ನಿರಂತರ ಅಭ್ಯಾಸದಿಂದ ಗುರಿ ಸಾಧನೆ ಸುಲಭ ತಾಯಂದಿರ ಸಭೆಯಲ್ಲಿ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅಭಿಮತ
ಹಾಸನ

ನಿರಂತರ ಅಭ್ಯಾಸದಿಂದ ಗುರಿ ಸಾಧನೆ ಸುಲಭ ತಾಯಂದಿರ ಸಭೆಯಲ್ಲಿ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅಭಿಮತ

July 27, 2018

ಹಾಸನ:  ‘ವಿದ್ಯಾರ್ಥಿ ಜೀವನದಲ್ಲಿ 10ನೇ ತರಗತಿಯಿಂದ ಅಂತಿಮ ಪದವಿ ಪೂರ್ಣಗೊಳಿಸುವ ಹಂತವು ಮುಖ್ಯವಾದ ಕಾಲಘಟ್ಟವಾಗಿದೆ. ಈ ಸಮಯವನ್ನು ಉತ್ತಮ ರೀತಿಯಲ್ಲಿ ಸದ್ಬಳಕೆ ಮಾಡಿಕೊಳ್ಳುವ ಮೂಲಕ ನಿಗದಿತ ಗುರಿ ಸಾಧಿಸಬೇಕು’ ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹೇಳಿದರು.

ತಾಲೂಕಿನ ಕಟ್ಟಾಯದ ಸರ್ಕಾರಿ ಪ್ರೌಢ ಶಾಲೆಯಲ್ಲಿ ಮಕ್ಕಳ ಶೈಕ್ಷಣಿಕ ಬೆಳವಣಿಗೆಗೆ ಸಹಕಾರಿಯಾಗುವಂತೆ ಏರ್ಪಡಿಸಿದ್ದ ತಾಯಂ ದಿರ ಸಭೆಯನ್ನು ಉದ್ಘಾಟಿಸಿ ಅವರು ಮಾತ ನಾಡಿದರು. ವಿದ್ಯಾರ್ಥಿಗಳು ತಮಗೆ ಆಸಕ್ತಿ ಇರುವ ಕ್ಷೇತ್ರವನ್ನು ಆಯ್ಕೆ ಮಾಡಿ ಕೊಳ್ಳಬೇಕು. ಪ್ರತಿದಿನ ವೇಳಾಪಟ್ಟಿ ತಯಾರಿಸಿಕೊಂಡು ಪ್ರತಿನಿತ್ಯ ಒಂದೆರೆಡು ಗಂಟೆ ತಾವು ಆಯ್ಕೆ ಮಾಡಿಕೊಂಡಿರುವ ಕ್ಷೇತ್ರದ ಬಗ್ಗೆ ಅಭ್ಯಸಿಸಲು ಮೀಸಲಿಡ ಬೇಕು. ನಿರಂತರ ಅಭ್ಯಾಸದಿಂದ ಗುರಿ ಮುಟ್ಟಲು ಸಹಕಾರಿಯಾಗಲಿದೆ ಎಂದರು.

ಸಿನಿಮಾ, ಟಿವಿ, ಮೊಬೈಲ್ ಇವುಗಳು ಮಕ್ಕಳ ಮನಸ್ಸಿನ ಮೇಲೆ ಪ್ರಭಾವ ಬೀರುತ್ತವೆ. ಈ ಬಗ್ಗೆ ತಾಯಂದಿರು ಎಚ್ಚರ ವಹಿಸಿ ಮಕ್ಕಳ ವಿದ್ಯಾಭ್ಯಾಸಕ್ಕೆ ಹೆಚ್ಚು ಒತ್ತು ನೀಡಬೇಕು ಎಂದು ತಿಳಿಸಿದರು.

