ಸಿದ್ಧಗಂಗಾ ಶ್ರೀಗಳಿಗೆ ಭಾರತ ರತ್ನ ನೀಡಲು ಆಗ್ರಹ
ಕೊಡಗು

ಸಿದ್ಧಗಂಗಾ ಶ್ರೀಗಳಿಗೆ ಭಾರತ ರತ್ನ ನೀಡಲು ಆಗ್ರಹ

January 21, 2019

ಕುಶಾಲನಗರ: ತುಮಕೂರು ಸಿದ್ಧಗಂಗಾ ಮಠದ ನಡೆದಾಡುವ ದೇವರು ಎಂದೇ ಖ್ಯಾತಿ ಗಳಿಸಿರುವ ಶ್ರೀಶಿವಕುಮಾರ್ ಸ್ವಾಮೀಜಿಗಳವರಿಗೆ ಕೇಂದ್ರ ಸರ್ಕಾರ ಭಾರತ ರತ್ನ ನೀಡಿ ಗೌರವಿಸಬೇಕು ಎಂದು ಶಾಸಕ ಅಪ್ಪಚ್ಚು ರಂಜನ್ ಆಗ್ರಹಿಸಿದರು.

ಸಮೀಪದ ಶಿರಂಗಾಲ ಗ್ರಾಮದಲ್ಲಿ ಭಾನು ವಾರ ಏರ್ಪಡಿಸಿದ್ದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ರಜತ ಮಹೋತ್ಸವ ಹಾಗೂ ಗುರುವಂದನಾ ಮತ್ತು ವಾರ್ಷಿಕೋತ್ಸವ ಸಮಾರಂಭದಲ್ಲಿ ಅವರು ಮಾತನಾಡಿದರು.

ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣದೊಂದಿಗೆ ಕಂಪ್ಯೂಟರ್ ಶಿಕ್ಷಣವನ್ನು ಕಲಿಸುವ ಮೂಲಕ ಅವರ ಭವಿಷ್ಯವನ್ನು ಉಜ್ವಲಗೊಳಿಸಬೇಕು. ಸರ್ಕಾರಿ ಶಾಲಾ ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ವರ್ಷದಿಂದ ವರ್ಷಕ್ಕೆ ಕ್ಷೀಣಿಸು ತ್ತಿದ್ದರೆ ಖಾಸಗಿ ಸಂಸ್ಥೆಗಳಲ್ಲಿ ಏರಿಕೆ ಆಗು ತ್ತಿದೆ. ಪೋಷಕರು ಇಂಗ್ಲಿಷ್ ವ್ಯಾಮೋಹ ದಿಂದ ತಮ್ಮ ಮಕ್ಕಳನ್ನು ಖಾಸಗಿ ಶಾಲೆ ಗಳಿಗೆ ಸೇರಿಸುತ್ತಿದ್ದಾರೆ. ಕೇವಲ ವೇದಿಕೆಗ ಳಲ್ಲಿ ಭಾಷಣ ಮಾಡಲು ಸೀಮಿತರಾಗದೆ ಸಾಹಿತಿಗಳು ತಮ್ಮ ಮಕ್ಕಳನ್ನು ಕನ್ನಡ ಶಾಲೆಗಳಲ್ಲಿ ಓದಿಸುವ ಮೂಲಕ ಕನ್ನಡ ಶಾಲೆಗಳನ್ನು ಉಳಿಸಲು ಮುಂದಾಗಬೇಕು ಎಂದು ರಂಜನ್ ಸಲಹೆ ನೀಡಿದರು.

ಕಾರ್ಯಕ್ರಮ ಉದ್ಘಾಟಿಸಿದ ಕೊಡ್ಲಿಪೇಟೆ ಕಿರಿಕೊಡ್ಲಿ ಮಠದ ಶ್ರೀ ಸದಾಶಿವ ಸ್ವಾಮೀಜಿ ಮಾತನಾಡಿ, ಯಾವುದೇ ಒಂದು ವಿದ್ಯಾ ಸಂಸ್ಥೆ ಬೆಳವಣಿಗೆ ಹೊಂದಬೇಕಾದರೆ ಅಭಿವೃದ್ಧಿ ಸಮಿತಿ, ವಿದ್ಯಾರ್ಥಿ ವೃಂದ, ಶಿಕ್ಷಕ ವೃಂದ ಹಾಗೂ ಪೋಷಕರು ಸಮನ್ವ ಯತೆಯೊಂದಿಗೆ ಒಟ್ಟಾಗಿ ಹೋದರೆ ಗುರಿ ಸಾಧಿಸಬಹುದು ಎಂದರು.

ಜಿಲ್ಲಾ ಪಂಚಾಯಿತಿ ಸದಸ್ಯ ಎಚ್.ಆರ್. ಶ್ರೀನಿವಾಸ್ ಮಾತನಾಡಿ, ಗ್ರಾಮೀಣ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಶಿಕ್ಷಕ ವರ್ಗ ಹೆಚ್ಚಿನ ಒತ್ತು ನೀಡಬೇಕು. ಸರ್ಕಾರದ ವತಿಯಿಂದ ಸಿಗುವ ಎಲ್ಲ ಸೌಲಭ್ಯಗಳನ್ನು ವಿದ್ಯಾರ್ಥಿ ಗಳು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು. ಜೊತೆಗೆ ಪ್ರತಿ ವರ್ಷ ಅಥ್ಲೆಟಿಕ್ಸ್ ಕ್ರೀಡೆಯಲ್ಲಿ ರಾಜ್ಯ ಮಟ್ಟಕ್ಕೆ ಹೋಗುವ ಕ್ರೀಡಾಪಟುಗೆ ಹಾಗೂ ಅತೀ ಹೆಚ್ಚು ಅಂಕ ಗಳಿಸುವ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರಕ್ಕಾಗಿ ತಲಾ ರೂ.5 ಸಾವಿರ ದತ್ತಿನಿಧಿ ಸ್ಥಾಪಿಸು ವುದಾಗಿ ಭರವಸೆ ನೀಡಿದರು.

