ತುಮಕೂರಿನಿಂದ ದೇವೇಗೌಡರ ಸ್ಪರ್ಧೆ
ಮೈಸೂರು

ತುಮಕೂರಿನಿಂದ ದೇವೇಗೌಡರ ಸ್ಪರ್ಧೆ

March 24, 2019

ಬೆಂಗಳೂರು: ಮಾಜಿ ಪ್ರಧಾನಿ, ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ. ದೇವೇಗೌಡರು ಕೊನೆಗೂ ತುಮಕೂರು ಲೋಕಸಭಾ ಕ್ಷೇತ್ರದಿಂದ ಕಣ ಕ್ಕಿಳಿಯುವುದಾಗಿ ಬಹಿರಂಗಪಡಿಸಿದ್ದಾರೆ.

ಸ್ವಯಂ ಪ್ರೇರಿತವಾಗಿ ಸುದ್ದಿಗಾರರಿಗೆ ತಮ್ಮ ಸ್ಪರ್ಧೆ ಮಾಹಿತಿ ನೀಡಿದ ಗೌಡರು ಚುನಾವಣೆಯಲ್ಲಿ ಸ್ಪರ್ಧಿಸು ತ್ತಾರೋ ಇಲ್ಲವೋ ಎಂಬ ಗೊಂದಲಕ್ಕೆ ತೆರೆ ಎಳೆದಿದ್ದಾರೆ.

ಗೌಡರು ಇತ್ತ ಅಧಿಕೃತ ಘೋಷಣೆ ಮಾಡುತ್ತಿದ್ದಂತೆ, ಅತ್ತ ತುಮಕೂರಿನಲ್ಲಿ ಹಾಲಿ ಕಾಂಗ್ರೆಸ್ ಸಂಸದ ಮುದ್ದ ಹನುಮೇಗೌಡ ತಾವು ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದಾಗಿ ಘೋಷಿಸಿದ್ದಾರೆ. ನಾನು ಸೋಮ ವಾರ ತುಮಕೂರು ಚುನಾವಣಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸುತ್ತೇನೆ ಎಂದು ದೇವೇಗೌಡರು ತಿಳಿಸಿ ದ್ದಾರೆ. ತಾವು ಸ್ಪರ್ಧಿಸುತ್ತಿದ್ದ ಹಾಸನ ಲೋಕಸಭಾ ಕ್ಷೇತ್ರ ವನ್ನು ಮೊಮ್ಮಗ ಪ್ರಜ್ವಲ್‍ಗೆ ಬಿಟ್ಟುಕೊಟ್ಟ ನಂತರ ಚುನಾ ವಣಾ ಕಣದಿಂದ ಹಿಂದೆ ಸರಿಯುವ ಆಲೋಚನೆ ಮಾಡಿದ್ದೆ. ದೆಹಲಿಯ ರಾಜಕಾರಣದಲ್ಲಿ ತಾವು ಇರಬೇಕೆಂದು ನನ್ನ ಹಿತೈಷಿಗಳು ಮಾಡಿದ ಸಲಹೆ ಮೇರೆಗೆ ತುಮ ಕೂರು ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆಗಿಳಿಯುತ್ತಿದ್ದೇನೆ. ವಿಜಾಪುರ ಕ್ಷೇತ್ರ ಹೊರತುಪಡಿಸಿ, ಉಳಿದ ಏಳು ಕ್ಷೇತ್ರಗಳಿಗೆ ಅಭ್ಯರ್ಥಿಗಳ ಆಯ್ಕೆ ಅಂತಿಮಗೊಂಡಿದೆ. ನಮ್ಮ ಪಕ್ಷದಿಂದ ಸ್ಪರ್ಧಿಸಿರುವ ಉಳಿದ ಎಲ್ಲಾ ಅಭ್ಯರ್ಥಿ ಗಳು ಸೋಮವಾರ ತಮ್ಮ ನಾಮಪತ್ರಗಳನ್ನು ಸಲ್ಲಿಸಲಿ ದ್ದಾರೆ ಎಂದರು. ಈ ಮಧ್ಯೆ ಸುದ್ದಿಗಾರರೊಂದಿಗೆ ಮಾತ ನಾಡಿದ ಹೆಚ್.ಡಿ. ಕುಮಾರಸ್ವಾಮಿ, ಸಂಸದ ಮುದ್ದ ಹನುಮೇಗೌಡ ತುಮಕೂರಿನಿಂದ ಬಂಡಾಯವಾಗಿ ಕಣಕ್ಕಿಳಿಯುತ್ತಿರುವುದು ನನಗೆ ಸಂಬಂಧಿಸಿದ್ದಲ್ಲ. ಕಾಂಗ್ರೆಸ್‍ನವರು ನಮಗೆ ಎಂಟು ಕ್ಷೇತ್ರ ನೀಡಿದ್ದಾರೆ. ಎಲ್ಲಾ ಕ್ಷೇತ್ರಗಳಲ್ಲೂ ಅಭ್ಯರ್ಥಿಗಳನ್ನು ಕಣಕ್ಕಿಳಿ ಸುತ್ತೇವೆ.

