ದಿನೇಶ್ ಗುಂಡೂರಾವ್ ಕೆಪಿಸಿಸಿ ನೂತನ ಅಧ್ಯಕ್ಷ
ಮೈಸೂರು

ದಿನೇಶ್ ಗುಂಡೂರಾವ್ ಕೆಪಿಸಿಸಿ ನೂತನ ಅಧ್ಯಕ್ಷ

July 5, 2018

ಈಶ್ವರ ಖಂಡ್ರೆ ಕಾರ್ಯಾಧ್ಯಕ್ಷ, ಗಣೇಶ್ ಹುಕ್ಕೇರಿ ಮುಖ್ಯ ಸಚೇತಕ
ಬೆಂಗಳೂರು: ಕರ್ನಾ ಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷರನ್ನಾಗಿ ಮಾಜಿ ಸಚಿವ ದಿನೇಶ್ ಗುಂಡೂರಾವ್ ಅವರನ್ನು ಎಐಸಿಸಿ ನೇಮಕ ಮಾಡಿದೆ. ಸಚಿವ ಸ್ಥಾನ ವಂಚಿತರಾಗಿದ್ದ ಭಾಲ್ಕಿ ಶಾಸಕ ಈಶ್ವರ್ ಖಂಡ್ರೆ ಅವರನ್ನು ಕೆಪಿಸಿಸಿ ಕಾರ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿ ಸಮಾಧಾನ ಪಡಿಸಲಾಗಿದೆ. ವಿಧಾನಸಭೆಯ ಮುಖ್ಯಸಚೇತಕ ಸ್ಥಾನಕ್ಕೆ ಬೆಳಗಾವಿ ಜಿಲ್ಲೆಯ ಗಣೇಶ್ ಹುಕ್ಕೇರಿ ನೇಮಕಗೊಂಡಿದ್ದಾರೆ.

ರಾಷ್ಟ್ರೀಯ ಕಾಂಗ್ರೆಸ್‍ನಲ್ಲಿ ಬದಲಾವಣೆ ತರಲು ಹೊರಟಿರುವ ಪಕ್ಷದ ಅಧ್ಯಕ್ಷ ರಾಹುಲ್ ಗಾಂಧಿ ಯುವಕರಿಗೆ ಪಕ್ಷದ ಸಂಘಟನೆ ಯಲ್ಲಿ ತೊಡಗಿಸುವ ನಿಟ್ಟಿನಲ್ಲಿ ಕರ್ನಾ ಟಕದ ಎಲ್ಲಾ ರಾಜಕೀಯ ನೇಮಕಾತಿಯು ಯುವಕರ ಪಾಲಾಗಿದೆ. 8 ವರ್ಷಗಳಿಂದ ಡಾ.ಜಿ.ಪರಮೇಶ್ವರ್ ಅವರು ಕೆಪಿಸಿಸಿ ಅಧ್ಯಕ್ಷ ರಾಗಿ ಕೆಲಸ ಮಾಡಿದ್ದರು. ಅವರನ್ನು ಮೈತ್ರಿ ಸರ್ಕಾರದಲ್ಲಿ ಉಪಮುಖ್ಯಮಂತ್ರಿ ಹುದ್ದೆಗೆ ನೇಮಕ ಮಾಡಿದ ನಂತರ ಆ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು. ಅಧ್ಯಕ್ಷ ಸ್ಥಾನಕ್ಕಾಗಿ ಕೋಲಾರದ ಸಂಸದ ಕೆ.ಎಚ್. ಮುನಿಯಪ್ಪ, ಮಾಜಿ ಸಚಿವ ಎಚ್.ಕೆ. ಪಾಟೀಲ್, ರಾಜ್ಯ ಸಭಾ ಸದಸ್ಯ ಬಿ.ಕೆ. ಹರಿಪ್ರಸಾದ್, ಮಾಜಿ ಸಚಿವ ಟಿ.ಬಿ. ಜಯಚಂದ್ರ ಭಾರೀ ಲಾಬಿ ಮಾಡಿದ್ದರು. ಲಾಬಿಗೆ ಮಣ ಯದ ರಾಹುಲ್ ಗಾಂಧಿ ಕರ್ನಾಟಕದಲ್ಲೂ ಯುವಕರ ತಂಡ ಕಟ್ಟುವ ಉದ್ದೇಶದಿಂದ ಗುಂಡೂರಾವ್, ಖಂಡ್ರೆ, ಹಾಗೂ ಹುಕ್ಕೇರಿ ಅವರನ್ನು ನೇಮಕ ಮಾಡಿದ್ದಾರೆ. ಈ ನೇಮಕಾತಿಗೂ ಮುನ್ನ ಅಧ್ಯಕ್ಷ ಸ್ಥಾನ ಸೇರಿದಂತೆ ಕರ್ನಾಟಕ ಪ್ರದೇಶ ಕಾಂಗ್ರೆಸ್‍ನಲ್ಲಿ ಕೆಲ ಬದಲಾವಣೆ ತರುವ ಉದ್ದೇಶದಿಂದ ರಾಹುಲ್ ಚರ್ಚೆ ಮಾಡಿದ್ದು, ಹಿರಿಯ ಮುಖಂಡರ ದೂರ ವಿಟ್ಟು, ಸಚಿವರಾದ ಕೃಷ್ಣಭೈರೇಗೌಡ, ದಿನೇಶ್ ಗುಂಡೂರಾವ್, ಡಿ.ಕೆ. ಶಿವಕುಮಾರ್ ಹಾಗೂ ರಿಜ್ವಾನ್ ಹರ್ಷದ್ ಜೊತೆ ಸಮಾ ಲೋಚನೆ ಮಾಡಿದ ನಂತರ ನೇಮಕಾತಿಯ ಆದೇಶ ಹೊರಡಿಸಿದ್ದಾರೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಅಶೋಕ್ ಗೆಹ್ಲೋಟ್ ಅವರು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಇಬ್ಬರನ್ನು ನೇಮಕಗೊಳಿಸಿರುವ ಪತ್ರವನ್ನು ಮಾಧ್ಯಮಗಳಿಗೆ ಬಿಡುಗಡೆ ಮಾಡಿದ್ದಾರೆ.