ಗ್ರಾಪಂ ಮಾಜಿ ಅಧ್ಯಕ್ಷ ಎಸ್.ವಿ.ನಂಜುಂ ಡಪ್ಪ ಮಾತನಾಡಿ, ಜಿಲ್ಲೆಯ ಗಡಿಗ್ರಾಮ ವಾದ ಶಿರಂಗಾಲಕ್ಕೆ ರೈತ ಭವನ, ಮಂಟಿ ಗಮ್ಮ ದೇವಸ್ಥಾನ ರಸ್ತೆ ಅಭಿವೃದ್ಧಿಯನ್ನು ಶಾಸಕರು ತಮ್ಮ ಅನುದಾನದಲ್ಲಿ ಮಾಡಿಸಿ ಕೊಡಬೇಕು ಎಂದು ಮನವಿ ಮಾಡಿದರು.
ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕೆಂಚಪ್ಪ ಮಾತನಾಡಿ, ಜಿಲ್ಲೆಯಲ್ಲಿ ನೆಲ್ಲಿಹುದಿಕೇರಿ, ನಾಪೋಕ್ಲು, ಪೊನ್ನಂಪೇಟೆ ಶಾಲೆಗಳನ್ನು ಪಬ್ಲಿಕ್ ಶಾಲೆ ಗಳಾಗಿ ಮೇಲ್ದರ್ಜೆಗೇರಿಸಲಾಗಿದೆ. ಅಲ್ಲದೆ ಶಿರಂಗಾಲ, ಆಲೂರು ಸಿದ್ಧಾಪುರ, ಪಾಲಿ ಬೆಟ್ಟ ಹಾಗೂ ಮಡಿಕೇರಿ ಶಾಲೆಗಳನ್ನು ಪಬ್ಲಿಕ್ ಶಾಲೆಯನ್ನಾಗಿ ಮಾಡಲು ಪ್ರಸ್ತಾ ವನೆ ಸಲ್ಲಿಸಲಾಗಿದೆ ಎಂದರು.

ಬೆಳ್ಳಿಹಬ್ಬ ಆಚರಣಾ ಸಮಿತಿ ಅಧ್ಯಕ್ಷರೂ ಆದ ಗ್ರಾ.ಪಂ.ಅಧ್ಯಕ್ಷ ಎನ್.ಎಸ್. ರಮೇಶ್ ಅಧ್ಯಕ್ಷತೆ ವಹಿಸಿದ್ದರು. ತಾಲೂಕು ಪಂಚಾಯಿತಿ ಸದಸ್ಯ ಎನ್.ಎಸ್. ಜಯಣ್ಣ, ಮಾಜಿ ಉಪಾಧ್ಯಕ್ಷ ಟಿ.ಕೆ. ಪಾಂಡುರಂಗ, ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಎಸ್.ಬಿ.ಮಹೇಶ್, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಎಸ್.ಎಸ್.ಚಂದ್ರಶೇಖರ್, ಮಂಟಿ ಗಮ್ಮ ದೇವಸ್ಥಾನ ಸಮಿತಿ ಕಾರ್ಯದರ್ಶಿ ಸಿ.ಎನ್.ಲೋಕೇಶ್, ಎಪಿಸಿಎಂಎಸ್ ನಿರ್ದೇ ಶಕ ಟಿ.ಬಿ.ಜಗದೀಶ್, ತೊರೆನೂರು ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಕೆ.ಎಸ್. ಕೃಷ್ಣೇಗೌಡ, ಎಸ್‍ಡಿಎಂಸಿ ಅಧ್ಯಕ್ಷೆ ಸುಚಿತ್ರಾ, ಕಸಾಪ ಅಧ್ಯಕ್ಷ ಬಿ.ಎಸ್.ಲೋಕೇಶ್ ಸಾಗರ್, ಮುಖಂಡರಾದ ರಾಜಪ್ಪ, ಎಸ್.ಎಸ್.ಕೃಷ್ಣ, ಧರಣೇಂದ್ರ ಕುಮಾರ್, ತಮ್ಮಯ್ಯ, ಎಸ್.ಎನ್.ಶ್ರೀಧರ್, ರಾಜು, ಕನ್ನಡ ಸಂಸ್ಕøತಿ ಇಲಾಖೆ ಮಣಜೂರು ಮಂಜು ನಾಥ್, ಎಂಜಿನಿಯರ್ ವಿರೇಂದ್ರ, ಸಂಸ್ಥೆ ಪ್ರಾಂಶುಪಾಲ ಹಂಡ್ರಂಗಿ ನಾಗರಾಜು, ಮುಖ್ಯ ಶಿಕ್ಷಕ ಸೋಮಯ್ಯ ಉಪಸ್ಥಿತರಿದ್ದರು. ಉಪನ್ಯಾಸಕ ಎಚ್.ಪಿ.ಶಿವಕುಮಾರ್ ನಿರೂಪಿಸಿದರು. ವಿದ್ಯಾರ್ಥಿನಿ ಅಕ್ಷತಾ ತಂಡದವರು ಪ್ರಾರ್ಥಿಸಿದರು.

Translate »