ಮಕ್ಕಳು ಶಾಲಾ ಗ್ರಂಥಾಲಯದಲ್ಲಿ ಲಭ್ಯವಿರುವ ಪುಸ್ತಕಗಳನ್ನು ಓದುವ ಹವ್ಯಾಸ ರೂಢಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಸಭೆಯಲ್ಲಿ ಭಾಗವಹಿಸಿದ್ದ ತಾಯಂದಿರು ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸುತ್ತಾ ರಸ್ತೆ, ಬಸ್ ಸೌಲಭ್ಯ, ವೈದ್ಯರು ಕೊರತೆ ಹಾಗೂ ಕುಡಿಯುವ ನೀರಿಗೆ ಸಂಬಂಧಪಟ್ಟ ಸಮಸ್ಯೆಗಳನ್ನು ಸರಿಪಡಿಸುವಂತೆ ಜಿಲ್ಲಾಧಿ ಕಾರಿಗೆ ಮನವಿ ಮಾಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ಅವರು ಮಕ್ಕಳಿಗೆ ಸಹಾಯವಾಗುವಂತೆ ನಿಗದಿತ ಸ್ಥಳಗಳಲ್ಲಿ ಬಸ್ ನಿಲುಗಡೆಗೆ ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡುವುದಾಗಿ ತಿಳಿಸಿದರು. ರಸ್ತೆಗೆ ಸಂಬಂಧ ಪಟ್ಟ ಕಾಮಗಾರಿಯನ್ನು ಕ್ರಿಯಾ ಯೋಜನೆ ಯಲ್ಲಿ ಸೇರಿಸಲು ಅಧಿಕಾರಿಗಳಿಗೆ ಸೂಚಿಸ ಲಾಗುವುದು ಎಂದ ಅವರು, ಶಾಲಾ ಕಾಂಪೌಂಡ್ ಕೆಲಸವನ್ನು ನರೇಗಾ ಯೋಜನೆಯಡಿ ಕಟ್ಟಿಸಲು ಗ್ರಾಮ ಪಂಚಾಯಿತಿ ಅಧಿಕಾರಿಗೆ ಸೂಚಿಸಿದರು.

ಕುಡಿಯುವ ನೀರನ್ನು ನಿಗದಿತ ಸಮಯಕ್ಕೆ ನೀಡುವುದರ ಜೊತೆಗೆ ಟ್ಯಾಂಕ್ ಅನ್ನು ಸ್ವಚ್ಛಗೊಳಿಸಲು ಕ್ರಮ ವಹಿಸುವಂತೆ ಪಂಚಾ ಯಿತಿ ಅಧಿಕಾರಿಗಳಿಗೆ ಸೂಚಿಸಿದ ಜಿಲ್ಲಾಧಿಕಾರಿ ಯವರು 15 ದಿನಗಳಿಗೊಮ್ಮೆ ವರದಿ ನೀಡುವಂತೆ ಆದೇಶಿಸಿದರು. ಶಾಲಾ ಗೌರವಾಧ್ಯಕ್ಷ ಡಾ.ಗುರುರಾಜ್ ಹೆಬ್ಬಾರ್ ಮಾತನಾಡಿ, ಸರ್ಕಾರಿ ಶಾಲೆಗಳು ಉಳಿಯಬೇಕು. ಚೆನ್ನಾಗಿ ನಡೆಯಬೇಕು ಈ ನಿಟ್ಟಿನಲ್ಲಿ ಎಲ್ಲರ ಸಹಕಾರ ಅಗತ್ಯ ಎಂದರು. ಮಲ್ನಾಡ್ ನರ್ಸಿಂಗ್ ಹೋಂ ಸ್ತ್ರೀ ಮತ್ತು ಪ್ರಸೂತಿ ತಜ್ಞೆ ಡಾ.ಸಾವಿತ್ರಿ ಮಾತನಾಡಿ, ಕೆಲವು ಮೂಢನಂಬಿಕೆಗಳಿಗೆ ಬಲಿಯಾಗಿ ಮಹಿಳೆಯರು ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಕಳೆದುಕೊಳ್ಳುತ್ತಿ ದ್ದಾರೆ.

ಆರೋಗ್ಯವನ್ನು ಕಡೆಗಣಿಸಿ ಹಣ ಗಳಿಸಿದರೆ ಹಣದಿಂದ ಆರೋಗ್ಯ ಪಡೆಯಲು ಸಾಧ್ಯವಿಲ್ಲ. ಹಾಗಾಗಿ, ಪೌಷ್ಟಿಕ ಆಹಾರವನ್ನು ತಾಯಂದಿರು ಸೇವಿಸಬೇಕು ಜೊತೆಗೆ, ಮಕ್ಕಳಿಗೂ ನೀಡಬೇಕು ಎಂದು ತಿಳಿಸಿದರು.

ವೈದ್ಯರಾದ ಡಾ.ಪೂರ್ಣಿಮಾ, ಡಾ. ಕಿರಣ್ ಅವರು ಹೆಣ್ಣು ಮಕ್ಕಳ ಆರೋಗ್ಯ ಮತ್ತು ಸಮಸ್ಯೆಗಳನ್ನು ಚರ್ಚಿಸುವುದರ ಜೊತೆಗೆ ಪರಿಹಾರ ತಿಳಿಸಿದರು. ಕಾರ್ಯಕ್ರಮದಲ್ಲಿ ಪ್ರೊಬೆಷನರಿ ಐಎಎಸ್ ಅಧಿಕಾರಿ ಎಂ.ಪ್ರಿಯಾಂಕ, ಶಾಲೆ ಮುಖ್ಯ ಶಿಕ್ಷಕ ಹಾಗೂ ಶಿಕ್ಷಕರು ಇದ್ದರು.

Translate »