ಮೈಸೂರು, ಜೂ. 1(ಎಂಟಿವೈ)- ತಂಬಾಕು ಸೇವನೆಯಿಂದಾಗಿ ಆರೋಗ್ಯದ ಮೇಲಾಗುವ ದುಷ್ಪರಿಣಾಮ ಕುರಿತು ಜಿಲ್ಲೆಯಾದ್ಯಂತ ಜಾಗೃತಿ ಮೂಡಿಸಲು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಸಂಚಾರಿ ಜಾಗೃತ ವಾಹನಕ್ಕೆ ಚಾಲನೆ ನೀಡಲಾಯಿತು.
ಮೈಸೂರಿನ ನಜûರ್‍ಬಾದ್‍ನಲ್ಲಿರುವ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾ ಣಾಧಿಕಾರಿ ಕಚೇರಿ ಆವರಣದಲ್ಲಿ ಸೋಮ ವಾರ ಬೆಳಿಗ್ಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ, ಜಿಲ್ಲಾ ಸರ್ವೇ ಕ್ಷಣಾ ಘಟಕ ಹಾಗೂ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ವತಿಯಿಂದ ಆಯೋ ಜಿಸಿದ್ದ ವಿಶ್ವ ತಂಬಾಕು ರಹಿತ ದಿನಾ ಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರೋ ಗ್ಯಾಧಿಕಾರಿ ಡಾ.ಆರ್.ವೆಂಕಟೇಶ್ ಸಂಚಾರಿ ಜಾಗೃತಿ ವಾಹನಕ್ಕೆ ಚಾಲನೆ ನೀಡಿದರು.
ಬಳಿಕ ಮಾತನಾಡಿದ ಅವರು, ಇತ್ತೀ ಚಿನ ದಿನಗಳಲ್ಲಿ ತಂಬಾಕು ಸೇವನೆಯಿಂ ದಾಗಿ ವಿವಿಧ ಆರೋಗ್ಯ ಸಮಸ್ಯೆಗೆ ತುತ್ತಾ ಗುತ್ತಿದ್ದಾರೆ. ಯುವ ಜನತೆ ತಂಬಾಕು ಸೇವ ನೆಗೆ ಹೆಚ್ಚು ದಾಸರಾಗುವ ಮೂಲಕ ತಮ್ಮ ಆರೋಗ್ಯ ಹಾಳು ಮಾಡಿಕೊಳ್ಳುತ್ತಿದ್ದಾರೆ. ತಂಬಾಕು ಉತ್ಪನ್ನಗಳ ಸೇವನೆಯಿಂದಾ ಗುವ ದುಷ್ಪರಿಣಾಮಗಳು, ಸಾವು-ನೋವು ಗಳು ಮತ್ತು ವಿವಿಧ ಸಾಂಕ್ರಾಮಿಕ ರೋಗಕ್ಕೆ ತುತ್ತಾಗುವುದನ್ನು ತಡೆಗಟ್ಟಲು, ಜನರಿಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ವಿಶ್ವ ತಂಬಾಕು ರಹಿತ ದಿನ ಆಚರಿಸಲಾಗುತ್ತಿದೆ. ಈ ಕಾರ್ಯಕ್ರಮದ ಅಂಗವಾಗಿ ಮೈಸೂರು ಜಿಲ್ಲೆಯ ಜನರಿಗೆ ಅರಿವು ಮೂಡಿಸುವ ಸಲುವಾಗಿ ಮೊಬೈಲ್ ವ್ಯಾನ್‍ಗೆ ಚಾಲನೆ ನೀಡಲಾಗಿದೆ ಎಂದು ತಿಳಿಸಿದರು.
