ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಜಿಲ್ಲಾಧಿಕಾರಿ ಸೂಚನೆ
ಹಾಸನ

ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಜಿಲ್ಲಾಧಿಕಾರಿ ಸೂಚನೆ

February 12, 2019

ಹಾಸನ: ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಇಂದು ಚನ್ನರಾಯಪಟ್ಟಣ ತಾಲೂಕು ಕಚೇರಿಯಲ್ಲಿ ವಿವಿಧ ಇಲಾಖಾ ಅಧಿಕಾರಿಗಳ ಸಭೆ ನಡೆಸಿ ಆಡಳಿತಯಂತ್ರ ಚುರುಕುಗೊಳಿಸುವ ನಿಟ್ಟಿನಲ್ಲಿ ಹಲವು ಸಲಹೆ ಸೂಚನೆಗಳನ್ನು ನೀಡಿದರು.

ಸರ್ಕಾರದ ಯೋಜನೆಗಳ ಸಮರ್ಪಕ ಅನುಷ್ಠಾನ ಸೇವೆಗಳನ್ನು ಕಾಲಮಿತಿ ಯೊಳಗೆ ಒದಗಿಸುವುದು, ಬರ ನಿರ್ವಹಣೆ, ಕಡತ ವಿಲೇವಾರಿ ವಿಚಾರಗಳ ಕುರಿತು ಅಧಿಕಾರಿಗಳಿಗೆ ಹಲವು ನಿರ್ದೇಶನ ಗಳನ್ನು ನೀಡಿದರು.

ಸದ್ಯ ಹಣಕಾಸು ವರ್ಷದ ಕಡೆಯಲ್ಲಿದ್ದು, ಶೇ.100ರಷ್ಟು ಆರ್ಥಿಕ, ಭೌತಿಕ ಗುರಿ ಸಾಧನೆ ಯಾಗಬೇಕು, ಗುಣಮಟ್ಟ ಕಾಯ್ದುಕೊಳ್ಳ ಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಸರ್ಕಾರಿ ಕಚೇರಿಗಳಿಗೆ ಸಾರ್ವಜನಿಕ ರನ್ನು ಅನಗತ್ಯವಾಗಿ ಅಲೆದಾಡಿಸಬಾರದು ಮತ್ತು ಸಮರ್ಪಕವಾಗಿ ಮಾಹಿತಿ ನೀಡಬೇಕು. ವಿವಾದರಹಿತ ಮನವಿಗಳನ್ನು ಶೀಘ್ರವಾಗಿ ವಿಲೇವಾರಿ ಮಾಡಿ ಎಂದು ಹೇಳಿದರು.

ಈ ವರ್ಷ ಜಿಲ್ಲೆಯ ಎಲ್ಲಾ ತಾಲೂಕು ಗಳು ಬರಪೀಡಿತ ಎಂದು ಘೋಷಿಸಲ್ಪಟ್ಟಿ ರುವುದರಿಂದ ಮುಂಬರುವ ಬೇಸಿಗೆಯಲ್ಲಿ ಕುಡಿಯುವ ನೀರು ಹಾಗೂ ಜನ ಜಾನು ವಾರುಗಳಿಗೆ ಯಾವುದೇ ತೊಂದರೆಯಾಗ ದಂತೆ ಮುಂಜಾಗ್ರತೆ ವಹಿಸಬೇಕು. ಕಂದಾಯ ಇಲಾಖೆ, ಗ್ರಾಮೀಣ ಕುಡಿ ಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಹಾಗೂ ಪಶು ಪಾಲನೆ ಇಲಾಖೆ ಜಂಟಿ ಯಾಗಿ ಯೋಜನೆಗಳನ್ನು ರೂಪಿಸಿ ಕಾರ್ಯ ರೂಪಕ್ಕೆ ತರಬೇಕು. ಕೃಷಿ ಹಾಗೂ ತೋಟ ಗಾರಿಕಾ ಇಲಾಖಾ ಅಧಿಕಾರಿಗಳು ಬೆಳೆ ಹಾನಿ ಹಾಗೂ ಪರ್ಯಾಯ ಬೆಳೆ ವ್ಯವಸ್ಥೆ ಬಗ್ಗೆ ನಿಗಾವಹಿಸಬೇಕು. ರೈತರಿಗೆ ಕಾಲ ಕಾಲಕ್ಕೆ ಮಾಹಿತಿ ಹಾಗೂ ಮಾರ್ಗ ದರ್ಶನ ಮತ್ತು ನೆರವು ನೀಡಬೇಕು ಎಂದು ರೋಹಿಣಿ ಸಿಂಧೂರಿ ತಿಳಿಸಿದರು.
94ಸಿ ನಲ್ಲಿ ಸಲ್ಲಿಕೆಯಾಗಿರುವ ಅರ್ಜಿ ಗಳ ತ್ವರಿತ ವಿಲೇವಾರಿ ಮಾಡಬೇಕು. ಜಾತಿ ಹಾಗೂ ಆದಾಯ ಪ್ರಮಾಣ ಪತ್ರ, ಸಾಮಾಜಿಕ ಭದ್ರತಾ ಯೋಜನೆಗಳಿಗೆ ಸಾರ್ವಜನಿಕರು ಅಲೆದಾಡುವಂತಾಗ ಬಾರದು. ಈ ಬಗ್ಗೆ ಅಧಿಕಾರಿಗಳು ಗಮನ ಹರಿಸಬೇಕು ಎಂದು ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು.

ರೆಕಾರ್ಡ್ ರೂಂಗಳನ್ನು ಸಮರ್ಪಕ ವಾಗಿ ನಿರ್ವಹಣೆ ಮಾಡಬೇಕು. ಬೀದಿ ಬದಿ ಮಾರಾಟಗಾರರಿಗೆ ಸೂಕ್ತ ಪರ್ಯಾಯ, ಶಾಶ್ವತ ಮಾರಾಟ ವ್ಯವಸ್ಥೆ ಗಳನ್ನು ಕಲ್ಪಿಸಬೇಕು. ಅಕ್ರಮ ಮದ್ಯ ಮಾರಾಟ ಸಂಪೂರ್ಣ ನಿಯಂತ್ರಿಸಬೇಕು ಎಂದು ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು.

ಸಾಲಮನ್ನಾ ಪ್ರಕ್ರಿಯೆಗೆ ರೈತರಿಂದ ಅಗತ್ಯವಿರುವ ಮಾಹಿತಿ ಶೇ.100 ರಷ್ಟು ಸಂಗ್ರಹಿಸಿ, ಗಣಕೀಕರಣಗೊಳಿಸಿ ಎಂದು ತಿಳಿಸಿದರು. ತಹಶೀಲ್ದಾರ್ ಮಾರುತಿ ಹಾಗೂ ವಿವಿಧ ಇಲಾಖಾ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

Translate »