ವಿವಿಧ ಬೇಡಿಕೆ ಈಡೇರಿಸಲು ಆಗ್ರಹ; ಕಪ್ಪು ಪಟ್ಟಿ ಧರಿಸಿ ಕರ್ತವ್ಯ ನಿರ್ವಹಿಸಿದ ರೈಲ್ವೆ ನೌಕರರು
ಮೈಸೂರು

ವಿವಿಧ ಬೇಡಿಕೆ ಈಡೇರಿಸಲು ಆಗ್ರಹ; ಕಪ್ಪು ಪಟ್ಟಿ ಧರಿಸಿ ಕರ್ತವ್ಯ ನಿರ್ವಹಿಸಿದ ರೈಲ್ವೆ ನೌಕರರು

June 9, 2020

ಮೈಸೂರು, ಜೂ.8(ಪಿಎಂ)- ರೈಲ್ವೆ ಖಾಸಗೀಕರಣ ವಿರೋಧಿಸಿ ಹಾಗೂ ಹೊಸ ಪಿಂಚಣಿ ಪದ್ಧತಿ ರದ್ದುಗೊಳಿಸ ಬೇಕೆಂಬುದೂ ಸೇರಿದಂತೆ ವಿವಿಧ ಬೇಡಿಕೆ ಗಳ ಈಡೇರಿಸಲು ಆಗ್ರಹಿಸಿ ನೈರುತ್ಯ ರೈಲ್ವೆಯ ಮೈಸೂರು ವಿಭಾಗ ವ್ಯಾಪ್ತಿಯಲ್ಲಿ ರೈಲ್ವೆ ನೌಕರರು ಕಪ್ಪುಪಟ್ಟಿ ಧರಿಸಿ ಸೋಮ ವಾರ ಕರ್ತವ್ಯ ನಿರ್ವಹಿಸುವ ಮೂಲಕ ತಮ್ಮ ಪ್ರತಿಭಟನೆ ದಾಖಲಿಸಿದರು.

ಆಲ್ ಇಂಡಿಯಾ ರೈಲ್ವೆಮನ್ ಫೆಡ ರೇಷನ್ ಕರೆ ಮೇರೆಗೆ ಇಡೀ ದೇಶದಲ್ಲಿ ರೈಲ್ವೆ ನೌಕರರು ಕಪ್ಪುಪಟ್ಟಿ ಧರಿಸಿ ಕರ್ತವ್ಯ ನಿರ್ವಹಿಸಿದ್ದು, ಅದೇ ರೀತಿ ಸೌತ್ ವೆಸ್ಟರ್ನ್ ರೈಲ್ವೆ ಮಜ್ದೂರ್ ಯೂನಿಯನ್ ಕರೆ ಮೇರೆಗೆ ನೈರುತ್ಯ ರೈಲ್ವೆ ಮೈಸೂರು ವಿಭಾಗ ವ್ಯಾಪ್ತಿ ಯಲ್ಲೂ ರೈಲ್ವೆ ನೌಕರರು ಕಪ್ಪುಪಟ್ಟಿ ಧರಿಸಿ ಕರ್ತವ್ಯ ನಿರ್ವಹಿಸಿದರು. ತಡೆ ಹಿಡಿದಿ ರುವ ತುಟ್ಟಿಭತ್ಯೆಯನ್ನು ಶೀಘ್ರದಲ್ಲಿ ಪಾವತಿ ಮಾಡಬೇಕು. ಕಾರ್ಮಿಕರ ಕಾನೂನುಗಳ ತಿದ್ದುಪಡಿಯನ್ನು ಕೂಡಲೇ ಕೈಬಿಡಬೇಕು. ಖಾಸಗೀಕರಣಕ್ಕೆ ಆದ್ಯತೆ ನೀಡುವುದನ್ನು ನಿಲ್ಲಿಸಬೇಕು. ಹೊಸ ಪಿಂಚಣಿ ಪದ್ಧತಿ ರದ್ದುಗೊಳಿಸಿ ಗ್ಯಾರಂಟಿ ಪಿಂಚಣಿ ಪದ್ಧತಿ ಜಾರಿಗೆ ತರಬೇಕು ಎಂದು ಆಗ್ರಹಿಸಿದರು. ಎಲ್ಲಾ ರನ್ನಿಂಗ್ ಸಿಬ್ಬಂದಿಗೆ ಭತ್ಯೆ ನೀಡ ಬೇಕು. ಜೊತೆಗೆ ಇವರ ಆನ್‍ಲೈನ್ ತರಬೇತಿ ಕೈಬಿಡಬೇಕು. ಕೊರೊನಾ ನಡುವೆ ತಮ್ಮ ಜೀವದ ಹಂಗು ತೊರೆದು ಕೆಲಸ ಮಾಡಿದ ಎಲ್ಲಾ ಸಿಬ್ಬಂದಿಗೆ ಪ್ರೋತ್ಸಾಹಧನ ಕೊಡ ಬೇಕು. ನಿಯಮಿತ ಅವಧಿಗಳ ವರ್ಗಾವಣೆ ರದ್ದು ಮಾಡಬೇಕು ಎಂದು ಒತ್ತಾಯಿಸಿ ಕಪ್ಪು ಪಟ್ಟಿ ಧರಿಸಿ ಕರ್ತವ್ಯ ನಿರ್ವಹಿಸಲಾಯಿತು.

Translate »