ಸಮಗ್ರ ಕರ್ನಾಟಕದ ಅಭಿವೃದ್ಧಿಗೆ ಕಂಕಣಬದ್ಧ: ಸಿಎಂ ಕುಮಾರಸ್ವಾಮಿ
ಹಾಸನ

ಸಮಗ್ರ ಕರ್ನಾಟಕದ ಅಭಿವೃದ್ಧಿಗೆ ಕಂಕಣಬದ್ಧ: ಸಿಎಂ ಕುಮಾರಸ್ವಾಮಿ

December 2, 2018

ಹಾಸನ; ರಾಜ್ಯ ಸರ್ಕಾರ ಹಾಸನದ ಅಭಿವೃದ್ಧಿಗೆ ಮಾತ್ರ ಸೀಮಿತವಾಗದೇ ಸಮಗ್ರ ಕರ್ನಾಟಕದ ಅಭಿವೃದ್ಧಿಗೆ ಕಂಕಣಬದ್ದವಾಗಿದೆ ಎಂದು ಸಿ.ಎಂ ಕುಮಾರಸ್ವಾಮಿ ಹೇಳಿದರು.

ನಗರದ ಹೊಸ ಬಸ್ ನಿಲ್ದಾಣದ ಆವರಣ ದಲ್ಲಿ ಹಮ್ಮಿಕೊಳ್ಳಲಾಗಿದ್ದ 1865ಕೋಟಿ ರೂ ವೆಚ್ಚದ ವಿವಿಧ ರಾಷ್ಟ್ರೀಯ ಹೆದ್ದಾರಿ ಯೋಜನೆ ಗಳ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕೇಂದ್ರ ಹಾಗೂ ರಾಜ್ಯ ಸರ್ಕಾರದ ಸಹಯೋಗದಲ್ಲಿ 1865ಕೋಟಿ ರೂ ವೆಚ್ಚದ ವಿವಿಧ ರಸ್ತೆ ಕಾಮಗಾರಿಗೆ ಚಾಲನೆ ನೀಡಿರುವುದಕ್ಕೆ ನಿತಿನ್ ಗಡ್ಕರಿಗೆ ಧನ್ಯವಾದ ಸಲ್ಲಿಸುತ್ತೇನೆ, ಮಾಜಿ ಪ್ರಧಾನಿ ಹೆಚ್.ಡಿ,ದೇವೇಗೌಡ ಸಲ್ಲಿಸಿದ ಹಲವು ಉದ್ದೇಶಿತ ಅಭಿವೃದ್ಧಿ ಕಾಮಗಾರಿಗಳಿಗೆ ಕೇಂದ್ರ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸುತ್ತಿರುವುದಕ್ಕೆ ನಾವು ಋಣಿಯಾಗಿರುತ್ತೇವೆ, ಈಗಾಗಲೇ 24ಸಾವಿರ ಕೋಟಿ ರೂ ವೆಚ್ಚದಲ್ಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರ ಈಗಾಗಲೇ ಹಲವು ಕಾಮಗಾರಿಗಳಿಗೆ ಚಾಲನೆ ನೀಡಲಾಗಿದ್ದು, ಇನ್ನೂ ಹಲವು ಕೋಟ್ಯಾಂತರ ರೂ ಕಾಮಗಾರಿಗಳು ಸದ್ಯದಲ್ಲೇ ಪ್ರಾರಂಭವಾಗಲಿದೆ, ಕರ್ನಾಟಕ- ತಮಿಳುನಾಡಿನ ನಡುವೆ ಸಂಘರ್ಷಕ್ಕೆ ಕಾರಣವಾಗಿದ್ದ ಮೇಕೆದಾಟು ಯೋಜನೆಗೆ ಅಂಕಿತ ಹಾಕುವ ಮೂಲಕ ದೇವೇಗೌಡರ ಮನವಿಗೆ ನಿತಿತ್ ಗಡ್ಕರಿಯವರು ಸ್ಪದಿಂಸಿರುವುದು ಸ್ವಾಗತಾರ್ಹ, ಇತ್ತೀಚಿನ ದಿನಗಳಲ್ಲಿ ಸರ್ಕಾರ ಕೇವಲ ಹಾಸನಕ್ಕೆ ಸೀಮಿತವೆನ್ನುತ್ತಿದ್ದಾರೆ, ನಮ್ಮ ಅಭಿವೃದ್ಧಿ ಕಾರ್ಯಗಳು ಜಿಲ್ಲೆಗೆ ಮಾತ್ರ ಸೀಮಿತವಲ್ಲ, ರಾಜ್ಯ ಸರ್ಕಾರ ಸಮಗ್ರ ನಾಡಿನ ಅಭಿವೃದ್ಧಿಗೆ ರಾಜ್ಯಸರ್ಕಾರ ಕಂಕಣ ಬದ್ಧವಾಗಿದೆ ಎಂದರು.