ಜಿಲ್ಲಾ ಸರ್ವೆಲನ್ಸ್ ಅಧಿಕಾರಿ ಡಾ.ಶಿವ ಪ್ರಕಾಶ್ ಮಾತನಾಡಿ, ಈ ವರ್ಷ `ಯುವ ಪೀಳಿಗೆಯನ್ನು ತಂಬಾಕು ಉದ್ಯಮಗಳ ಕುತಂತ್ರ ಹಾಗೂ ತಂಬಾಕು, ನಿಕೋಟಿನ್ ಬಳಕೆಯಿಂದ ರಕ್ಷಣೆ ಮಾಡುವುದು’ ಎಂಬ ಘೋಷಣೆಯೊಂದಿಗೆ ವಿಶ್ವ ತಂಬಾಕು ದಿನ ಆಚರಿಸಲಾಗುತ್ತಿದೆ. ಈ ಬಗ್ಗೆ ಯುವ ಸಮು ದಾಯ ಎಚ್ಚರವಹಿಸಬೇಕು. ತಮ್ಮ ವ್ಯಾಪಾರ ವಹಿವಾಟಿಗೆ ಹಲವು ಬಗೆಯ ಜಾಹೀ ರಾತು ನೀಡಿ ಯುವ ಜನರನ್ನು ಆಕರ್ಷಿ ಸುವಂತೆ ಮಾಡುತ್ತಾರೆ. ಅಲ್ಲದೆ ಹೊಸ ಹೊಸ ವಿಧಾನದ ಮೂಲಕ ತಂಬಾಕು ಸೇವನೆಗೆ ಪ್ರಚೋದನೆ ನೀಡುತ್ತಿವೆ. ಅವು ಗಳಲ್ಲಿ ಇ-ಸಿಗರೇಟ್, ಹೊಗೆ ರಹಿತ, ಸುವಾ ಸನೆ, ಪರಿಮಳಯುಕ್ತ ಸಿಗರೇಟ್ ಹಾಗೂ ಇನ್ನಿತರ ವಿಧಾನಗಳು ಸೇರಿವೆ. ಈ ತಂತ್ರ ಬಳಸಿ ಗರ್ಭಿಣಿಯರು, ಮಕ್ಕಳ ಹಾಗೂ ಯುವಕರನ್ನು ಆಕರ್ಷಿಸಲಾಗುತ್ತಿದೆ ಎಂದು ವಿಷಾದಿಸಿದರು.
ಮಕ್ಕಳು, ಗರ್ಭಿಣಿಯರು, ವಿವಿಧ ಆರೋಗ್ಯ ಸಮಸ್ಯೆ ಇರುವರು ಧೂಮ ಪಾನ ಮಾಡಲೇಬಾರದು. ಧೂಮಪಾನ ದಿಂದ ಕ್ಯಾನ್ಸರ್, ಹೃದಯ ಸಂಬಂಧಿ ಖಾಯಿಲೆ, ಶ್ವಾಸಕೋಶದ ರೋಗ ಕಾಣಿಸಿ ಕೊಳ್ಳುತ್ತದೆ. ಈ ಹಿನ್ನೆಲೆಯಲ್ಲಿ ಜಾಗೃತಿ ಕಾರ್ಯಕ್ರಮದಲ್ಲಿ ಕಟು ಎಚ್ಚರಿಕೆ ಸಂದೇಶ ಸಾರಲಾಗುತ್ತಿದೆ ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಸರ್ವೇ ಕ್ಷಣಾಧಿಕಾರಿ ಡಾ.ಶಿವಕುಮಾರ್, ಆರ್‍ಸಿಎಚ್ ಅಧಿಕಾರಿ ಡಾ.ರವಿ, ಜಿಲ್ಲಾ ರೋಗವಾಹಕ ನಿಯಂತ್ರಣಾಧಿಕಾರಿ ಡಾ.ಚಿದಂಬರ, ಜಿಲ್ಲಾ ಕಾಲರಾ ನಿಯಂತ್ರಣಾಧಿಕಾರಿ ಡಾ.ಉಮೇಶ್, ಡಿಹೆಚ್‍ಇಎ ಎಸ್. ಪ್ರಕಾಶ್, ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಪದಾಧಿಕಾರಿಗಳು, ಸಂಯೋಜ ಕರು ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿ ಕಾರಿಗಳು ಪಾಲ್ಗೊಂಡಿದ್ದರು.