ಮಾಜಿ ಪ್ರಧಾನಿ ದೇವೇಗೌಡ, ಸಿಎಂ ಕುಮಾರಸ್ವಾಮಿ ಅವರಿಗೆ ಸೆ.1ರಂದು ಬ್ರಾಹ್ಮಣ ಮಹಾಸಭಾದಿಂದ ಗೌರವ
ಮೈಸೂರು

ಮಾಜಿ ಪ್ರಧಾನಿ ದೇವೇಗೌಡ, ಸಿಎಂ ಕುಮಾರಸ್ವಾಮಿ ಅವರಿಗೆ ಸೆ.1ರಂದು ಬ್ರಾಹ್ಮಣ ಮಹಾಸಭಾದಿಂದ ಗೌರವ

August 30, 2018

ಮೈಸೂರು: ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ನಿಗಮ ಸ್ಥಾಪನೆಗೆ ಕಾರಣರಾದ ಮುಖ್ಯ ಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹಾಗೂ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಸೇರಿದಂತೆ ಹಲವರನ್ನು ಸೆಪ್ಟೆಂಬರ್ 1ರಂದು ಮಧ್ಯಾಹ್ನ 3.30 ಗಂಟೆಗೆ ಮೈಸೂರು ಜಿಲ್ಲಾ ಬ್ರಾಹ್ಮಣ ಮಹಾಸಭಾ ವತಿಯಿಂದ ಸನ್ಮಾ ನಿಸಲಾಗುವುದು ಎಂದು ಮಹಾಸಭಾದ ಜಿಲ್ಲಾಧ್ಯಕ್ಷ ಡಾ.ನಟರಾಜ್ ಜೋಯಿಸ್ ತಿಳಿಸಿದರು.

ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಅವರು ಈ ವಿಷಯ ತಿಳಿಸಿದರು. ಮೈಸೂರಿನ ಕೃಷ್ಣಮೂರ್ತಿಪುರಂ ಶಾರದಾವಿಲಾಸ ಶತಮಾನೋತ್ಸವ ಭವನದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ, ಸಚಿವರಾದ ಸಾ.ರಾ.ಮಹೇಶ್, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್, ವಿಶ್ರಾಂತ ಕುಲಪತಿ ಪ್ರೊ.ಕೆ.ಎಸ್.ರಂಗಪ್ಪ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಇನ್ನಿತರರನ್ನು ಗೌರವಿಸಲಾಗುವುದು ಎಂದು ಅವರು ಹೇಳಿದರು. ಅದೇ ದಿನ ತ್ರಿಮತಸ್ಥ ಬ್ರಾಹ್ಮಣ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ 2018ರ ಪ್ರತಿಭಾ ಪುರಸ್ಕಾರ ನಡೆಯಲಿದೆ. ಅಲ್ಲದೆ ಅಂದು ಖ್ಯಾತ ಉದ್ಯಮಿಗಳೂ, ಸಮಾಜ ಸೇವಕರು, ಬ್ರಾಹ್ಮಣ ಮುಖಂಡರು ಜೆಡಿಎಸ್‍ಗೆ ಸೇರ್ಪಡೆಯಾಗಲಿದ್ದಾರೆ. ಮಧ್ಯಾಹ್ನ 2ಕ್ಕೆ ಕಿರಗಸೂರು ಪುರುಷೋತ್ತಮ್ ಅವರಿಂದ ಸುಗಮ ಸಂಗೀತ ಕಾರ್ಯಕ್ರಮವಿದೆ ಎಂದರು. ಸುದ್ದಿಗೋಷ್ಠಿಯಲ್ಲಿ ಮಹಾಸಭಾ ಕಾರ್ಯದರ್ಶಿ ಎಂ.ಎಸ್. ಅನಂತಪ್ರಸಾದ್, ಜಿಲ್ಲಾ ಬ್ರಾಹ್ಮಣ ಮಹಿಳಾ ಮಂಡಳಿ ಅಧ್ಯಕ್ಷೆ ವಿಜಯಲಕ್ಷ್ಮಿ ಉಪಸ್ಥಿತರಿದ್ದರು.

Translate »