ರಾಷ್ಟ್ರೀಯ ಹೆದ್ದಾರಿ ಯೋಜನೆಯ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆಗಾಗಿ ಸಿಎಂ ಕುಮಾರ ಸ್ವಾಮಿಯವರು ಕೇಂದ್ರ ಸಚಿವ ನಿತಿನ್ ಗಡ್ಕರಿ ಸೇರಿದಂತೆ ಹಲವು ಸಚಿವರು ಶಾಸಕರುಗಳು ಆಗಮಿಸಿದ್ದ ಹಿನ್ನೆಲೆಯಲ್ಲಿ ಅಗತ್ಯ ಪೆÇಲೀಸ್ ಭದ್ರತೆ ಕೈಗೊಳ್ಳಲಾಗಿತ್ತು, ಕಾರ್ಯಕ್ರಮಕ್ಕಾಗಿ ಹೊಸ ಬಸ್ ನಿಲ್ದಾಣದ ಸಮೀಪ ಭವ್ಯ ಸಭಾಂಗಣ ನಿರ್ಮಿಸಿ, ಭದ್ರತೆಗಾಗಿ 500 ಪೆÇಲೀಸ್ ಗೃಹರಕ್ಷಕ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು, ಕೇಂದ್ರ ಸಚಿವ ನಿತಿನ್ ಗಡ್ಕರಿ ಹಾಗೂ ಸಿಎಂ ಎಚ್ಡಿ ಕುಮಾರ ಸ್ವಾಮಿ ಬೆಂಗಳೂರಿನಿಂದ ಪ್ರತ್ಯೇಕ ಹೆಲಿಕಾಪ್ಟರ್‍ಗಳಲ್ಲಿ ಹಾಸನಕ್ಕೆ ಆಗಮಿಸಿದರು, ಹೊಸ ಬಸ್ ನಿಲ್ದಾಣದ ಸಮೀಪವೇ ಹೆಲಿಕಾಪ್ಟರ್ ಲ್ಯಾಂಡಿಂಗ್ ವ್ಯವಸ್ಥೆ ಮಾಡಲಾಗಿತ್ತು.

ಇನ್ನೂ ಸಂಪೂರ್ಣ ಕಾರ್ಯಕ್ರಮದ ಉಸ್ತುವಾರಿ ವಹಿಸಿದ್ದ ಉಸ್ತುವಾರಿ ಸಚಿವ ಹೆಚ್.ಡಿ.ರೇವಣ್ಣ ವೇದಿಕೆಯಲ್ಲೇ ಅತ್ತಿತ್ತ ಓಡಾಡುತ್ತ ಸಂಪೂರ್ಣ ಕಾರ್ಯಕ್ರಮ ಸುಸೂತ್ರವಾಗಿ ನಡೆಯುವಂತೆ ನೋಡಿಕೊಂಡರು.

Translate »