ಜಾಗತಿಕ ಲಿಂಗಾಯತ ಮಹಾಸಭಾ ಜಿಲ್ಲಾ ಕಚೇರಿ ಉದ್ಘಾಟನೆ ರದ್ದುಪಡಿಸಲು ಆಗ್ರಹ
ಮೈಸೂರು

ಜಾಗತಿಕ ಲಿಂಗಾಯತ ಮಹಾಸಭಾ ಜಿಲ್ಲಾ ಕಚೇರಿ ಉದ್ಘಾಟನೆ ರದ್ದುಪಡಿಸಲು ಆಗ್ರಹ

September 23, 2018

ಮೈಸೂರು: ಮೈಸೂರಿನ ಶ್ರೀನಟರಾಜ ಕಲ್ಯಾಣ ಮಂಟಪದಲ್ಲಿ ನಾಳೆ(ಸೆ.23) ನಡೆಯ ಲಿರುವ ಜಾಗತಿಕ ಲಿಂಗಾಯತ ಮಹಾ ಸಭಾ ಜಿಲ್ಲಾ ಕಚೇರಿ ಉದ್ಘಾಟನಾ ಕಾರ್ಯಕ್ರಮವನ್ನು ರದ್ದುಗೊಳಿಸಬೇಕು ಎಂದು ವೀರಶೈವ ಲಿಂಗಾಯತ ಜಾಗೃತಿ ವೇದಿಕೆಯ ಮುಖಂಡರಾದ ಟಿ.ಎಸ್. ಲೋಕೇಶ್ ಹಾಗೂ ಹಿರಿಯ ವಕೀಲ ಮಾರ್ಬಳ್ಳಿ ಮೂರ್ತಿ ಒತ್ತಾಯಿಸಿದ್ದಾರೆ.

ಜಿಲ್ಲಾ ಬಸವ ಬಳಗಗಳ ಒಕ್ಕೂಟದ ಕಚೇರಿ(ಬಸವೇಶ್ವರ ಪ್ರತಿಮೆ ಬಳಿ)ಯಲ್ಲಿ ಆಯೋಜಿಸಿದ್ದ ಜಂಟಿ ಸುದ್ದಿಗೋಷ್ಠಿ ಯಲ್ಲಿ ಮಾತನಾಡಿದ ಅವರು, ಜಾಗತಿಕ ಲಿಂಗಾಯತ ಮಹಾಸಭಾದ ಜಿಲ್ಲಾ ಕಚೇರಿ ಉದ್ಘಾಟನಾ ಕಾರ್ಯಕ್ರಮವನ್ನು ನಿಲ್ಲಿಸ ದಿದ್ದರೆ, ಅದೇ ವೇದಿಕೆ ಮುಂಭಾಗ ದಲ್ಲಿಯೇ 100ರಿಂದ 150 ಮಂದಿ ಯುವಕರು ಶಾಂತಿಯುತ ಪ್ರತಿಭಟನೆ ಹಮ್ಮಿಕೊಳ್ಳುತ್ತೇವೆ. ಇದರಿಂದ ಮುಂದಿನ ಅನಾಹುತಕ್ಕೆ ನಾವು ಜವಾಬ್ದಾರರಲ್ಲ ಎಂದು ಎಚ್ಚರಿಸಿದರು.

ಮೈಸೂರು-ಚಾಮರಾಜನಗರ ಜಿಲ್ಲೆ ಸೇರಿದಂತೆ ಹಳೇ ಮೈಸೂರು ಪ್ರಾಂತ್ಯದಲ್ಲಿ ವೀರಶೈವ-ಲಿಂಗಾಯತ ಸಮಾಜದಲ್ಲಿ ಯಾವುದೇ ಗೊಂದಲಗಳಿಲ್ಲ. ಆದರೆ, ಜಾಗತಿಕ ಲಿಂಗಾಯತ ಮಹಾಸಭಾವು ಇವೆರಡು ಸಮುದಾಯಗಳ ನಡುವೆ ಕಂದಕ ಸೃಷ್ಟಿಸಲು ಯತ್ನಿಸುತ್ತಿದೆ ಎಂದು ಆರೋಪಿಸಿದರು. ಆದ್ದರಿಂದ ನಾಳೆ (ಸೆ.23) ನಡೆಯುವ ಜಿಲ್ಲಾ ಕಚೇರಿ ಉದ್ಘಾಟನಾ ಕಾರ್ಯಕ್ರಮವನ್ನು ತಡೆ ಹಿಡಿಯುವಂತೆ ನಗರ ಪೊಲೀಸ್ ಆಯುಕ್ತ ಡಾ.ಎ.ಸುಬ್ರ ಹ್ಮಣ್ಯೇಶ್ವರರಾವ್, ಕೆ.ಆರ್.ಠಾಣೆ ಪೊಲೀಸ ರಿಗೆ ಮನವಿ ಮಾಡಿದ್ದೇವೆ ಎಂದು ಮಾಹಿತಿ ನೀಡಿದರು. ಗೋಷ್ಠಿಯಲ್ಲಿ ಮಹೇಶ್, ಶಂಕರ್, ಮಹೇಶ್ ಹಂಚ್ಯ, ಮಹೇಶ್ ಪ್ರಸಾದ್ ಉಪಸ್ಥಿತರಿದ್ದರು.

Translate »