ದಿನೇಶ್ ಗುಂಡೂರಾವ್ ಅವರು ಕುಟುಂಬ ಸಮೇತ ಶೃಂಗೇರಿಗೆ ತೆರಳಿದ್ದು ಶಾರದಾಂಬೆಗೆ ವಿಶೇಷ ಪೂಜೆ ಸಲ್ಲಿಸಿ, ಶ್ರೀ ಭಾರತೀ ತೀರ್ಥ ಶ್ರೀಗಳನ್ನು ಭೇಟಿಯಾಗಿ ಆಶೀರ್ವಾದ ಪಡೆದಿದ್ದಾರೆ. ಭಾಲ್ಕಿ ಶಾಸಕ ಈಶ್ವರ್ ಖಂಡ್ರೆ ಅವರು ಸಚಿವ ಸ್ಥಾನ ಸಿಗದೆ ಇದ್ದ ಕಾರಣ ತೀವ್ರ ಅಸಮಾಧಾನ ಹೊರ ಹಾಕಿದ್ದರು. ಅವರು ವೀರಶೈವ ಲಿಂಗಾಯತ ಸಮು ದಾಯದ ಪ್ರಬಲ ನಾಯಕರಾಗಿದ್ದಾರೆ. ದಿನೇಶ್ ಗುಂಡೂರಾವ್,

ಮಾಜಿ ಮುಖ್ಯಮಂತ್ರಿ ದಿವಂಗತ ಆರ್. ಗುಂಡೂರಾವ್ ಅವರ ದ್ವಿತೀಯ ಪುತ್ರ. ಇಂಜಿನಿಯರಿಂಗ್ ಪದವೀಧರರಾದ ದಿನೇಶ್, ತಂದೆಯಂತೆ ರಾಜಕೀಯಕ್ಕೆ ಇಳಿದು, ಯುವ ಕಾಂಗ್ರೆಸ್‍ನ ವಿವಿಧ ಅಂಗಗಳಲ್ಲಿ ಕೆಲಸ ಮಾಡಿ, ನಂತರ ಕೆಪಿಸಿಸಿಯ ಉಪಾಧ್ಯಕ್ಷರಾಗಿ ಇತ್ತೀಚಿನ ದಿನಗಳಲ್ಲಿ ಕಾರ್ಯಾಧ್ಯಕ್ಷರಾಗಿ ಸೇವೆ ಸಲ್ಲಿಸಿದರು.

ಅವರ ಕಾರ್ಯಸಂಘಟನೆಗೆ ಮೆಚ್ಚಿ ರಾಹುಲ್, ಅವರನ್ನು ಅಧ್ಯಕ್ಷರನ್ನಾಗಿ ಮಾಡಿದ್ದಾರೆ. 1999 ರಿಂದ ದಿನೇಶ್ ಗಾಂಧಿನಗರ ವಿಧಾನಸಭಾ ಕ್ಷೇತ್ರದಿಂದ ಸತತವಾಗಿ ನಾಲ್ಕು ಬಾರಿ ವಿಧಾನಸಭೆಗೆ ಆಯ್ಕೆಗೊಂಡಿದ್ದಾರೆ. ಸಿದ್ದರಾಮಯ್ಯ ಸಂಪುಟದಲ್ಲಿ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವರಾಗಿಯೂ ಕೆಲಸ ಮಾಡಿದ್ದು, ನಂತರ ಅವರನ್ನು ಪಕ್ಷ ಸಂಘಟನೆಗೆ ತೊಡಗಿಸಲಾಗಿತ್ತು.

Translate »