ಪಿಂಚಣಿ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಜ.10ರಿಂದ ಬೆಂಗಳೂರಿನಲ್ಲಿ ಪ್ರತಿಭಟನೆಗೆ ನಿರ್ಧಾರ
ಮೈಸೂರು

ಪಿಂಚಣಿ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಜ.10ರಿಂದ ಬೆಂಗಳೂರಿನಲ್ಲಿ ಪ್ರತಿಭಟನೆಗೆ ನಿರ್ಧಾರ

December 21, 2019

ಮಾಡು ಇಲ್ಲವೆ ಮಡಿ ಹೋರಾಟ: ಇಂದು ಜಿಲ್ಲಾಧಿಕಾರಿಗೆ ಮನವಿ
ಮೈಸೂರು, ಡಿ.20(ಆರ್‍ಕೆಬಿ)- ಪಿಂಚಣಿ ಬೇಡಿಕೆ ಈಡೇರಿಸದಿದ್ದರೆ ಜ.10ರಿಂದ ಬೆಂಗಳೂ ರಿನಲ್ಲಿ ಮಾಡು ಇಲ್ಲವೆ ಮಡಿ ಹೋರಾಟ ಹಮ್ಮಿಕೊಳ್ಳುವುದಾಗಿ ಕರ್ನಾಟಕ ರಾಜ್ಯ ಅನುದಾನಿತ ಶಾಲಾ ಕಾಲೇಜುಗಳ ಪಿಂಚಣಿ ವಂಚಿತ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಶಿಂಡೇನಹಳ್ಳಿ ಡಾ.ಶರತ್‍ಕುಮಾರ್ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಜಿಲ್ಲಾ ಪತ್ರಕರ್ತರ ಭವನದಲ್ಲಿ ಸುದ್ದಿಗೊಷ್ಠಿಯಲ್ಲಿ ಮಾತನಾಡಿ, ರಾಜ್ಯದ ಅನುದಾನಿತ ವಿದ್ಯಾಸಂಸ್ಥೆಗಳ ನೌಕರರ ನಿವೃತ್ತಿ ಜೀವನದ ಆಸರೆಯಾದ ಪಿಂಚಣಿ ಸೌಲಭ್ಯ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರಾಜ್ಯ ಅನುದಾನಿತ ಶಾಲಾ ಕಾಲೇಜುಗಳ ಪಿಂಚಣಿ ವಂಚಿತ ನೌಕರರ ಸಂಘದಿಂದ ಜ.10ರಂದು ಬೆಂಗಳೂರಿನ ಫ್ರೀಡಂ ಪಾಕ್‍ನಲ್ಲಿ ಈ ಹೋರಾಟ ನಡೆಸಲು ನಿರ್ಧರಿಸಲಾಗಿದೆ. ಇದಕ್ಕೂ ಮೊದಲು ರಾಜ್ಯದ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಮೂಲಕ ಸಾಂಕೇತಿಕ ಮನವಿ ಸಲ್ಲಿಸಿ ರಾಜ್ಯ ಸರ್ಕಾರಕ್ಕೆ ಗಡುವು ನೀಡಲು ನಿರ್ಧರಿಸಲಾಗಿದೆ ಎಂದರು. ಪಿಂಚಣಿ ಯೋಜನೆಗೆ ಒಳಪಡದೆ ನಿವೃತ್ತಿಯಾಗಿದ್ದರಿಂದ ಈಗಾಗಲೇ ಅನುದಾನಿತ ಸಂಸ್ಥೆಗಳ ಸಾವಿರಾರು ನೌಕರರು ಕೊನೆಯ ತಿಂಗಳ ಸಂಬಳ ಮಾತ್ರ ಪಡೆದು ಜೀವನ ನಿರ್ವಹಣೆ ಮಾಡಲಾಗದೆ ಕಣ್ಣೀರಲ್ಲಿ ಕೈ ತೊಳೆಯುತ್ತಿದ್ದಾರೆ. ನಮ್ಮ ರಾಜ್ಯ ಹೊರತುಪಡಿಸಿ ಇತರೆ ರಾಜ್ಯಗಳಲ್ಲಿ ಸರ್ಕಾರಿ ಮತ್ತು ಅನುದಾನಿತ ನೌಕರರ ನಡುವೆ ಯಾವುದೇ ತಾರತಮ್ಯ ವಿಲ್ಲ ಎಲ್ಲರಿಗೂ ಪಿಂಚಣಿ ಸೌಲಭ್ಯ ನೀಡುವ ವ್ಯವಸ್ಥೆ ಜಾರಿಗೊಂಡಿದೆ. ಆದರೆ ಕರ್ನಾಟಕ ದಲ್ಲಿ ಮಾತ್ರ ಈ ರೀತಿಯ ಅನ್ಯಾಯವಾಗುತ್ತಿದೆ. ಅದೇ ರೀತಿ ನಮ್ಮ ರಾಜ್ಯದಲ್ಲೂ ಜಾರಿ ಗೊಳಿಸಲು ಅನೇಕ ಬಾರಿ ಹೋರಾಟ ನಡೆಸಿದ್ದೇವೆ. ಆದರೂ ರಾಜ್ಯ ಸರ್ಕಾರ ನಮ್ಮ ಮನವಿ ಯನ್ನು ಪುರಸ್ಕರಿಸದೆ ಅನ್ಯಾಯ ಮಾಡಿದೆ. ಈಗಲಾದರೂ ನಮ್ಮ ಮನವಿಗೆ ಓಗೊಡದಿ ದ್ದರೆ ಮಾಡು ಇಲ್ಲವೆ ಮಡಿ ಹೋರಾಟ ಅನಿವಾರ್ಯವಾಗುತ್ತದೆ ಎಂದರು. ಗೋಷ್ಠಿಯಲ್ಲಿ ಸಂಘದ ಜಿ.ಆರ್.ಮಹದೇವು, ಬಿ.ಆರ್.ಶಿವಕುಮಾರ್, ಸಿದ್ದರಾಜು ಇದ್ದರು.

Translate »