ಅರ್ಥಪೂರ್ಣ ಸ್ವಾತಂತ್ರ್ಯ ದಿನಾಚರಣೆಗೆ ಜಿಲ್ಲಾಧಿಕಾರಿ ಬಿ.ಬಿ.ಕಾವೇರಿ ಸೂಚನೆ
ಚಾಮರಾಜನಗರ

ಅರ್ಥಪೂರ್ಣ ಸ್ವಾತಂತ್ರ್ಯ ದಿನಾಚರಣೆಗೆ ಜಿಲ್ಲಾಧಿಕಾರಿ ಬಿ.ಬಿ.ಕಾವೇರಿ ಸೂಚನೆ

July 20, 2018

ಚಾಮರಾಜನಗರ: ಜಿಲ್ಲಾಡಳಿತ ವತಿಯಿಂದ ಆಗಸ್ಟ್ 15ರಂದು ಜಿಲ್ಲಾ ಕೇಂದ್ರದಲ್ಲಿ ಸ್ವಾತಂತ್ರ್ಯ ದಿನ ಆಚರಣೆ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಆಯೋಜಿಸಲು ಅಧಿಕಾರಿಗಳು ಅಗತ್ಯ ಸಿದ್ಧತೆ ಕೈಗೊಳ್ಳು ವಂತೆ ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ಅವರು ಸೂಚನೆ ನೀಡಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇಂದು ಸ್ವಾತಂತ್ರೋತ್ಸವ ಆಚರಣೆ ಸಂಬಂಧ ಕರೆಯಲಾಗಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ರಾಷ್ಟ್ರೀಯ ಹಬ್ಬವಾದ ಸ್ವಾತಂತ್ರ್ಯ ದಿನ ಆಚರಣೆ ಕಾರ್ಯಕ್ರಮವನ್ನು ಯಾವುದೇ ಲೋಪಕ್ಕೆ ಅವಕಾಶವಿಲ್ಲದಂತೆ ನಡೆಸ ಬೇಕು. ಸ್ವಾತಂತ್ರ್ಯ ದಿನವನ್ನು ಅರ್ಥಪೂರ್ಣ ಹಾಗೂ ಸುಗಮ ಆಚರಣೆಗೆ ಸಮಿತಿ ಗಳನ್ನು ನೇಮಕ ಮಾಡಲಾಗಿದೆ. ಸಮಿತಿ ಯಲ್ಲಿ ಕಾರ್ಯನಿರ್ವಹಿಸಬೇಕಾದ ಅಧಿಕಾರಿಗಳ ವಿವರವನ್ನು ನೀಡಲಾಗಿದೆ. ಸಮಿತಿಯಲ್ಲಿರುವ ಅಧಿಕಾರಿಗಳು ಸೂಚಿಸ ಲಾಗಿರುವ ಸಿದ್ಧತಾ ಕಾರ್ಯಗಳನ್ನು ಸಮ ರ್ಪಕವಾಗಿ ನಿರ್ವಹಿಸಬೇಕು ಎಂದರು.

ಇದೇ ಸಂದರ್ಭದಲ್ಲಿ ಮಾತನಾಡಿದ ವಿವಿಧ ಸಂಘಟನೆಗಳ ಮುಖಂಡರು ಶಾಲಾ ಮಕ್ಕಳಿಗೆ ನೆರಳಿನ ವ್ಯವಸ್ಥೆಯಾಗಬೇಕು. ಶಿಷ್ಠಾಚಾರದಲ್ಲಿ ಯಾವುದೇ ಲೋಪವಾಗ ಬಾರದು. ಹಿರಿಯ ಸ್ವಾತಂತ್ರ್ಯ ಹೋರಾಟ ಗಾರರನ್ನು ಸನ್ಮಾನಿಸಿ ಗೌರವಿಸುವ ಕೆಲಸ ವಾಗಬೇಕು. ಬ್ಯಾಂಕು, ಖಾಸಗಿ ಶಾಲೆಗಳು ಇತರೆ ಕಚೇರಿಗಳಲ್ಲೂ ಕಡ್ಡಾಯವಾಗಿ ಧ್ವಜಾರೋಹಣ ನೆರವೇರಬೇಕು. ಕಾರ್ಮಿ ಕರಿಗೆ ಅಂದು ಕಡ್ಡಾಯವಾಗಿ ರಜೆ ಸೌಲಭ್ಯ ಸಿಗಬೇಕು ಎಂಬ ಸಲಹೆಗಳನ್ನು ನೀಡಿದರು.

ಎಲ್ಲರ ಸಲಹೆ ಹಾಗೂ ಅಭಿಪ್ರಾಯ ಗಳನ್ನು ಆಲಿಸಿ ಮಾತನಾಡಿದ ಜಿಲ್ಲಾ ಧಿಕಾರಿಗಳು ಶಾಲಾ ಮಕ್ಕಳಿಗೆ ನೆರಳಿನ ವ್ಯವಸ್ಥೆಗೆ ಪೂರಕವಾಗುವಂತೆ ಶಾಮಿಯಾನ ಹಾಕಬೇಕು. ಹಿರಿಯ ಸ್ವಾತಂತ್ರ್ಯ ಹೋರಾಟಗಾರರನ್ನು ಸನ್ಮಾನಿಸುವ ಬಗ್ಗೆ ಸಂಬಂಧಪಟ್ಟ ಸಮಿತಿಯು ಕ್ರಮ ವಹಿಸ ಬೇಕು. ಸ್ವಾತಂತ್ರ್ಯ ಹೋರಾಟಗಾರರನ್ನು ಗುರುತಿಸಿ ಅಗತ್ಯ ಪ್ರಕ್ರಿಯೆ ಕೈಗೊಳ್ಳಬೇಕು ಎಂದು ತಿಳಿಸಿದರು.