ಮುದ್ದಹನುಮೇಗೌಡರ ಬಂಡಾಯದ ವಿಚಾರ ಕಾಂಗ್ರೆಸ್‍ಗೆ ಸೇರಿದ್ದಾಗಿದೆ. ನಾನು ಮಂಡ್ಯದಲ್ಲಿ ಈಗಾಗಲೇ ಹೇಳಿದ್ದೇನೆ. ಯಾರಿಗೂ ಭಿಕ್ಷೆ ಬೇಡಲ್ಲ. ನನ್ನ ಸ್ವಾಭಿಮಾನಕ್ಕೆ ಧಕ್ಕೆ ಮಾಡಿಕೊಳ್ಳಲು ಅವಕಾಶ ನೀಡುವುದಿಲ್ಲ. ನಮಗೂ ಶಕ್ತಿ ಇದೆ. ನಮ್ಮ ಕಾರ್ಯಕರ್ತರಿದ್ದಾರೆ. ನಮ್ಮ ಕೆಲಸ ನಾವು ಮಾಡುತ್ತೇವೆ. ಕಾಂಗ್ರೆಸ್ ನವರು ಅವರ ಕೆಲಸ ಅವರು ಮಾಡಲಿ ಎಂದರು. ತುಮಕೂರು ಕ್ಷೇತ್ರದಲ್ಲಿ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಹೇಳಿಕೆ ನೀಡುವ ಮುನ್ನ ಮುದ್ದಹನುಮೇಗೌಡರು ತಮ್ಮ ಬೆಂಬಲಿಗರ ಸಭೆ ಕರೆದು, ಅವರ ಅಭಿಪ್ರಾಯ ಪಡೆದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನಗಾಗಿ ಅನೇಕ ಹೃದಯ ಗಳು ಮಿಡಿದಿವೆ. ಅವರಿಗೆ ನನ್ನ ಅಭಿನಂದನೆ ಸಲ್ಲಿಸುತ್ತಿದ್ದೇನೆ. 30 ವರ್ಷದಿಂದ ಸಾರ್ವಜನಿಕ ಜೀವನದಲ್ಲಿದ್ದೇನೆ. ನಾನು 10 ದಿನಗಳ ಹಿಂದೆ ಈ ಸಭೆ ನಡೆಸುತ್ತೇನೆ ಎಂಬ ಅರಿವಿರಲಿಲ್ಲ. ನೀತಿ ಸಂಹಿತೆ ಜಾರಿಗೆ ಬರುವವರೆಗೂ ಲೋಕಸಭೆ ಸದಸ್ಯನಾಗಿ ಕೆಲಸ ಮಾಡಿದೆ. ಒಂದೇ ಒಂದು ಕಾರಣ ಹೇಳಿಲ್ಲ. ನನ್ನನ್ನೇ ಯಾಕೆ ಬಲಿಪಶು ಮಾಡುತ್ತೀರಾ? ಎಂದು ಪ್ರಶ್ನಿಸಿದ ಅವರು, ಇನ್ನೂ ಕಾಲ ಮಿಂಚಿಲ್ಲ. ಒಂದು ಅವಕಾಶ ಕೊಡಿ. ನನಗೆ ಟಿಕೆಟ್ ಕೊಟ್ರೆ ಇತಿಹಾಸ ಸೃಷ್ಟಿಯಾಗುತ್ತದೆ. ಒಂದು ವೇಳೆ ಟಿಕೆಟ್ ಸಿಗದೇ ಇದ್ದರೆ ಜನತಾ ನ್ಯಾಯಾಲಯಕ್ಕೆ ಹೋಗುತ್ತೇನೆ. ಸೀಟ್ ಗೋಸ್ಕರ ಅಂಗಲಾಚುವ ಪರಿಸ್ಥಿತಿ ಬರಲಿದೆ ಅಂದು ನಿರೀಕ್ಷೆ ಮಾಡಿಲ್ಲ. ಯಾರ ಬಗ್ಗೆನೂ ಟೀಕೆ ಮಾಡಿಲ್ಲ. ಮನವಿ ಮಾಡಿದ್ದೇನೆ ಅಷ್ಟೇ ಎಂದರು. ಪಕ್ಷದ ವಿರುದ್ಧವಾಗಿ ನಾಮಪತ್ರ ಸಲ್ಲಿಸೋದು ಮೈತ್ರಿ ಧರ್ಮದ ವಿರುದ್ಧ ಅಲ್ಲವೆ ಎಂಬ ಪ್ರಶ್ನೆಗೆ ಆಕ್ರೋಶಗೊಂಡ ಗೌಡರು, ನಾನು ಹಾಲಿ ಸಂಸದ. ನನಗೆ ಟಿಕೆಟ್ ತಪ್ಪಿಸೋದು ಮೈತ್ರಿ ಧರ್ಮನಾ… ಅದು ಅವರಿಗೆ ಗೊತ್ತಾಗಬೇಕು ಎಂದು ಕಿಡಿಕಾರಿದರು.

Translate »