ರಾಮಸಮುದ್ರ ಹೌಸಿಂಗ್ ಬೋರ್ಡ್ ಕಾಲೋನಿ ಅಭಿವೃದ್ಧಿಗೆ ಕ್ರಮ
ಚಾಮರಾಜನಗರ

ರಾಮಸಮುದ್ರ ಹೌಸಿಂಗ್ ಬೋರ್ಡ್ ಕಾಲೋನಿ ಅಭಿವೃದ್ಧಿಗೆ ಕ್ರಮ

July 18, 2018

ಚಾಮರಾಜನಗರ:  ರಾಮಸಮುದ್ರ ಹೊಸ ಹೌಸಿಂಗ್ ಬೋರ್ಡ್ ಕಾಲೋನಿಯನ್ನು ಅಭಿವೃದ್ಧಿ ಪಡಿಸಲು ಹಾಗೂ ಇಲ್ಲಿನ ಸಮಸ್ಯೆಗಳನ್ನು ಬಗೆಹರಿ ಸಲು ಪ್ರಾಮಾಣಿಕ ಪ್ರಯತ್ನ ನಡೆಸುವು ದಾಗಿ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಸಿ.ಪುಟ್ಟರಂಗಶೆಟ್ಟಿ ಭರವಸೆ ನೀಡಿದರು.

ರಾಮಸಮುದ್ರ ಹೊಸ ಹೌಸಿಂಗ್ ಬೋರ್ಡ್ ಕಾಲೋನಿ ನಿವಾಸಿಗಳ ಕ್ಷೇಮಾ ಭಿವೃದ್ಧಿ ಸಂಘ ತಮ್ಮ ಬಡಾವಣೆಯಲ್ಲಿ ಇತ್ತೀಚೆಗೆ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.

ಈ ಬಡಾವಣೆಯಲ್ಲಿ ಇರುವ ಒಳಚರಂಡಿ ಸಮಸ್ಯೆ, ಕುಡಿಯುವ ನೀರಿನ ಸಮಸ್ಯೆ ಯನ್ನು ಬಗೆಹರಿಸಲು ಶ್ರಮಿಸುತ್ತೇನೆ. ಬೀದಿ ದೀಪಗಳನ್ನು ತಕ್ಷಣವೇ ಅಳವಡಿ ಸುವಂತೆ ಸಂಬಂಧಪಟ್ಟವರಿಗೆ ಸೂಚಿ ಸುತ್ತೇನೆ. ಆದಷ್ಟು ಬೇಗ ಬಡಾವಣೆಯಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪಿಸಲು ಶ್ರಮ ಕೈಗೊಳ್ಳಲಾಗುವುದು. ಇದಲ್ಲದೇ ನಗರಕ್ಕೆ ನಾಲ್ಕೈದು ಮಿನಿ ಬಸ್ ಗಳನ್ನು ನೀಡುವಂತೆ ಸಾರಿಗೆ ಸಚಿವ ತಮ್ಮಣ್ಣ ಅವರಲ್ಲಿ ಮನವಿ ಮಾಡಿದ್ದೇನೆ. ಅವರಿಂದ ಸಕಾರಾತ್ಮಕ ಪ್ರತಿಕ್ರಿಯೆ ಬಂದಿದ್ದು, ಬಸ್‍ಗಳು ಬಂದ ಕೂಡಲೇ ಈ ಬಡಾವಣೆಗೆ ಬಸ್ ಸಂಪರ್ಕ ಕಲ್ಪಿಸುವುದಾಗಿ ಸಚಿವರು ಭರವಸೆ ನೀಡಿದರು.

ಹೊಸ ಹೌಸಿಂಗ್ ಬೋರ್ಡ್ ಕಾಲೋನಿಯ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಹಾಗೂ ಪತ್ರಕರ್ತ ಪ್ರಕಾಶ್ ಬೆಲ್ಲದ್ ಮಾತನಾಡಿ, ನಮ್ಮ ಬಡಾವಣೆಯನ್ನು ನಗರಸಭೆ ಸಂಪೂರ್ಣ ಕಡೆಗಣಿಸಿದೆ. ಈ ಬಗ್ಗೆ ಗಮನ ಹರಿಸುವಂತೆ ಅವರು ಮನವಿ ಮಾಡಿದರು.

ಬಡಾವಣೆಯಲ್ಲಿ ನಾನಾ ಸಮಸ್ಯೆಗಳಿದ್ದು, ಅವುಗಳನ್ನು ಸಚಿವರು ಬಗೆಹರಿ ಸಬೇಕು. ಬಡಾವಣೆಯ ಸಮಗ್ರ ಅಭಿ ವೃದ್ಧಿಗೆ ವಿಶೇಷ ಪ್ಯಾಕೇಜ್ ನೀಡಬೇಕು ಎಂದು ಮನವಿ ಮಾಡಿದರು.

ಎಪಿಎಂಸಿ ಅಧ್ಯಕ್ಷ ಬಿ.ಕೆ.ರವಿಕುಮಾರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮುನ್ನ, ಜೆಡಿಎಸ್ ತಾಲೂಕು ಅಧ್ಯಕ್ಷ ಆಲೂರು ಮಲ್ಲು, ಸಂಘದ ಗೌರವ ಅಧ್ಯಕ್ಷ ಹೆಚ್.ಎಸ್. ಗಂಗಾಧರ್, ಉಪಾಧ್ಯಕ್ಷ ಸಿ.ಎನ್.ಪ್ರಕಾಶ್, ಕಾರ್ಯದರ್ಶಿ ಸುರೇಶ್, ಮುಖಂಡ ರಾದ ಶಿಕ್ಷಕ ನಾಗರಾಜು, ಪೃಥ್ವಿದಾಸ್ ಇತರರು ಉಪಸ್ಥಿತರಿದ್ದರು.

Translate »