ಚಾಮರಾಜನಗರ: ನಿರುದ್ಯೋಗ ನಿವಾರಣೆಗಾಗಿ ಹಮ್ಮಿಕೊಳ್ಳಲಾಗುವ ಉದ್ಯೋ ಗಮೇಳದ ಪ್ರಯೋಜನವನ್ನು ಪೂರ್ಣ ಪ್ರಮಾಣದಲ್ಲಿ ಪಡೆದುಕೊಳ್ಳಲು ಉದ್ಯೋಗಾ ಕಾಂಕ್ಷಿಗಳು ಮುಂದಾಗಬೇಕೆಂದು ಜಿಲ್ಲಾಧಿ ಕಾರಿ ಬಿ.ಬಿ. ಕಾವೇರಿ ಸಲಹೆ ನೀಡಿದರು.
ನಗರದ ಜೆಎಸ್‍ಎಸ್ ಮಹಿಳಾ ಕಾಲೇಜು ಆವರಣದಲ್ಲಿಂದು ಜಿಲ್ಲಾಡಳಿತ, ಜಿಪಂ, ಕೈಗಾರಿಕೆ ತರಬೇತಿ ಮತ್ತು ಉದ್ಯೋಗ ಇಲಾಖೆ, ರಾಷ್ಟ್ರೀಯ ವೃತ್ತಿ ಸೇವಾ ಯೋಜನೆ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಜಿಲ್ಲಾ ಮಟ್ಟದ ಉದ್ಯೋಗಮೇಳ ಉದ್ಘಾಟಿಸಿ ಅವರು ಮಾತನಾಡಿದರು.
ಪ್ರಸ್ತುತ ಸಂದರ್ಭದಲ್ಲಿ ಉದ್ಯೋಗಕ್ಕೆ ಬೇಡಿಕೆ ಹೆಚ್ಚಿದೆ. ಉದ್ಯೋಗ ಅವಕಾಶಗ ಳನ್ನು ಅರಸುವವರ ಸಂಖ್ಯೆಯೂ ಸಾಕ ಷ್ಟಿದೆ. ಹೀಗಾಗಿ ಜಿಲ್ಲಾ ಮಟ್ಟದಲ್ಲಿಯೇ ಉದ್ಯೋಗ ಮೇಳವನ್ನು ಆಯೋಜಿಸಿ ಅಭ್ಯರ್ಥಿಗಳಿಗೆ ಅನುಕೂಲ ಮಾಡಿಕೊಡುವ ಕೆಲಸವನ್ನು ಇಲಾ ಖೆಗಳ ಮುಖಾಂತರ ಮಾಡಲಾಗುತ್ತಿದೆ ಎಂದರು.
ಇಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿ ಪರ ಕೋರ್ಸು ಕಾಲೇಜುಗಳಲ್ಲಿ ಅಂತಿಮ ಹಂತದ ತರಗತಿ ಅಧ್ಯಯನ ಸಂದರ್ಭ ದಲ್ಲಿಯೇ ವಿದ್ಯಾರ್ಥಿಗಳನ್ನು ಗುರುತಿಸಿ ಉದ್ಯೋಗ ಅವಕಾಶ ನೀಡುವ ಪ್ರಕ್ರಿಯೆ ಹೆಚ್ಚಾಗಬೇಕಿದೆ. ಪ್ರತಿಷ್ಠಿತ ಕಂಪನಿಗಳೊಂ ದಿಗೆ ಒಪ್ಪಂದ ಮಾಡಿಕೊಂಡು ಉತ್ತಮ ಉದ್ಯೋಗ ನೀಡುವಂತಾಗಬೇಕು. ಉದ್ಯೋಗ ಮೇಳ ಆಯೋಜನೆ ಸಂದರ್ಭದಲ್ಲಿ ಜಿಲ್ಲೆಯ ಅಭ್ಯರ್ಥಿಗಳು ಹೆಚ್ಚು ಉತ್ಸಾಹದಿಂದ ಪಾಲ್ಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸಲಹೆ ಮಾಡಿದರು.
ಜಿಲ್ಲಾ ಉದ್ಯೋಗಾಧಿಕಾರಿ ಸಿ.ಎಂ. ಉಮಾ ಮಾತನಾಡಿದರು. ತಾಪಂ ಅಧ್ಯಕ್ಷೆ ದೊಡ್ಡಮ್ಮ, ಜೆಎಸ್‍ಎಸ್ ಮಹಿಳಾ ಕಾಲೇಜು ಪ್ರಾಂಶುಪಾಲ ಎ.ಜೆ.ಶಿವಕು ಮಾರ್, ಕೌಶಲ್ಯ ಅಭಿವೃದ್ಧಿ ಉದ್ಯಮ ಶೀಲತೆ ಮತ್ತು ಜೀವನೋಪಾಯ ಇಲಾ ಖೆಯ ಸಹಾಯಕ ನಿರ್ದೇಶಕ ಎನ್.ಎಸ್. ವೆಂಕಟರಾವ್, ಅಮ್ಜದ್ ಪಾಷ, ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಉದ್ಯೋಗಮೇಳದಲ್ಲಿ ಭಾಗವಹಿಸಿ ರುವ ಕಂಪನಿಗಳ ಮಳಿಗೆಗಳಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿ ಕಾವೇರಿ ಅವರು ಅಗತ್ಯ ಮಾಹಿತಿ ಪಡೆದರು. ಇದೇ ವೇಳೆ ಕೆಲ ಅಭ್ಯರ್ಥಿಗಳಿಗೆ ಜಿಲ್ಲಾಧಿಕಾರಿಗಳೇ ಕಂಪನಿ ಪರವಾಗಿ ಉದ್ಯೋಗ ಪತ್ರ ವಿತರಿಸಿದರು.