ಎಲ್ಲಾ ರೈತರ ಸಾಲ ಮನ್ನಾ ಮಾಡುವಂತೆ ಒತ್ತಾಯ

ಚಾಮರಾಜನಗರ:  ರಾಜ್ಯದ ಎಲ್ಲಾ ರೈತರ ಸಾಲವನ್ನು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಮನ್ನಾ ಮಾಡಬೇಕು ಎಂದು ತಾಲೂಕಿನ ದೊಡ್ಡರಾಯಪೇಟೆ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಬ್ಯಾಂಕ್‍ನ ಮಾಜಿ ಅಧ್ಯಕ್ಷ ಹಾಗೂ ಹಾಲು ನಿರ್ದೇಶಕ ದೊಡ್ಡ ರಾಯಪೇಟೆ ಗಿರೀಶ್ ಒತ್ತಾಯಿಸಿದರು.

ನಗರದ ಜಿಲ್ಲಾ ಕಾರ್ಯನಿರತ ಪತ್ರ ಕರ್ತರ ಭವನದಲ್ಲಿ ಶುಕ್ರವಾರ ಕರೆದಿದ್ದ ಸುದ್ದಿಗೋಷ್ಟಿಯಲ್ಲಿ ಅವರು ಮಾತನಾಡಿದರು.
ಹೆಚ್.ಡಿ.ಕುಮಾರಸ್ವಾಮಿ ಅವರು ಇತ್ತೀ ಚೆಗೆ ನಡೆದ ಸಾರ್ವತ್ರಿಕ ವಿಧಾನಸಭಾ ಚುನಾವಣಾ ಸಂದರ್ಭದಲ್ಲಿ ನಾನು ಮುಖ್ಯ ಮಂತ್ರಿ ಆದರೆ 24 ಗಂಟೆ ಒಳಗೆ ರೈತರ ಕೃಷಿ ಸಾಲವನ್ನು ಸಂಪೂರ್ಣ ಮನ್ನಾ ಮಾಡುವುದಾಗಿ ಭರವಸೆ ನೀಡಿದ್ದರು. ಈ ಭರವಸೆಯನ್ನು ಅವರು ಈಡೇರಿಸುವಲ್ಲಿ ವಿಫಲರಾಗಿದ್ದಾರೆ. ಮುಖ್ಯಮಂತ್ರಿ ಆಗಿ ಸುಮಾರು ಏಳೆಂಟು ದಿನ ಕಳೆದರೂ ಸಹ ಸಾಲ ಮನ್ನಾ ಮಾಡಿಲ್ಲ. ಇದು ರಾಜ್ಯದ ಎಲ್ಲಾ ರೈತರಿಗೆ ಬೇಸರ ತರಿಸಿದೆ ಎಂದರು.

ರಾಜ್ಯದ ರೈತರಾಗಲಿ, ರೈತ ಮುಖಂಡ ರಾಗಲಿ ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳಿಗೆ ತಮ್ಮ ಪ್ರಣಾಳಿಕೆ ಯಲ್ಲಿ ರೈತರ ಸಾಲಮನ್ನಾ ಮಾಡುವು ದನ್ನು ಸೇರಿಸಬೇಕು ಎಂದು ಒತ್ತಾಯಿಸಿ ರಲಿಲ್ಲ. ಈ ಮೂರು ಪಕ್ಷಗಳೂ ಸಹ ತಮ್ಮ ಮತ ಬ್ಯಾಂಕ್‍ಗಾಗಿ ಹಾಗೂ ರೈತರ ಒಲವು ಗಳಿಸುವ ಸಲುವಾಗಿ ಪ್ರಣಾಳಿಕೆಯಲ್ಲಿ ನಾವು ಅಧಿಕಾರಕ್ಕೆ ಬಂದರೆ ರೈತರ ಸಾಲ ವನ್ನು ಮನ್ನಾ ಮಾಡುವುದಾಗಿ ಭರವಸೆ ನೀಡಿದ್ದರು. ಈಗ ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬಂದು ಹೆಚ್.ಡಿ.ಕುಮಾರಸ್ವಾಮಿ ಅವರು ಎರಡನೇ ಬಾರಿಗೆ ಮುಖ್ಯಮಂತ್ರಿ ಆಗಿ ದ್ದಾರೆ. ಹೀಗಾಗಿ ಆಡಳಿತದಲ್ಲಿ ಸಾಕಷ್ಟು ಅನುಭವ ಹೊಂದಿರುವ ಹೆಚ್‍ಡಿಕೆ ಅವರು ಈ ಕೂಡಲೇ ರೈತರ ಸಾಲವನ್ನು ಸಂಪೂರ್ಣ ಮನ್ನಾ ಮಾಡಬೇಕು ಎಂದು ಗಿರೀಶ್ ಒತ್ತಾಯಿಸಿದರು.

ಮುಖ್ಯಮಂತ್ರಿಗಳು ಮೇ 30 ರಂದು ರೈತ ಮುಖಂಡರು ಹಾಗೂ ಅಧಿಕಾರಿಗಳ ಸಭೆ ನಡೆಸಿ, ರೈತರ ಸಾಲವನ್ನು ಮನ್ನಾ ಮಾಡುವ ವಿಚಾರದಲ್ಲಿ ಚರ್ಚೆ ನಡೆ ಸಿದ್ದಾರೆ. ಈ ವೇಳೆ ರೈತರ ಸಾಲ ಮನ್ನಾ ಮಾಡಲು ಹಲವಾರು ಷರತ್ತುಗಳನ್ನು ವಿಧಿಸುವ ಮೂಲಕ ರೈತರನ್ನು ಇಬ್ಭಾಗ ಮಾಡುವ ಪ್ರಯತ್ನ ನಡೆಸಿದ್ದಾರೆ. ರೈತರೆಲ್ಲರೂ ಒಂದೇ ಆಗಿರುವ ಕಾರಣ. ಎಲ್ಲಾ ರೈತರ ಸಾಲವನ್ನು ಸಂಪೂರ್ಣ ಮನ್ನಾ ಮಾಡುವ ಮೂಲಕ ರೈತರನ್ನು ಸಾಲದಿಂದ ಋಣಮುಕ್ತರನ್ನಾಗಿ ಮಾಡು ವಂತೆ ಒತ್ತಾಯಿಸಿದರು.
ಜಿಲ್ಲೆಯ ಎಲ್ಲಾ ನಾಲ್ವರು ಶಾಸಕರೂ ಸಹ ರೈತರ ಸಾಲವನ್ನು ಸಂಪೂರ್ಣ ಮನ್ನಾ ಮಾಡಲು ಸರ್ಕಾರದ ಮೇಲೆ ಒತ್ತಡ ತರ ಬೇಕು. ಈ ಮೂಲಕ ರೈತರ ನೆರವಿಗೆ ಧಾವಿಸಬೇಕು ಎಂದು ದೊಡ್ಡರಾಯ ಪೇಟೆ ಗಿರೀಶ್ ಮನವಿ ಮಾಡಿದರು.

ಎಪಿಎಂಸಿ ಮಾಜಿ ಸದಸ್ಯ ಕಾಗಲ ವಾಡಿ ಶಿವಕುಮಾರ್, ದೊಡ್ಡರಾಯಪೇಟೆ ಡೈರಿ ಅಧ್ಯಕ್ಷ ಶಿವರುದ್ರಸ್ವಾಮಿ ಸುದ್ದಿ ಗೋಷ್ಟಿಯಲ್ಲಿ ಹಾಜರಿದ್ದರು.