ಸಿಗ್ಮಾ ಆಸ್ಪತ್ರೆಯಲ್ಲಿ ಡಯಾಲಿಸಿಸ್ ಕೇಂದ್ರ ಉದ್ಘಾಟನೆ
ಮೈಸೂರು

ಸಿಗ್ಮಾ ಆಸ್ಪತ್ರೆಯಲ್ಲಿ ಡಯಾಲಿಸಿಸ್ ಕೇಂದ್ರ ಉದ್ಘಾಟನೆ

September 10, 2018

ಮೈಸೂರು: ಮೈಸೂರಿನ ಸರಸ್ವತಿಪುರಂನಲ್ಲಿರುವ ಸಿಗ್ಮಾ ಆಸ್ಪತ್ರೆಯಲ್ಲಿ ಆರಂಭಿಸಲಾಗಿರುವ ಮೂತ್ರ ಸಂಬಂಧಿ ರೋಗಗಳ ಘಟಕ ಹಾಗೂ ಡಯಾ ಲಿಸಿಸ್ ಕೇಂದ್ರದ ಉದ್ಘಾಟನಾ ಸಮಾರಂಭ ಭಾನುವಾರ ನಡೆಯಿತು.

ಉದ್ಘಾಟನೆ ನೆರವೇರಿಸಿದ ಬೆಂಗಳೂರಿನ ಎಂ.ಎಸ್.ರಾಮಯ್ಯ ವೈದ್ಯಕೀಯ ಕಾಲೇಜಿನ ನೆಫ್ರಾಲಜಿ ವಿಭಾಗದ ಹಿರಿಯ ಪ್ರಾಧ್ಯಾಪಕ ಡಾ.ಕೆ.ಸಿ.ಗುರುದೇವ ಅವರು ಮಾತನಾಡಿ, ಮೂತ್ರ ಸಂಬಂಧಿ ಶಸ್ತ್ರಚಿಕಿತ್ಸೆ ಮೈಸೂರಿನಲ್ಲಿ ಎರಡು ದಶಕಗಳ ಹಿಂದೆ ಅಭಿವೃದ್ಧಿಗೊಂಡಿತು.

ಸಿಗ್ಮಾ ಆಸ್ಪತ್ರೆಯಲ್ಲಿ ತಜ್ಞ ವೈದ್ಯರು ಗಳಿದ್ದು ಉತ್ತಮವಾಗಿ ಸೇವೆ ನೀಡುತ್ತಿದ್ದಾರೆ ಎಂದು ಶ್ಲಾಘಿಸಿದರು. ತಜ್ಞ ವೈದ್ಯರಾದ ಡಾ.ಸೋಮಣ್ಣ ಮಾತ ನಾಡಿ, ಕಳೆದ ನಾಲ್ಕು ವರ್ಷಗಳಿಂದ ಸಿಗ್ಮಾ ಆಸ್ಪತ್ರೆಯಲ್ಲಿ ಅತ್ಯಂತ ಕ್ಲಿಷ್ಟ ಮೂತ್ರ ರೋಗಗಳ ಶಸ್ತ್ರ ಚಿಕಿತ್ಸೆಯನ್ನು ಯಶಸ್ವಿಯಾಗಿ ನಡೆಸಲಾಗಿದೆ. ಸೂಕ್ಷ್ಮ ರಂಧ್ರದ ಮೂಲಕ ನವಜಾತ ಶಿಶುಗಳಿಗೂ ಶಸ್ತ್ರ ಚಿಕಿತ್ಸೆ ನಡೆಸಿ, ಕಡಿಮೆ ಅವಧಿಯಲ್ಲಿ ಸಂಪೂರ್ಣವಾಗಿ ಗುಣಪಡಿಸಲಾಗಿದೆ ಎಂದು ತಿಳಿಸಿದರು.

ಡಯಾಲಿಸಿಸ್ ಘಟಕದ ಮುಖ್ಯಸ್ಥರೂ ಆದ ನೆಫ್ರಾಲಜಿ ತಜ್ಞ ಡಾ.ವಿಪಿನ್ ಕಾವೇರಪ್ಪ ಮಾತನಾಡಿ, ಅತ್ಯಾಧುನಿಕ ಚಿಕಿತ್ಸಾ ವಿಧಾನದಲ್ಲಿ ರೋಗಿಗಳಿಗೆ ಉತ್ತಮ ಸೇವೆ ನೀಡಲಾಗುತ್ತಿದೆ. ಕಿಡ್ನಿ ಕಸಿ ಚಿಕಿತ್ಸೆಯನ್ನು ಶೀಘ್ರದಲ್ಲೇ ಆರಂಭಿಸುವ ಧ್ಯೇಯವಿದೆ ಎಂದು ಹೇಳಿದರು.

ಸಿಗ್ಮಾ ಆಸ್ಪತ್ರೆ ನಿರ್ದೇಶಕರಾದ ಮೂತ್ರರೋಗ ಶಸ್ತ್ರ ಚಿಕಿತ್ಸಾತಜ್ಞ ಡಾ.ಕೆ.ಎಂ.ಮಾದಪ್ಪ, ಜ್ಞಾನಶಂಕರ್, ಡಾ.ರಾಜೇಶ್ವರಿ, ಡಾ.ಅಂಜಲಿ ಸಿದ್ದೇಶ್, ಡಾ.ಸಿದ್ದೇಶ್, ಶೈಲಾ ಮತ್ತಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Translate »