹೊಂದಾಣಿಕೆ ಸ್ವಾಗತಾರ್ಹ. ಮೈಸೂರು-ಕೊಡಗು ಕ್ಷೇತ್ರದಲ್ಲಿ ಕಾಂಗ್ರೆಸ್‍ನಿಂದ ಹಿಂದು ಳಿದ ವರ್ಗಗಳ ಅಭ್ಯರ್ಥಿ ಕಣಕ್ಕಿಳಿಸಬೇಕು. ಈ ಸಂಬಂಧ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಹಾಗೂ ಎಐಸಿಸಿ ಅಧ್ಯಕ್ಷ ರಾಹುಲ್ ಅವರನ್ನು ಒತ್ತಾಯಿಸಿ ಮಾ.11 ರಂದು ಬೆಳಿಗ್ಗೆ 11ಕ್ಕೆ ಮೈಸೂರಿನ ಅಶೋಕ ರಸ್ತೆಯಲ್ಲಿರುವ ಮುಖ್ಯ ಅಂಚೆ ಕಚೇರಿ ಎದುರು ಅಂಚೆ ಚೀಟಿ ಚಳವಳಿ ಹಮ್ಮಿ ಕೊಳ್ಳಲಾಗಿದೆ ಎಂದು ತಿಳಿಸಿದರು.
ಚುನಾವಣೆ ಹಿನ್ನೆಲೆಯಲ್ಲಿ ವೈಯಕ್ತಿಕ ನಿಂದನೆ ಆಘಾತಕಾರಿ ಬೆಳವಣಿಗೆ. ಸುಮ ಲತಾ ಅವರ ಬಗ್ಗೆ ಸಚಿವ ಹೆಚ್.ಡಿ.ರೇವಣ್ಣ ಹೇಳಿಕೆ ಖಂಡನಾರ್ಹ. ಮಂಡ್ಯದಿಂದ ನಿಖಿಲ್ ಕುಮಾರಸ್ವಾಮಿ ಆಯ್ಕೆಯಾದರೆ ಮುಂದಿನ ದಿನಗಳಲ್ಲಿ ತಮ್ಮ ಪುತ್ರ ಪ್ರಜ್ವಲ್‍ಗೆ ಸಚಿವ ಸ್ಥಾನಕ್ಕೆ ಎದುರಾಳಿ ಆಗಬಹುದು ಎಂಬ ಕಾರಣಕ್ಕೆ ರೇವಣ್ಣ ಈ ರೀತಿ ಹೇಳಿಕೆ ನೀಡಿ ನಿಖಿಲ್ ಕುಮಾರಸ್ವಾಮಿ ಸೋಲಿಸುವ ಹುನ್ನಾರ ನಡೆಸುತ್ತಿದ್ದಾರೆ ಎಂಬ ಅನುಮಾನ ವಿದೆ. ಈ ಹಿನ್ನೆಲೆಯಲ್ಲಿ ಕುಮಾರಸ್ವಾಮಿ ಅವರು ಸಹೋದರ ರೇವಣ್ಣ ಈ ರೀತಿ ಹೇಳಿಕೆ ನೀಡದಂತೆ ನಿಯಂತ್ರಿಸಬೇಕು. ಇಲ್ಲವಾದರೆ ಕೋಮುಶಕ್ತಿಗಳು ಇದರ ಲಾಭ ಪಡೆಯಲಿವೆ ಎಂದು ಎಚ್ಚರಿಸಿದರು.
ಪ್ರಗತಿಪರ ಚಿಂತಕರಾದ ಪಿ.ಸಂಬಯ್ಯ, ವರದಯ್ಯ, ಜಿಲ್ಲಾ ಸವಿತಾ ಸಂಘರ್ಷ ಸಮಿತಿ ಅಧ್ಯಕ್ಷ ವಿ.ಮಂಜುನಾಥ್, ವೀರ ಮಡಿ ವಾಳರ ಸಂಘದ ಕಾರ್ಯಾಧ್ಯಕ್ಷ ಜಯರಾಂ ಗುದ್ದಗೆರೆ, ದೊಂಬಿದಾಸರ ಸಂಘದ ಜಿಲ್ಲಾ ಧ್ಯಕ್ಷ ರೇವಣ್ಣ, ಹಿಂದುಳಿದ ವರ್ಗಗಳ ಮುಖಂಡರಾದ ಕಾಡೇನಹಳ್ಳಿ ಸ್ವಾಮಿ, ಕೆ.ಪಿ. ಚಿಕ್ಕಸ್ವಾಮಿ, ರಾಜ್ಯ ಮೂಲ ಆದಿವಾಸಿಗಳ ವೇದಿಕೆ ಕಾರ್ಯದರ್ಶಿ ರವಿ, ವೇದಿಕೆ ಗ್ರಾಮಾಂತರ ಅಧ್ಯಕ್ಷ ಜಾಕೀರ್ ಹುಸೇನ್ ಮತ್ತಿತರರು ಸುದ್ದಿಗೋಷ್ಠಿಯಲ್ಲಿದ್ದರು.