ಸರ್ಕಾರಿ ನೌಕರರ ಕ್ರೀಡಾಕೂಟ, ಸಾಂಸ್ಕøತಿಕ ಸ್ಪರ್ಧೆ ಆಯೋಜನೆಗೆ ಜಿಲ್ಲಾಧಿಕಾರಿ ಸೂಚನೆ

ಚಾಮರಾಜನಗರ: ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಪ್ರಸಕ್ತ ಸಾಲಿನ ಕ್ರೀಡಾಕೂಟ ಹಾಗೂ ಸಾಂಸ್ಕøತಿಕ ಸ್ಪರ್ಧಾ ಕಾರ್ಯಕ್ರಮವನ್ನು ಈ ತಿಂಗಳ ಅಂತ್ಯದ ವೇಳೆಗೆ ಆಯೋಜಿಸಲು ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ಅವರು ಸೂಚನೆ ನೀಡಿದರು.ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣ ದಲ್ಲಿ ಇಂದು ಜಿಲ್ಲಾಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕøತಿಕ ಸ್ಪರ್ಧೆಗಳ ಏರ್ಪಾಡು ಸಂಬಂಧ ಕರೆಯಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ರಾಜ್ಯ ಸರ್ಕಾರಿ ನೌಕರರ ಜಿಲ್ಲಾಮಟ್ಟದ ಕ್ರೀಡಾಕೂಟವನ್ನು ನಗರದ ಡಾ. ಬಿ.ಆರ್. ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಆಯೋ ಜಿಸಬೇಕು. ಇದೇ ವೇಳೆ ನೌಕರರಲ್ಲಿರುವ ಕಲೆ, ಸಂಗೀತ, ಸಂಸ್ಕøತಿ ಚಟುವಟಿಕೆಗಳ ಅನಾವರಣಕ್ಕೆ ಅವಕಾಶ ಮಾಡಿಕೊಡುವ ವಿವಿಧ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ಏರ್ಪಾಡು ಮಾಡುವಂತೆ ಜಿಲ್ಲಾಧಿಕಾರಿ ತಿಳಿಸಿದರು.
ಕ್ರೀಡೆ ಹಾಗೂ ಸಾಂಸ್ಕøತಿಕ ಸ್ಪರ್ಧೆಗಳಲ್ಲಿ ಜಿಲ್ಲೆಯ ಎಲ್ಲಾ ನೌಕರರು ಸಕ್ರಿಯವಾಗಿ ಹಾಗೂ ಅಸಕ್ತಿಯಿಂದ ಪಾಲ್ಗೊಳ್ಳಲು ಅವಕಾಶ ಮಾಡಿಕೊಡಬೇಕು. ಈ ಸಂಬಂಧ ಪೂರ್ವಸಿದ್ಧತೆಯನ್ನು ಕೈಗೊಂಡು ಮಾಹಿತಿ ನೀಡುವಂತಾಗಬೇಕು. ಅಧಿಕಾರಿ ಗಳು ಶೀಘÀ್ರವೇ ಕಾರ್ಯಕ್ರಮ ಸಿದ್ದತೆಗಳಿಗೆ ಕಾರ್ಯೋನ್ಮುಖರಾಗಬೇಕೆಂದು ಕಾವೇರಿಯವರು ತಿಳಿಸಿದರು.

ಕ್ರೀಡಾಂಗಣದಲ್ಲಿ ಸ್ವಚ್ಚತೆ ಕಾಪಾಡಬೇಕು. ವಿವಿಧ ಸ್ಪರ್ಧೆಗಳಿಗೆ ಕ್ರೀಡಾಂಗಣವನ್ನು ಸಜ್ಜುಗೊಳಿಸಬೇಕು. ಕುಡಿಯುವ ನೀರು, ವೈದ್ಯಕೀಯ ವ್ಯವಸ್ಥೆ, ತೀರ್ಪುಗಾರರ ಪಟ್ಟಿ, ಸ್ಪರ್ಧಾ ವಿಜೇತರಿಗೆ ನೀಡಬೇಕಿರುವ ಬಹುಮಾನ ಇನ್ನಿತರ ಅವಶ್ಯಕ ಏರ್ಪಾಡು ಕ್ರಮಗಳಿಗೆ ಮುಂದಾಗಬೇಕು ಎಂದರು.
ಕ್ರೀಡಾಕೂಟ ಹಾಗೂ ಸಾಂಸ್ಕ್ರತಿಕ ಸ್ಪರ್ಧೆಗಳ ಆಯೋಜನೆಗೆ ಅಧಿಕಾರಿಗಳು ಪೂರ್ವಭಾವಿಯಾಗಿ ಏನೇನು ಸಿದ್ದತೆಗಳು ಕೈಗೊಳ್ಳಲಾಗಿದೆ ಎಂಬ ಬಗ್ಗೆ ಮುಂಚಿತ ವಾಗಿಯೆ ನೋಡಿಕೊಳ್ಳಬೇಕು. ಯಾವುದೇ ಲೋಪಕ್ಕೆ ಅವಕಾಶವಾಗಬಾರದು. ಪ್ರತಿಯೊಬ್ಬ ಅಧಿಕಾರಿಗೂ ಜವಾಬ್ದಾರಿ ವಹಿಸಿ ಕಾರ್ಯ ಕ್ರಮ ಯಶಸ್ವಿಗೊಳಿಸಬೇಕು ಎಂದು ಜಿಲ್ಲಾಧಿ ಕಾರಿ ಕಾವೇರಿ ಅವರು ತಿಳಿಸಿದರು.

ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷರಾದ ಆರ್. ರಾಚಪ್ಪ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಎಂ. ಚಲು ವಯ್ಯ ಕ್ರೀಡಾಕೂಟ ಹಾಗೂ ಸಾಂಸ್ಕøತಿಕ ಸ್ಪರ್ಧೆಗಳ ಸಂಬಂಧ ಸಭೆಗೆ ಮಾಹಿತಿ ನೀಡಿದರು.ರಾಜ್ಯ ಸರ್ಕಾರಿ ನೌಕರರ ಸಂಘದ ಗೌರವ ಜಿಲ್ಲಾಧ್ಯಕ್ಷರಾದ ರಂಗಸ್ವಾಮಿ, ಪ್ರಧಾನ ಕಾರ್ಯದರ್ಶಿ ಮಹದೇವ ಸ್ವಾಮಿ, ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಪದ್ಮಾಶೇಖರ್ ಪಾಂಡೆ, ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕೆ.ಎಚ್. ಪ್ರಸಾದ್, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಕೃಷ್ಣಪ್ಪ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ರಾಜ್ಯ ಸರ್ಕಾರಿ ನೌಕರರ ಸಂಘದ ಪ್ರತಿ ನಿಧಿಗಳು ಸಭೆಯಲ್ಲಿ ಹಾಜರಿದ್ದರು.