ಎಲ್ಲಾ ಶಾಲೆಗಳಲ್ಲಿ ಇತರೆ ಕಚೇರಿ ಗಳಲ್ಲೂ ಕಡ್ಡಾಯವಾಗಿ ಧ್ವಜಾರೋಹಣ ನೆರವೇರಿಸಲು ಸೂಚಿಸಲಾಗುತ್ತದೆ. ಬ್ಯಾಂಕುಗಳಲ್ಲಿಯೂ ಸಹ ಸ್ವಾತಂತ್ರ್ಯ ದಿನ ಆಚರಣೆಗೆ ಸೂಕ್ತ ಕ್ರಮ ವಹಿಸಲು ಲೀಡ್ ಬ್ಯಾಂಕ್ ಅಧಿಕಾರಿಗಳಿಗೆ ನಿರ್ದೇಶನ ನೀಡ ಲಾಗುತ್ತದೆ. ಕಾರ್ಮಿಕರಿಗೆ ರಜೆ ಸೌಲಭ್ಯ ಸಿಗುವಂತಾಗಲು ಕಾರ್ಮಿಕ ಅಧಿಕಾರಿ ಗಳು ಅಗತ್ಯ ಸೂಚನೆ ನೀಡಲು ಸಹ ತಿಳಿಸಲಾಗುವುದೆಂದು ಹೇಳಿದರು.

ಪಥಸಂಚಲನ, ಸಾಂಸ್ಕøತಿಕ ಕಾರ್ಯಕ್ರಮ ಗಳ ತಾಲೀಮು ಆರಂಭಿಸಬೇಕು. ತಾಲೀಮು ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಉಪಾ ಹಾರ, ಕುಡಿಯುವ ನೀರು ವ್ಯವಸ್ಥೆ ಕಲ್ಪಿಸಬೇಕು ಎಂದರು.

ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಕಾರ್ಯ ಕ್ರಮಕ್ಕೆ ವೇದಿಕೆ, ಆಹ್ವಾನಿತರು, ವಿದ್ಯಾರ್ಥಿ ಗಳು, ಗಣ್ಯರು ಕುಳಿತುಕೊಳ್ಳಲು ಶಾಮಿ ಯಾನ ಹಾಗೂ ಆಸನಗಳ ವ್ಯವಸ್ಥೆ ಮಾಡ ಬೇಕು. ಸಂಜೆ ಚಾಮರಾಜೇಶ್ವರ ದೇವಾ ಲಯ ಬಳಿ ಸಾಂಸ್ಕೃತಿಕ ಕಾರ್ಯಕ್ರಮ ಗಳನ್ನು ಏರ್ಪಡಿಸಬೇಕು. ಉತ್ತಮ ಕಾರ್ಯ ಕ್ರಮಗಳು ಮೂಡಿಬರಬೇಕು. ಈ ಬಗ್ಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಅಗತ್ಯ ಕ್ರಮವನ್ನು ತೆಗೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.

ಇದೇ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕೆ. ಹರೀಶ್ ಕುಮಾರ್, ಸಾಂಸ್ಕøತಿಕ ಕಾರ್ಯಕ್ರಮಗಳು ಪುನರಾವ ರ್ತಿತವಾಗದೆ ವೈವಿದ್ಯಮಯವಾಗಿ ಇರುವಂತೆ ನೋಡಿಕೊಳ್ಳಬೇಕು. ಸಮನ್ವಯದಿಂದ ತರಬೇತಿ ನೀಡಿ ವಿದ್ಯಾರ್ಥಿಗಳನ್ನು ಸಜ್ಜು ಗೊಳಿಸಬೇಕು ಎಂದು ತಿಳಿಸಿದರು.

ಸ್ವಾತಂತ್ರ್ಯೋತ್ಸವ ದಿನದಂದು ಎಲ್ಲ ಅಧಿ ಕಾರಿಗಳು ಇಲಾಖೆಯ ಸಿಬ್ಬಂದಿಯೊಂದಿಗೆ ಕಡ್ಡಾಯವಾಗಿ ಹಾಜರಿರಬೇಕು. ಅಧಿಕಾರಿ ಸಿಬ್ಬಂದಿಯವರ ಹಾಜರಾತಿಯನ್ನು ಗಮನಿಸಲಾಗುವುದು. ಗೈರುಹಾಜರಾಗುವವರ ವಿರುದ್ಧ ಗಂಭೀರ ಕ್ರಮ ತೆಗೆದುಕೊಳ್ಳ ಲಾಗುವುದು ಎಂದು ಜಿಲ್ಲಾಧಿಕಾರಿ ಎಚ್ಚರಿಕೆ ನೀಡಿದರು.

ಹೆಚ್ಚುವರಿ ಜಿಲಾಧಿಕಾರಿ ಕೆ.ಎಂ.ಗಾಯತ್ರಿ, ಮುಖಂಡರಾದ ಶಾ.ಮುರಳಿ, ಚಾ.ರಂ. ಶ್ರೀನಿ ವಾಸಗೌಡ, ನಿಜಧ್ವನಿ ಗೋವಿಂದರಾಜು, ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ವಿನಯ್, ಚಾ.ಗು. ನಾಗರಾಜು, ಸಾರ್ವ ಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ರಾದ ಮಹದೇವಪ್ಪ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕರಾದ ಚನ್ನಪ್ಪ ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

Translate »